ಬೆಂಗಳೂರು | ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಫೆಲೋಶಿಪ್ ಕಡಿತ; ಆದೇಶ ಹಿಂಪಡೆಯಲು ಆಗ್ರಹ

Date:

ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಫೆಲೋಶಿಪ್ ಕಡಿತಗೊಳಿಸಿರುವ ಆದೇಶ ಹಿಂಪಡೆದು, ಮೂಲ ಸ್ವರೂಪದಲ್ಲಿ ಯೋಜನೆಯನ್ನು ಮುಂದುವರೆಸುವಂತೆ ಎಸ್‌ಐಒ ಕರ್ನಾಟಕ ಆಗ್ರಹಿಸಿದೆ.

ಫೆಲೋಶಿಪ್‌ ಕಡಿತವನ್ನು ಖಂಡಿಸಿ ಎಸ್‌ಐಒ ಕರ್ನಾಟಕದ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಪೀರ್ ಲಟಗೇರಿ ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. “ವಿಶ್ವವಿದ್ಯಾಲಯಗಳಲ್ಲಿ ಅಭ್ಯಸಿಸುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಎಂಫಿಲ್ ಮತ್ತು ಪಿಹೆಚ್‌ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಜೆಆರ್‌ಎಫ್ ಮಾದರಿಯಲ್ಲಿ ಎಂಫಿಲ್ ಕೋರ್ಸಿಗೆ 2 ವರ್ಷದ ಅವಧಿಗೆ ಮತ್ತು ಪಿಹೆಚ್‌ಡಿ ಕೋರ್ಸಿಗೆ 3 ವರ್ಷದ ಅವಧಿಗೆ  ಮಾಹೆಯಾನ ₹25,000 ನೀಡಲಾಗುತ್ತಿದ್ದ ಫೆಲೋಶಿಪ್ ಮೊತ್ತವನ್ನು ಕಡಿತಗೊಳಿಸಿ ಹೊರಡಿಸಲಾದ ಹೊಸ ಆದೇಶದ ಪ್ರಕಾರ 2022-23ರ ಸಾಲಿನ ಎಂಫಿಲ್ ವಿದ್ಯಾರ್ಥಿಗಳಿಗೆ 2 ವರ್ಷದ ಅವಧಿಗೆ ₹8,000 ಮತ್ತು ಪಿಹೆಚ್‌ಡಿ ವಿದ್ಯಾರ್ಥಿಗಳಿಗೆ 3 ವರ್ಷದ ಅವಧಿಗೆ ₹10,000 ನೀಡುವುದಾಗಿ ತಿಳಿಸಿರುವುದು ವಿದ್ಯಾರ್ಥಿ ವಿರೋಧಿ ನಡೆಯಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಿದ್ದುಪಡಿಯಾದ ಹೊಸ ಸರ್ಕಾರಿ ಸೇರ್ಪಡೆ ಆದೇಶ ಸಂಖ್ಯೆ- ಎಂಡಬ್ಲ್ಯೂಡಿ 198 ಎಂಡಿಎಸ್‌ 2022  ಬೆಂಗಳೂರು. 2022 ಜೂನ್‌ 28ರ ಅನ್ವಯ 2020-21ನೇ ಸಾಲಿನಲ್ಲಿ ನೋಂದಣಿಯಾಗಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ 2021-22 ನೇ ಸಾಲಿನಿಂದ ಎಂಫಿಲ್ ವಿದ್ಯಾರ್ಥಿಗಳಿಗೆ ಗರಿಷ್ಠ 1 ವರ್ಷ ಮತ್ತು ಪಿಹೆಚ್‌ಡಿ ವಿದ್ಯಾರ್ಥಿಗಳಿಗೆ ಗರಿಷ್ಠ 2 ವರ್ಷ ಮಾಹೆಯಾನ ₹25000 ಫೆಲೋಶಿಪ್ ನೀಡುವ ನಿರ್ಧಾರವು ಮೂರು ವರ್ಷದವರೆಗಿದ್ದ ಫೆಲೋಶಿಪ್ ಅವಧಿಯನ್ನು 2 ವರ್ಷಕ್ಕೆ ಇಳಿಸುವ ಮೂಲಕ ವಿದ್ಯಾರ್ಥಿಗಳನ್ನು ಒಂದು ವರ್ಷದ ಫೆಲೋಶಿಪ್‌ನಿಂದ ವಂಚಿತಗೊಳಿಸುವುದಾಗಿದೆ. ಇದರಿಂದ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಿಹೆಚ್‌ಡಿ ಪದವಿ ಅಧ್ಯಯನ ಮಾಡಿ ಗುಣಮಟ್ಟದ ಸಂಶೋಧನಾ ಪ್ರಬಂಧ ಮಂಡಿಸಲು ಯುಜಿ‌ಸಿ ನಿಯಮಾವಳಿಗಳ ಪ್ರಕಾರ ಕೋರ್ಸ್ ಪೂರ್ಣಗೊಳಿಸಲು ಕನಿಷ್ಠ 3 ರಿಂದ 5 ವರ್ಷಗಳ ಕಾಲಮಿತಿ ಇರುತ್ತದೆ. ಇದು ಸ್ವತಃ ಯುಜಿಸಿಯ ಪಿಹೆಚ್‌ಡಿ ಮತ್ತು ಎಂಫಿಲ್ ನಿಯಮಾವಳಿಗಳಿಗೆ ವಿರುದ್ಧವಾಗಿದೆ.

ತಿದ್ದುಪಡಿಯಾದ ಈ ಹೊಸ ಸರ್ಕಾರಿ ಆದೇಶವು 2022-23ನೇ ಸಾಲಿನಲ್ಲಿ ನೋಂದಣಿಯಾಗಿ ಪ್ರವೇಶಾತಿ ಪಡೆದಿರುವ ಹೊಸ ವಿದ್ಯಾರ್ಥಿಗಳಿಗೆ ಅನ್ವಯಿಸಲಾಗಿದ್ದು, ಕೋರ್ಸಿಗೆ ತಗುಲುವ ವೆಚ್ಚಕ್ಕೆ ಸಂಪೂರ್ಣ ಫೆಲೋಶಿಪ್ ಅವಲಂಬಿಸಿದ್ದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಇದು ಆಘಾತ ನೀಡಿದೆ.

ಈ ಹಿಂದಿನ ಕಾಂಗ್ರೆಸ್ ಸರ್ಕಾರದ 2016-17ರ ಅವಧಿಯಲ್ಲಿ ಜಾರಿಯಾಗಿದ್ದ ಯೋಜನೆಯನ್ನು ಹಿಂದಿನ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ನಿಲ್ಲಿಸುವ ಪ್ರಯತ್ನ ನಡೆಸಿ ಫೆಲೋಶಿಪ್ ಮೊತ್ತವನ್ನು ಕಡಿತಗೊಳಿಸಿತ್ತು. ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಯೋಜನೆಯನ್ನು ಮುಂದುವರೆಸಿತ್ತು. ಇದೀಗ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವು ಬಿಜೆಪಿಯವರ ಉದ್ದೇಶವನ್ನು ಪೂರ್ಣಗೊಳಿಸುವ ಹಾದಿಯಲ್ಲಿ ಸಾಗುತ್ತಿರುವುದು ಸಮುದಾಯಕ್ಕೆ ಮತ್ತು ಸಾಮಾಜಿಕ ನ್ಯಾಯಕ್ಕೆ ಮಾಡುತ್ತಿರುವ ದ್ರೋಹವಾಗಿದೆ.

ಅಲ್ಪಸಂಖ್ಯಾತರ ಸಮುದಾಯದಲ್ಲಿ ಉನ್ನತ ಶಿಕ್ಷಣದಲ್ಲಿ ದಾಖಲಾತಿ ಪಡೆಯುವುದೇ ವಿರಳ ಇರುವ ಸಂದರ್ಭದಲ್ಲಿ ಅದರಲ್ಲೂ ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ಸಂಶೋಧನಾ ಕ್ಷೇತ್ರದಲ್ಲಿದ್ದು, ಇದೀಗ ಅವರಿಗೆ ಆರ್ಥಿಕವಾಗಿ ನೆರವಾಗುವ ಮೂಲಕ ಅಧ್ಯಯನ ಪೂರ್ಣಗೊಳಿಸಲು ಪ್ರೋತ್ಸಾಹಿಸಬೇಕಾದ ಸರ್ಕಾರವೇ ಸಹಾಯಧನದ ಮೊತ್ತ ಮತ್ತು ಅವಧಿಯನ್ನು ಕಡಿತಗೊಳಿಸಿರುವುದು ಖೇದಕರ.

ವಿಜಯನಗರದ ಜಿಲ್ಲೆಯ ಅಧೀನದಲ್ಲಿ ಬರುವ ಬಹುತೇಕ ಸಂಶೋಧನಾ ವಿದ್ಯಾರ್ಥಿಗಳಿಗೆ 2021 ರಿಂದ ಈವರೆಗೂ ಸಕಾಲಕ್ಕೆ ಫೆಲೋಶಿಪ್ ನೀಡದೆ ಸತಾಯಿಸಲಾಗುತ್ತಿದೆ‌. ಇದರಿಂದ ಬೇಸತ್ತ ಅಭ್ಯರ್ಥಿಗಳು ಸಾಲ ಪಡೆದು ಸಂಶೋಧನಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ‌. ಇದೇ ರೀತಿ ಅನೇಕ ಜಿಲ್ಲೆಯ ವಿದ್ಯಾರ್ಥಿಗಳು ಫೆಲೋಶಿಪ್‌ಗಾಗಿ ಅಲೆದಾಡುವ ದುಃಸ್ಥಿತಿ ಉಂಟಾಗಿದೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಎರಡು ದಶಕಗಳಿಂದ ವಾಸ; ಹಕ್ಕುಪತ್ರಕ್ಕೆ ಹರಸಾಹಸ

ರಾಜ್ಯದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸರ್ಕಾರಿ ಆದೇಶ ಸಂಖ್ಯೆ: ಎಂಡಬ್ಲ್ಯೂಡಿ 462 ಎಂಡಿಎಸ್‌ 2016, 2017ರ ಜನವರಿ 24ರ ನಿಯಮಾವಳಿಗಳನ್ನು ಅನ್ವಯಿಸಿ 2016-17ರ ಯೋಜನೆಯ ಪ್ರಾರಂಭಿಕ ಅಧಿಸೂಚನೆಯಂತೆ ಯಥಾವತ್ತಾಗಿ ಫೆಲೋಶಿಪ್ ಮರು ಜಾರಿಗೊಳಿಸಬೇಕು ಮತ್ತು ಪೂರ್ಣಕಾಲಿಕ ದಾಖಲಾತಿ ಪಡೆದು ಈಗಾಗಲೇ ಅರ್ಜಿ ಸಲ್ಲಿಸಿ ಸಂಶೋಧನೆ ನಡೆಸುತ್ತಿರುವ ಅಭ್ಯರ್ಥಿಗಳಿಗೂ ಅರ್ಜಿ ಸಲ್ಲಿಸಿದಾಗಿನಿಂದ ಪೂರ್ವ ಅನ್ವಯವಾಗುವಂತೆ ಫೆಲೋಶಿಪ್ ನೀಡಬೇಕೆಂದು ಒತ್ತಾಯಿಸಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...