ಬೆಂಗಳೂರು | ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ವೇಗ ಸಿಕ್ಕಿದೆ: ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್

Date:

ಬೆಂಗಳೂರು ನಗರದಲ್ಲಿನ ರಸ್ತೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಬೆಂಗಳೂರು ಕೇಂದ್ರ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಚುರುಕಿನಿಂದ ಕಾರ್ಯನಿರ್ವಹಿಸುತ್ತಿದ್ದು, ಈ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಉತ್ತಮ ರಸ್ತೆಗಳನ್ನಾಗಿಸಲು ಕ್ರಮ ವಹಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದರು.

ಕಳೆದ 2 ದಿನದಲ್ಲಿ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಗುಂಡಿ/ಪ್ಯಾಚ್ ವರ್ಕ್ ಹಾಗೂ ಡಾಂಬರೀಕರಣ, ಸಿಸಿ ರಸ್ತೆ ಕಾಮಗಾರಿ ನಿರ್ವಹಿಸಿದ ರಸ್ತೆಗಳ ವಿವರ ಹೀಗಿದೆ…

ಹಲಸೂರು ಗೇಟ್ ಪೊಲೀಸ್ ಠಾಣೆ ಮುಂಭಾಗದ ರಸ್ತೆ, ಮಿಷನ್ ರಸ್ತೆ, ಕೆ.ಜಿ. ರಸ್ತೆ, ಜಯಮಹಲ್ ರಸ್ತೆ, ರಿಚ್ಮಂಡ್ ರಸ್ತೆ, ಕಾಕ್ ಬರ್ನ್ ರಸ್ತೆ, ಹೆಚ್.ಕೆ.ಪಿ. ರಸ್ತೆ, ಸೇಂಟ್ ಜಾನ್ಸ್ ಚರ್ಚ್ ರಸ್ತೆ, ಅಲಿ ಆಸ್ಕರ್ ರಸ್ತೆ, ಡಿಕೆನ್ಸನ್ ರಸ್ತೆ, ಕುಮಾರ ಕೃಪ ರಸ್ತೆ, ಮೈಸೂರು ರಸ್ತೆ, ಸುಂಕೇನಹಳ್ಳಿ, ಗವಿಪುರಂ ರಸ್ತೆ, ಬಸವನಗುಡಿ ರಸ್ತೆ, ಗಾಂಧಿ ಬಜಾರ್ ಸುತ್ತಮುತ್ತಲಿನ ರಸ್ತೆ, ಜೀವನ್ ಭೀಮಾನಗರದ ಜಿ.ಎಂ. ಪಾಳ್ಯ ಸುತ್ತಮುತ್ತಲಿನ ರಸ್ತೆಗಳಿಗೆ ಕಾಂಕ್ರೀಟ್ ಹಾಕಿ ರಸ್ತೆಗಳ ಅಭಿವೃಧ್ಧಿಗೆ ಕ್ರಮ ವಹಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಚಿಕ್ಕಪೇಟೆ ವಿಭಾಗದ ವತಿಯಿಂದ ಹೊಂಬೇಗೌಡ ನಗರದ ಬಿಟಿಎಸ್ ಮುಖ್ಯ ರಸ್ತೆಯ ನಾರಾಯಣಸ್ವಾಮಿ ಗಾರ್ಡನ್, ಇಂದಿರಾ ಕ್ಯಾಂಟೀನ್ ಅಕ್ಕಪಕ್ಕದಲ್ಲಿ, ಶಾಂತಿನಗರ ವಿಭಾಗದಿಂದ ಬನ್ನೇರುಘಟ್ಟ ರಸ್ತೆಯ ಬೃಹತ್ ನೀರುಗಾಲುವೆಯಿಂದ ಹೊಸೂರು ಮುಖ್ಯ ರಸ್ತೆವರೆಗೆ ಎರಡೂ ಬದಿಗಳಲ್ಲಿ, ಸಿವಿ. ರಾಮನ್ ನಗರ ವಿಭಾಗದಿಂದ ಫಿಲಿಪ್ಸ್ ಮಿಲೇನಿಯಂ ನಿಂದ ಸ್ವಾಮಿ ವಿವೇಕಾನಂದ ಮೆಟ್ರೋ ಸ್ಟೇಷನ್ ವರೆಗೆ ಎರಡು ಬದಿಗಳಲ್ಲಿ, ಸ್ವಾಮಿ ವಿವೇಕಾನಂದ ಮೆಟ್ರೋ ಸ್ಟೇಷನ್ ನಿಂದ ಟಿನ್ ಫ್ಯಾಕ್ಟರಿ ವರೆಗೆ ಸ್ವಚ್ಛತೆ ಕಾರ್ಯ ಕೈಗೊಳ್ಳಲಾಗಿದೆ.

ರಸ್ತೆಯ ಎರಡೂ ಬದಿಗಳಲ್ಲಿನ ಹಸಿ ಕಸ, ಒಣ ಕಸ, ಪ್ಲಾಸ್ಟಿಕ್, ಅನುಪಯುಕ್ತ ಸೋಫಾ, ಫರ್ನಿಚರ್ ಗಳು ಇತ್ಯಾದಿ ತ್ಯಾಜ್ಯವನ್ನು ತೆರವುಗೊಳಿಸಿ ನಗರದಲ್ಲಿ ಸ್ವಚ್ಛತೆ ಮತ್ತು ಸುಂದರೀಕರಣಕ್ಕೆ ಆದ್ಯತೆ ನೀಡಲಾಗಿದೆ.

ಇದನ್ನೂ ಓದಿ: ಈ ದಿನ ಸಂಪಾದಕೀಯ | ಸಂಘಪರಿವಾರದ ಹುನ್ನಾರಗಳನ್ನು ಅರಿತ ದಲಿತರು

ಪಾದಚಾರಿಗಳ ಒತ್ತುವರಿ ತೆರವು: ಸಾಮೂಹಿಕ ಸ್ವಚ್ಛತೆ ಕಾರ್ಯದ ಸಂದರ್ಭದಲ್ಲಿ ರಸ್ತೆ ಬದಿಗಳಲ್ಲಿ ಪಾದಚಾರಿಗಳ ಮೇಲೆ ಅನಧಿಕೃತವಾಗಿ ಅಳವಡಿಸಲಾಗಿದ್ದ ಪೆಟ್ಟಿ ಅಂಗಡಿಗಳನ್ನು, ಇನ್ನಿತರೆ ರೀತಿಯ ಒತ್ತುವರಿಗಳನ್ನು ಸ್ಥಳೀಯ ಪೊಲೀಸರ ನೆರವಿನಿಂದ ತೆರವುಗೊಳಿಸಲಾಗಿದೆ.

ಮುಖ್ಯ ಅಭಿಯಂತರರುಗಳಾದ ಸುಗುಣ ಮತ್ತು ವಿಜಯಕುಮಾರ್ ಹರಿದಾಸ್ ರವರ ನೇತೃತ್ವದಲ್ಲಿ ನಡೆದ ಸ್ವಚ್ಛತೆ ಕಾರ್ಯದಲ್ಲಿ ಆಯಾಯ ವಿಭಾಗಗಳ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ಯಾಂಗಮೆನ್ ಗಳು, ಮೇಸ್ತ್ರೀಗಳು, ಪೌರಕಾರ್ಮಿಕರು, ಇತರೆ ಸಿಬ್ಬಂದಿಗಳು ಮುತುವರ್ಜಿಯಿಂದ ಸ್ವಚ್ಛತೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು ಎಂದು ಪಾಲಿಕೆಯು ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...