ಬೆಂಗಳೂರು | ರೂಪ ಹಾಸನ ಬರೆದ ‘ಭೂಮ್ತಾಯಿಯ ಕಕ್ಷೆಯಲಿ ಪಕ್ಷಿಯಾಗಿ’ ಪುಸ್ತಕ ಬಿಡುಗಡೆ

Date:

ಜನ ಪ್ರಕಾಶನ, ಬೆಂಗಳೂರು ವಿಜ್ಞಾನ ವೇದಿಕೆ ಹಾಗೂ ಬೆಂಗಳೂರು ಸಮಾಜ ವಿಜ್ಞಾನ ವೇದಿಕೆಯು ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೂಪ ಹಾಸನ ರಚನೆಯ ‘ಭೂಮ್ತಾಯಿಯ ಕಕ್ಷೆಯಲಿ ಪಕ್ಷಿಯಾಗಿ’ ಕೃತಿ ಬಿಡುಗಡೆಗೊಳಿಸಲಾಯಿತು.

ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್.ಪುಷ್ಪಾ, ಪುಸ್ತಕದಲ್ಲಿ ಜಲ ಸರಂಕ್ಷಣೆ, ಪರಿಸರ ರಕ್ಷಣೆ ಕುರಿತ ಮಾಹಿತಿ ನೀಡಲಾಗಿದೆ. ಮಳೆ ಬರಬೇಕಾದಾಗ ಬರುತ್ತಿಲ್ಲ. ಯಾವ ಕಾಲಕ್ಕೆ ಏನು ಆಗಬೇಕೋ ಅದು ಆಗುತ್ತಿಲ್ಲ. ಕಾರ್ಖಾನೆಗಳ ಕಲುಷಿತ ನೀರನ್ನು ನದಿ, ಕೆರೆಗಳಿಗೆ ಬಿಡುತ್ತಿರುವುದರಿಂದ ಜಲಚರಗಳು ಸಾಯುತ್ತಿವೆ. ಈ ನೀರನ್ನು ಕುಡಿದ ಮನುಷ್ಯನ ಆರೋಗ್ಯ ಹದಗೆಡುತ್ತಿದೆ. ದುರಾಸೆ ಪ್ರಾಕೃತಿಕ ಸಂಪತ್ತಿನ ನಾಶಕ್ಕೆ ಕಾರಣವಾಗುತ್ತಿದ್ದು, ‘ಮಳೆ-ಬೆಳೆ’ ಎಂಬ ಜೋಡಿ ಪದವನ್ನು ಬಳಸಲು ಸಾಧ್ಯವಾಗದ ಹಂತಕ್ಕೆ ತಲುಪಿದ್ದೇವೆ ಎಂದು ವಿಷಾದಿಸಿದರು.

ಬುಕ್3

‘ಸಹಜ ಸಾಗುವಳಿ’ ಸಂಪಾದಕಿ ವಿ.ಗಾಯತ್ರಿ ಮಾತನಾಡಿ, ಪರಿಸರದಲ್ಲಿ ಅಸಮತೋಲನ ಯಾಕಾಗಿ ಆಗುತ್ತಿವೆ ಎಂಬ ಪ್ರಶ್ನೆಗಳು ಜನರಲ್ಲಿ ಉದ್ಭವಿಸಬೇಕಿದೆ. ಪ್ರಶ್ನಿಸುವ ಮನೋಭಾವ ಹೊಸ ತಲೆಮಾರಿನ ಜನರಿಂದ ವ್ಯಕ್ತವಾದಾಗ ಆಳುವ ಸರ್ಕಾರಗಳು ಪರಿಸರ ಉಳಿಸುವ ಕ್ರಮದ ಬಗ್ಗೆ ಚಿಂತಿಸುತ್ತವೆ. ಪ್ರಸ್ತುತ ಸನ್ನಿವೇಶದಲ್ಲಿ ಪ್ರಕೃತಿಯ ಕಾಳಜಿ ಹೊಂದಿರುವ ಜನಾಂಗದ ಅಗತ್ಯವಿದೆ. ಪರಿಸರದಲ್ಲಿ ಅಸಮತೋಲನಕ್ಕೆ ಕಾರಣಗಳೇನು, ಮನುಷ್ಯನ ಲಾಭಕೋರತನ, ಪರಿಸರದ ಸಮತೋಲನ ಉಳಿಸಿಕೊಂಡು ಹೇಗೆ ಬದುಕಬಹುದು ಇತ್ಯಾದಿ ಚಿಂತನೆಗಳಿಗೆ ‘ಭೂಮ್ತಾಯಿಯ ಕಕ್ಷೆಯಲಿ ಪಕ್ಷಿಯಾಗಿ’ ಕೃತಿಯಲ್ಲಿ ಉತ್ತರವಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಸರ ತಜ್ಞ ಅ.ನ.ಯಲ್ಲಪ್ಪರೆಡ್ಡಿ, “ನಮ್ಮ ದೇಶದಲ್ಲಿ ಅಭಿವೃದ್ಧಿ ಪರ ಹಾಗೂ ವಿರೋಧ ಎಂಬ ವರ್ಗ ಸೃಷ್ಟಿಯಾಗಿದೆ. ಪರಿಸರ ಚಳುವಳಿಗಾರರು ಎಂದಾಕ್ಷಣ ಅಭಿವೃದ್ಧಿ ವಿರೋಧಿಗಳು ಎಂಬ ಪಟ್ಟ ಕಟ್ಟಲಾಗುತ್ತಿದೆ. ಇನ್ನು ಹೆಚ್ಚಿನ ಪ್ರಮಾಣದಲ್ಲಿ ಪರಿಸರ ನಾಶಕ್ಕೆ ಕಾರಣವಾಗಿರುವ ದೊಡ್ಡ ದೊಡ್ಡ ಅಂತಾರಾಷ್ಟ್ರೀಯ ಕಂಪನಿಗಳು, ಇಂದು ಸಿಎಸ್‌ಆ‌ರ್ ನಿಧಿ ಮೂಲಕ ಪ್ರಕೃತಿ ಉಳಿಸುವ ಚಟುವಟಿಕೆ ಕೈಗೊಳ್ಳುತ್ತಿದ್ದಾರೆ. ಎಲ್ಲರ ಸ್ವತ್ತಾಗಿದ್ದ ಪ್ರಕೃತಿ, ಸರ್ಕಾರದ ಸ್ವತ್ತಾದ ಪರಿಣಾಮ ಪರಿಸರ ನಾಶ ಹೆಚ್ಚಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

“ಅಭಿವೃದ್ಧಿಯ ಹೆಸರಿನಲ್ಲಿ ಮನುಷ್ಯ ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಇದೇ ರೀತಿ ಮುಂದುವರೆದರೆ ಮಾನವ ಸಂಕುಲಕ್ಕೆ ಉಳಿಗಾಲವಿಲ್ಲ” ಎಂದು ಎಚ್ಚರಿಸಿದರು.

ಬುಕ್1

ಲೇಖಕಿ ರೂಪ ಹಾಸನ ಮಾತನಾಡಿ, ಪ್ರಕೃತಿ ಮತ್ತು ಮಹಿಳೆಯ ಗಾಢ ಮೌನದ ಧ್ವನಿ ಆಲಿಸದಿದ್ದರೆ ಅಪಾಯ ತಪ್ಪಿದ್ದಲ್ಲ. ಸರ್ಕಾರ ಒಳ್ಳೆಯ ಯೋಜನೆ ಜಾರಿಗೆ ತಂದರೆ ಬದಲಾವಣೆ ಸಾಧ್ಯವ ಎಂದು ಅಭಿಪ್ರಾಯಿಸಿದರು.

ಇದನ್ನು ಓದಿದ್ದೀರಾ? ಮಂಡ್ಯ | ಕೆಆರ್‌ಎಸ್ ಅಣೆಕಟ್ಟೆಯ ಹಳೆಯ ಕ್ರಸ್ಟ್‌ಗೇಟ್‌ ಕಡಿಮೆ ಬೆಲೆಗೆ ಮಾರಾಟ: ರೈತ ಮುಖಂಡರ ಆರೋಪ

ಕಾರ್ಯಕ್ರಮದಲ್ಲಿ ಬೆಂಗಳೂರು ವಿಜ್ಞಾನ ವೇದಿಕೆ ಕಾರ್ಯದರ್ಶಿ ಎಂ. ಸುಚರಿತ ಚಂದ್ರ, ಬೆಂಗಳೂರು ಸಮಾಜ ವಿಜ್ಞಾನ ವೇದಿಕೆ ಕಾರ್ಯದರ್ಶಿ ಪಿ.ಎಸ್.ಪ್ರತಿಮಾ, ಜನ ಪ್ರಕಾಶನದ ಬಿ.ರಾಜಶೇಖರಮೂರ್ತಿ, ಕನ್ನಡ ವಿಭಾಗದ ಮುಖ್ಯಸ್ಥ ಶಿವಣ್ಣ, ವಿ ಗಾಯತ್ರಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...