ಬೆಂಗಳೂರು | ರೌಡಿಶೀಟರ್‌ ಹತ್ಯೆ ಪ್ರಕರಣ; ನಾಲ್ವರ ಬಂಧನ

Date:

ರೌಡಿಶೀಟರ್ ಮಿಲ್ಟ್ರಿ ಸತೀಶ್ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ವಿವೇಕನಗರ ಪೊಲೀಸರು ಬಂಧಿಸಿದ್ದಾರೆ. ವಿವೇಕನಗರದ ಪ್ರಶಾಂತ್, ದನುಷ್, ಕಾಮ್ಲೆಟ್ ಮತ್ತು ಸುನೀಲ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಬುಧವಾರ ಮುಂಜಾನೆ 3 ಗಂಟೆಯ ಸುಮಾರಿಗೆ ರೌಡಿಶೀಟರ್‌ ಸತೀಶ್‌ ಮಾಯಾಬಜಾರ್‌ನಲ್ಲಿರುವ ತನ್ನ ಮನೆಯ ಮುಂಭಾಗ ಮಲಗಿದ್ದಾಗ, ಆತನನ್ನು ಕೊಲೆ ಮಾಡಲಾಗಿತ್ತು. ಬಾರ್‌ನಲ್ಲಿ ತಮ್ಮನ್ನು ನಿಂದಿಸಿದ್ದನೆಂಬ ಕಾರಣಕ್ಕೆ ಆತನನ್ನು ನಾಲ್ವರು ಆರೋಪಿಗಳು ಹತ್ಯೆ ಮಾಡಿದ್ದರು ಎಂದು ಹೇಳಲಾಗಿದೆ.

ರೌಡಿಶೀಟರ್‌ ಆಗಿದ್ದ ಸತೀಶ್‌ ಹಲವಾರು ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಆತನನ್ನು ಕೊಲೆ ಮಾಡಿರುವ ಆರೋಪಿಗಳೂ ಕೂಡ ಕೆಲವು ಅಪರಾಧ ಪ್ರಕರಂಣಗಳಲ್ಲಿ ಭಾಗಿಯಾಗಿದ್ದರು ಎಂದು ಬೆಂಗಳೂರು ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತ ಶೇಖರ್ ಹೆಚ್ ತೆಕ್ಕನವರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...