ಬೆಂಗಳೂರು ಗ್ರಾಮಾಂತರ | ಸಂಸದ ಕೆ ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮದ್ಯ ಹಂಚಿಕೆ; ಸಾರ್ವಜನಿಕ ವಲಯದಲ್ಲಿ ಟೀಕೆ

Date:

ಸಂಸದ ಕೆ ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮದ್ಯ ಹಂಚಿಕೆ ಮಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿವೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಹೊರವಲಯದಲ್ಲಿರುವ ಬಾವಿಕೆರೆ ಗ್ರಾಮದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ ಜಮೀನಿನಲ್ಲಿ ಬಿಜೆಪಿ ಜೆಡಿಎಸ್ ಮುಖಂಡರು ಭಾನುವಾರ ಆಯೋಜಿಸಿದ್ದ ಮೈತ್ರಿಹಬ್ಬ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಸುಮಾರು ₹20 ಲಕ್ಷದ ಮದ್ಯ ಹಂಚಲಾಗಿದೆ ಎಂದು ತಿಳಿದುಬಂದಿದೆ.

ಬಿಜೆಪಿ ಮಾಜಿ ಶಾಸಕ ಎಂ ವಿ ನಾಗರಾಜು, ಜೆಡಿಎಸ್ ಮಾಜಿ ಶಾಸಕ ಶ್ರೀನಿವಾಸ್ ಮೂರ್ತಿ, ಬಿಜೆಪಿ ಮುಖಂಡ ಜಗದೀಶ್ ಚೌದರಿ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಜನರಿಗೆ ಮದ್ಯ ಹಂಚಿಕೆ ಮಾಡಲು ಅಬಕಾರಿ ಇಲಾಖೆ ಅನುಮತಿಯನ್ನೂ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಜಾಗದಲ್ಲಿ ಮಾತ್ರ ಮದ್ಯ ಹಂಚಿಕೆಗೆ ಅನುಮತಿ ನೀಡಲಾಗಿತ್ತು. ಅನುಮತಿಯನ್ನು ಮೀರಿ ಸಾರ್ವಜನಿಕವಾಗಿ ಮದ್ಯ ಹಂಚಿಕೆ ಮಾಡಲಾಗಿದೆ ಎನ್ನಲಾಗಿದ್ದು, ಸಾರ್ವಜನಿಕರ ವಿರೋಧಕ್ಕೆ ಕಾರಣವಾಗಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಸ್ಲಂ ವಿದ್ಯಾರ್ಥಿಗಳು ಬೌದ್ಧಿಕವಾಗಿ ಬೆಳೆಯಬೇಕು: ಚಿಂತಕ ಕೆ ದೊರೈರಾಜ್

ಈ ಕುರಿತು ಈ ದಿನ.ಕಾಮ್‌ ಬೆಂಗಳೂರು ಗ್ರಾಮಾಂತರ ಅಬಕಾರಿ ಡಿಎಸ್‌ಪಿಯವರನ್ನು ಸಂಪರ್ಕಿಸಿದಾಗ ಪ್ರತಿಕ್ರಿಯಿಸಿದ್ದು, “ಅಭಿನಂದನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೆಲವು ಷರತ್ತುಗಳೊಂದಿಗೆ ಒಂದು ದಿನದ ಮಟ್ಟಿಗೆ ಮದ್ಯ ಹಂಚಿಕೆಗೆ ಅನುಮತಿ ನೀಡಲಾಗಿತ್ತು. ಇಲಾಖೆ ಅನುಮತಿ ಮೇರೆಗೆ ಕಾರ್ಯಕ್ರಮಗಳಲ್ಲಿ ಮದ್ಯ ಹಂಚಲು ಎಲ್ಲರಿಗೂ ಅವಕಾಶ ಇದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...