ಬೆಂಗಳೂರು | ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಏರಿಕೆ: ಸಚಿವ ಈಶ್ವರ ಖಂಡ್ರೆ

Date:

ಹುಲಿಗಳ ಸಂರಕ್ಷಣೆಗಾಗಿ ರಾಜ್ಯದಲ್ಲಿ ಕೈಗೊಂಡ ವಿವಿಧ ಕ್ರಮಗಳ ಫಲವಾಗಿ ವ್ಯಾಘ್ರಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ರಾಜ್ಯದಲ್ಲಿ 475ರಿಂದ 573 ಹುಲಿಗಳು ಇರಬಹುದು ಎಂದು ವಿಶ್ಲೇಷಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಹುಲಿದಿನಕ್ಕೆ ಎರಡು ದಿನಗಳ ಮುಂಚೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಹುಲಿ ಗಣತಿ ವಿವರ ಬಿಡುಗಡೆ ಮಾಡಿ ಅವರು ಮಾತನಾಡಿದರು. “ಪಶ್ಚಿಮ ಘಟ್ಟದ ಹೆಚ್ಚಿನ ಭಾಗ ಹೊಂದಿರುವ ಕರ್ನಾಟಕವು ಹುಲಿಗಳ ಸಂರಕ್ಷಣೆಯಲ್ಲಿ ಮುಂಚೂಣಿಯಲ್ಲಿದೆ. 2021-22ರ ಅವಧಿಯಲ್ಲಿ ಹುಲಿ ಗಣತಿಯನ್ನು ವೈಜ್ಞಾನಿಕವಾಗಿ ಹಾಗೂ ಸಮರ್ಪಕವಾಗಿ ನಡೆಸಲಾಗಿದೆ. ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶಗಳಾದ ನಾಗರಹೊಳೆ, ಬಂಡೀಪುರ, ಭದ್ರಾ, ಬಿಳಿಗಿರಿರಂಗನಾಥಸ್ವಾಮಿ ದೇವಸ್ಥಾನ ಹಾಗೂ ಕಾಳಿ ಅರಣ್ಯ ಪ್ರದೇಶ ಸೇರಿದಂತೆ 37 ವನ್ಯಜೀವಿ ಧಾಮಗಳಲ್ಲಿ 5,399 ಕ್ಯಾಮೆರಾ ಟ್ರಾಪ್‌ ಬಳಸಿ ಸಮೀಕ್ಷೆ ನಡೆಸಲಾಗಿದೆ. ಕ್ಯಾಮೆರಾ ಕಣ್ಣಿಗೆ 435 ಹುಲಿಗಳು ಬಿದಿದ್ದು, ರಾಜ್ಯದಲ್ಲಿ 475ರಿಂದ 573 ಹುಲಿಗಳು ಇರಬಹುದು ಎಂದು ವಿಶ್ಲೇಷಿಸಲಾಗಿದೆ” ಎಂದು ತಿಳಿಸಿದರು.

“ಪ್ರಪಂಚದಲ್ಲೇ ಮೊದಲ ಬಾರಿಗೆ ಹುಲಿ ಗಣತಿ ನಡೆದಿದ್ದು ಭಾರತದಲ್ಲಿ. ಜಾರ್ಖಂಡ್‌ನ ಪಲ್ಮಾವ್ ಹುಲಿ ರಕ್ಷಿತಾರಣ್ಯದಲ್ಲಿ ಪ್ರಾಯೋಗಿಕ ಗಣತಿ ನಡೆದಿತ್ತು. 1972ರಲ್ಲಿ ವನ್ಯಜೀವಿ ಕಾಯ್ದೆ ಜಾರಿಗೆ ಬಂದ ನಂತರ 1972ರಿಂದ ಹುಲಿ ಗಣತಿಯನ್ನು ಆರಂಭಿಸಲಾಯಿತು. ಪ್ರತಿ 4 ವರ್ಷಗಳಿಗೊಮ್ಮೆ ಹುಲಿ ಗಣತಿ ನಡೆಸಲಾಗುತ್ತಿದೆ” ಎಂದು ವಿವರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...