ಬೆಂಗಳೂರು | ಮೂಡಬಿದ್ರೆ ಕಾಲೇಜಿನ ವಿದ್ಯಾರ್ಥಿನಿಯ ಅತ್ಯಾಚಾರ: ಉಪನ್ಯಾಸಕರಿಬ್ಬರು ಸೇರಿ ಮೂವರ ಬಂಧನ

Date:

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಆರೋಪದಡಿ ಇಬ್ಬರು ಕಾಲೇಜು ಉಪನ್ಯಾಸಕರು ಸೇರಿದಂತೆ ಮೂವರು ಆರೋಪಿಗಳನ್ನು ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಬಂಧಿಸಿದ್ಧಾರೆ.

ಸಂತ್ರಸ್ತ ಯುವತಿಯ ಪೋಷಕರು ನೀಡಿದ ದೂರು ಆಧರಿಸಿ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಸಂದೀಪ್ ಹಾಗೂ ಸಹಚರ ಅನೂಪ್ ಎಂಬುವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ಧಾರೆ.

ಖಾಸಗಿ ಕಾಲೇಜಿನಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಉಪನ್ಯಾಸಕ ನೋಟ್ಸ್ ನೀಡುವ ನೆಪದಲ್ಲಿ ಆತ್ಮೀಯತೆ ಬೆಳೆಸಿಕೊಂಡಿದ್ದರು. ಬಳಿಕ ಮೊಬೈಲ್ ನಂಬರ್ ಪಡೆದು ಯುವತಿ ಜೊತೆ ಚಾಟ್ ಮಾಡಲು ಆರಂಭಿಸಿದ್ದರು. ಕ್ರಮೇಣ ಸ್ನೇಹ ಬೆಳೆಸಿ ಬಳಿಕ ಮಾರತಹಳ್ಳಿಯಲ್ಲಿರುವ ಸ್ನೇಹಿತನ ರೂಮ್​ಗೆ ಕರೆತಂದು ಅತ್ಯಾಚಾರವೆಸಗಿದ್ದರು. ಬಳಿಕ ಕೃತ್ಯದ ಬಗ್ಗೆ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ಧಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮೂವರು
ಆರೋಪಿಗಳಾದ ಅನೂಪ್, ಸಂದೀಪ್ ಹಾಗೂ ನರೇಂದ್ರ

ಕೆಲ ದಿನಗಳ ಬಳಿಕ ಜೀವಶಾಸ್ತ್ರ ವಿಷಯದ ಉಪನ್ಯಾಸಕನಿಗೆ ಇನ್ನೊಬ್ಬ ಉಪನ್ಯಾಸಕ ವಿಷಯ ತಿಳಿಸಿದ್ದರು. ಆ ಬಳಿಕ ಆ ಉಪನ್ಯಾಸಕ ಕೂಡ ಯುವತಿಯನ್ನ ಸಂಪರ್ಕಿಸಿ, ನಿನ್ನ ಫೋಟೊ ಹಾಗೂ ವಿಡಿಯೋ ಇದೆ ಎಂದು ಬೆದರಿಸಿದ್ದರು. ನಂತರ ವಿದ್ಯಾರ್ಥಿಯನ್ನು ಖಾಸಗಿ ಕಂಪನಿಯ ಉದ್ಯೋಗಿಯ ಮಾಲೀಕತ್ವದ ರೂಮ್​ಗೆ ಕರೆತಂದು ಅತ್ಯಾಚಾರ ಎಸಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಇಬ್ಬರು ಉಪನ್ಯಾಸಕರಿಗೆ ಕಾಮನ್ ಫ್ರೆಂಡ್ ಆಗಿದ್ದ ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಅನೂಪ್, ಯುವತಿಯನ್ನ ಉದ್ದೇಶಿಸಿ ಇಬ್ಬರೊಂದಿಗೆ ನೀನು ಮನೆಗೆ ಬಂದು ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ತನ್ನೊಂದಿಗೆ ಸಹಕರಿಸದಿದ್ದರೆ ವಿಡಿಯೋ ಹರಿಬಿಡುವುದಾಗಿ ಬೆದರಿಕೆವೊಡ್ಡಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ.

ಇದನ್ನು ಓದಿದ್ದೀರಾ? ದಲಿತ ಪ್ರಾಧ್ಯಾಪಕರಿಗೆ ತಾರತಮ್ಯ: ಬೆಂವಿವಿ ಕುಲಪತಿಯನ್ನು ಹಿಂತೆಗೆದುಕೊಳ್ಳಲು ಚಂದ್ರು ಪೆರಿಯಾರ್ ಆಗ್ರಹ

ಆರೋಪಿಗಳ ಹೇಯ ಕೃತ್ಯದ ಬಗ್ಗೆ ವಿದ್ಯಾರ್ಥಿನಿ ಮನನೊಂದಿದ್ದಳು. ಕೆಲ ದಿನಗಳ ಹಿಂದೆ ಕೃತ್ಯದ ಬಗ್ಗೆ ಪೋಷಕರಿಗೆ ಹೇಳಿ ಅಳಲು ತೋಡಿಕೊಂಡಿದ್ದರು. ಈ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ಯುವತಿ ಪೋಷಕರು ದೂರು ನೀಡಿದ್ದರು.

ಸಂತ್ರಸ್ತೆಯನ್ನ ಕೌನ್ಸೆಲಿಂಗ್​ ನಡೆಸಿ ಆಯೋಗವು ಮಾರತಹಳ್ಳಿ ಪೊಲೀಸರಿಗೆ ದೂರು ನೀಡಿತ್ತು. ದೂರು ಸಂಬಂಧ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...