ಬೆಂ. ಗ್ರಾ | ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ರೈತರ ವಿರುದ್ಧ ಮೊಕದ್ದಮೆ; ಡಿಸಿಪಿ ಕಚೇರಿಗೆ ಹಾಜರಾದ ರೈತರು

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚನ್ನರಾಯಪಟ್ಟಣದ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರ ವಿರುದ್ಧ ದಾಖಲಿಸಿದ್ದ ಮೊಕದ್ದಮೆಗೆ ಸಂಬಂಧಿಸಿದಂತೆ ರೈತರು ಬೆಂಗಳೂರು ನಗರದ ಡಿಸಿಪಿ ಕಚೇರಿಯಲ್ಲಿ ಹಾಜರಾದರು.

ಆಗಸ್ಟ್‌ 27ರ ಬೆಳಿಗ್ಗೆ ಕಾಮ್ರೇಡ್ ಶರತ್ ಅವರ ನೇತೃತ್ವದಲ್ಲಿ ಬೆಂಗಳೂರು ನಗರದ ಡಿಸಿಪಿ ಕಚೇರಿಗೆ ತೆರಳಿದ ರೈತರು, “ರೈತರನ್ನು ಇಷ್ಟೊಂದು ಹೀನಾಯವಾಗಿ ನಡೆಸಿಕೊಳ್ಳುತ್ತಿರುವ ಅಧಿಕಾರಿಗಳಿಗು ಮತ್ತು ರೈತರು ನಂಬಿದ ರಾಜಕಾರಣಿಗಳಿಗೂ ರೈತ ಕೋಟಿಯ ಅಭಿನಂದನೆಗಳು” ಎಂದು ರೈತರು ಅತ್ಯಂತ ವಿಷಾದಪೂರ್ವಕ ವ್ಯಂಗ್ಯವಾಡಿದ್ದಾರೆ.

“ಬೆಂಗಳೂರು ನಗರದಲ್ಲಿ ಈಗಾಗಲೇ ಜನಸಾಮಾನ್ಯರು ತಮಗೆ ಅನ್ಯಾಯ ಎಸಗಿದ ಕಚೇರಿಗಳ ಅಥವಾ ಮಂತ್ರಿಗಳ ಮುಂದೆ ಪ್ರತಿಭಟಿಸುವ ಪ್ರಜಾಸತ್ತಾತ್ಮಕ ಅವಕಾಶವನ್ನು ನಿರಾಕರಿಸಲಾಗಿದೆ. ಏನು ಪ್ರತಿಭಟಿಸುವುದಿದ್ದರೂ ಯಾರೂ ಕೇಳಿಸಿಕೊಳ್ಳದ ಫ್ರೀಡಂ ಪಾರ್ಕ್‌ನಲ್ಲೇ ಮಾಡಬೇಕು ಎಂಬುದು ಬೆಂಗಳೂರು ಪೊಲೀಸ್ ರಾಜ್ಯ ಮತ್ತು ಅದಕ್ಕೆ ಹೂಂಗುಟ್ಟುವ ಕರ್ನಾಟಕದ ಪ್ರಜಾರಾಜ್ಯದ ತುಘಲಕ್ ಆದೇಶವಾಗಿದೆ. ಇದೇ ನಿರಾಕರಣೆಯನ್ನು ಬೆಂಗಳೂರಿನಿಂದ 35 ಕಿಮೀ ದೂರದ ದೇವನಹಳ್ಳಿಗೂ ವಿಸ್ತರಿಸಲಾಗಿದೆ”.” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಂಬೇಡ್ಕರ್‌ ಭವನ ನಿರ್ಮಾಣದ ನಿವೇಶನ ಅತಿಕ್ರಮಣ; ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವನಹಳ್ಳಿಯ ರೈತರು ತಮ್ಮ ಮೇಲಿನ ಆನ್ಯಾಯಗಳ ವಿರುದ್ಧ ಹೋರಾಡಬೇಕಿದ್ದಲ್ಲಿ 35 ಕಿಮೀ ದೂರವಿರುವ ಬೆಂಗಳೂರಿಗೆ ಬಂದು ಫ್ರೀಡಂ ಪಾರ್ಕಿನಲ್ಲೇ ಬಸವಳಿಯಬೇಕಾಗಿದೆ. ರೈತರ ಏಕೈಕ ಜೀವನಾಧಾರವಾಗಿರುವ ಅವರ ಫಲವ್ತಾದ ಭೂಮಿಯನ್ನು ಭೂಗಳ್ಳರ ಲಾಭಿಗೋಸ್ಕರ ಸರ್ಕಾರ ಕಸಿದುಕೊಳ್ಳುತ್ತಿರುವುದೇ ಅಲ್ಲದೆ, ಅದನ್ನು ವಿರೋಧಿಸುತ್ತಿರುವುದಕ್ಕೆ ರೈತರ ಮೇಲೆಯೇ ಮೊಕದ್ದಮೆಯ ಮೇಲೆ ಮೊಕದ್ದಮೆ ದಾಖಲಿಸುತ್ತಿರುವ ಸರ್ಕಾರಕ್ಕೆ ಧಿಕ್ಕಾರ” ಎಂದು ರೈತರು ಪ್ರತಿಭಟಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...