ಬೆಂ.ಗ್ರಾಮಾಂತರ | ರಜಾದಿನ ಹೊರತುಪಡಿಸಿ ಉಳಿದ ದಿನ ನ್ಯಾಯಬೆಲೆ ಅಂಗಡಿಗಳು ತೆರೆದಿರುವುದು ಕಡ್ಡಾಯ: ಆಹಾರ ಇಲಾಖೆ ಡಿಡಿ ಆದೇಶ 

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಎಲ್ಲ ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ಆದೇಶದಂತೆ, ಸರ್ಕಾರಿ ರಜಾದಿನ ಹಾಗೂ ಪ್ರತಿ ಮಂಗಳವಾರ ಹೊರತುಪಡಿಸಿ, ಉಳಿದಂತೆ ಎಲ್ಲ ದಿನಗಳು ಬೆಳಗ್ಗೆ 7ರಿಂದ ಮದ್ಯಾಹ್ನ 12ರವರೆಗೆ ಹಾಗೂ ಸಂಜೆ 4ರಿಂದ ರಾತ್ರಿ 8ರವರೆಗೆ ತೆರೆಯಬೇಕು ಎಂದು ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಪ್ರವೀಣ್ ಆದೇಶ ಹೊರಡಿಸಿದ್ದಾರೆ.

“ಪಡಿತರಕ್ಕೆ ಸಮಯ ನಿಗದಿ, ತಿಂಗಳು ಪೂರ್ತಿ ವಿತರಣೆ ಮಾಡದೇ ಬಡವರ ಅನ್ನಕ್ಕೆ ಕನ್ನ” ಎಂಬ ಶೀರ್ಷಿಕೆಯಡಿ ಮಾರ್ಚ್‌ 22ರಂದು ಈ ದಿನ.ಕಾಮ್ ವಿಶೇಷ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಹಾರ ಇಲಾಖೆಯ ಆದೇಶ ಹೊರಬಿದ್ದಿದೆ.

ಈ ಕುರಿತು ಜನರಲ್ಲಿ ವಿಶೇಷ ಅರಿವು ಮೂಡಿಸಿದ್ದ ಯುವ ಸಂಚಲನ ತಂಡ ಹಾಗೂ ಪಡಿತರದಾರರು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂ. ಗ್ರಾಮಾಂತರ | ಪಡಿತರಕ್ಕೆ ಸಮಯ ನಿಗದಿ; ತಿಂಗಳು ಪೂರ್ತಿ ವಿತರಣೆ ಮಾಡದೇ ಬಡವರ ಅನ್ನಕ್ಕೆ ಕನ್ನ

ಕರ್ತವ್ಯ ನಿರ್ವಹಿಸದಿದ್ದಲ್ಲಿ ಇಲಾಖೆಗೆ ಮಾಹಿತಿ ನೀಡಿ: ಆಹಾರ ಇಲಾಖೆ ಡಿಡಿ

ಜಿಲ್ಲೆಯ ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ಆದೇಶದಂತೆ ಕಾರ್ಯನಿರ್ವಹಿಸದೇ ಇದ್ದಲ್ಲಿ ಆಯಾ ತಾಲೂಕು ಆಹಾರ ಶಾಖೆ ಸಿಬ್ಬಂದಿಗಳಾದ ದೇವನಹಳ್ಳಿ ತಾಲೂಕು ಆಹಾರ ಶಿರಸ್ತೇದಾರ್ ಶ್ರೀಧರ್ ಎನ್(9945724948), ದೇವನಹಳ್ಳಿ ತಾಲೂಕು ಆಹಾರ ನಿರೀಕ್ಷಕ ಕೆ ಶ್ಯಾಮ್‌ಪ್ರಸಾದ್ (9448376570), ದೊಡ್ಡಬಳ್ಳಾಪುರ ತಾಲೂಕು ಆಹಾರ ಶಿರಸ್ತೇದಾರ್ ಶಶಿಕಲಾ ಈ(9110672505), ದೊಡ್ಡಬಳ್ಳಾಪುರ ತಾಲೂಕು ಆಹಾರ ನಿರೀಕ್ಷಕರು ರಾಜು ಸಬಸ್ಟೀನ್(9945275227), ಹೊಸಕೋಟೆ ತಾಲೂಕು ಆಹಾರ ಶಿರಸ್ತೇದಾರ್ ವಿ ನಟರಾಜ್ ರೆಡ್ಡಿ(9902294444), ಹೊಸಕೋಟೆ ತಾಲೂಕು ಆಹಾರ ನಿರೀಕ್ಷಕರು ಬಿ ಶಿವಕುಮಾರ್(9902805563), ನೆಲಮಂಗಲ ತಾಲೂಕು ಆಹಾರ ಶಿರಸ್ತೇದಾರ್ ಕೃಷ್ಣಮೂರ್ತಿ(8660184016), ನೆಲಮಂಗಲ ತಾಲೂಕು ಆಹಾರ ನಿರೀಕ್ಷಕರು ಜಯಕುಮಾರ್(9886781111), ನೆಲಮಂಗಲ ತಾಲೂಕು ಆಹಾರ ನಿರೀಕ್ಷಕರು ಸೈಯದ್ ಅಮಾನುಲ್ಲಾ(9036434552) ಅರುಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಪ್ರವೀಣ್ ತಿಳಿಸಿದ್ದಾರೆ.

?s=150&d=mp&r=g
ವಿಜಯ್ ಕುಮಾರ್ ಗಜ್ಜರಹಳ್ಳಿ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...