ಬೆಂ. ಗ್ರಾ | ಸಾರ್ವಜನಿಕವಾಗಿ ಧೂಮಪಾನ ತಡೆಗೆ ಸ್ಟಾಪ್ ಟ್ಯೊಬ್ಯಾಕೋ ಮೊಬೈಲ್ ಆಪ್‌ನಲ್ಲಿ ದೂರು ನೀಡಿ:ಜಿಲ್ಲಾಧಿಕಾರಿ ಶಿವಶಂಕರ

Date:

ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲೆ-ಕಾಲೇಜು, ಆಸ್ಪತ್ರೆ ಅಂಗಡಿ-ಮುಂಗಟ್ಟು, ಕೈಗಾರಿಕೆ ಸೇರಿದಂತೆ ಹಲವು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ತಂಬಾಕು ಸೇವನೆ ನಿಯಂತ್ರಿಸಲು ಹೆಚ್ಚು ಕಾರ್ಯಪ್ರವೃತ್ತರಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ ಎನ್ ಶಿವಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ತಂಬಾಕು ಮುಕ್ತ ದಿನ ಇರುವ ಕಾರಣದಿಂದಾಗಿ ಎಲ್ಲಾ ಶಾಲೆ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳನ್ನು ಮೇ 31ರ ಒಳಗಾಗಿ ತಂಬಾಕು ಮುಕ್ತ ಸರ್ಕಾರಿ ಕಚೇರಿಗಳಾಗಿ ಮಾಡಬೇಕು. ಜಿಲ್ಲಾ ಹಾಗೂ ತಾಲೂಕು ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕಾರ್ಯ ಪ್ರವೃತ್ತರಾಗಿ ತಂಬಾಕು ನಿಯಂತ್ರಣಕ್ಕೆ ಕ್ರಮವಹಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು ಹಾಗೂ ತಂಬಾಕು ನಿಯಂತ್ರಣ ಕಾನೂನು ಕೊಟ್ಪಾ 2003ರ ಕಾಯ್ದೆ ಬಗ್ಗೆ ಶಾಲಾ ಮಕ್ಕಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ, ಶಾಲಾ ಕಾಲೇಜುಗಳಲ್ಲಿ, ಅಂಗಡಿಗಳಲ್ಲಿ ಕೈಗಾರಿಕೆಗಳಲ್ಲಿ ತಂಬಾಕು ಸೇವನೆ ನಿಷೇಧ ಬಗೆಗಿನ ನಾಮಫಲಕಗಳನ್ನು ಪ್ರದರ್ಶಿಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಿ. ಯಾರು ಪ್ರದರ್ಶಿಸುತ್ತಿಲ್ಲ, ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು. ತಂಬಾಕು ವ್ಯಸನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಕಾಲ ಕಾಲಕ್ಕೆ ಸಾರ್ವಜನಿಕರಿಗೆ ಅರಿವು ಮೂಡಿಸಿ” ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ತಂಬಾಕು ನಿಯಂತ್ರಣ ಕಾನೂನು- ಕೊಟ್ಪಾ 2003ರ ಕಾಯ್ದೆಯಂತೆ ಸೆಕ್ಷನ್ 04ರ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ. ಇದರನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಮಾಲೀಕರು ನಾಮಫಲಕಗಳನ್ನು ಪ್ರದರ್ಶಿಸಬೇಕು. ಸೆಕ್ಷನ್ 05ರ ಅಡಿಯಲ್ಲಿ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು ಉತ್ತೇಜನ, ಪ್ರಾಯೋಜಕತೆ ನಿಷೇಧ ಮಾಡಲಾಗಿದೆ” ಎಂದು ತಿಳಿಸಿದರು.

“ಪ್ರಾಯೋಜಕತೆ ನಿಷೇಧದ ಅನ್ವಯ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳಲ್ಲಿ ತಂಬಾಕು ಜಾಹೀರಾತುಗಳನ್ನು ಬೋರ್ಡ್, ಭಿತ್ತಿಪತ್ರ, ಎಲ್‌ಸಿಡಿ ಟಿವಿಗಳ ಮೂಲಕ ಪ್ರಚಾರ ಮಾಡುವಂತಿಲ್ಲ, ದೃಶ್ಯ ಹಾಗೂ ಮುದ್ರಣ ಮಾಧ್ಯಮದ ಮೂಲಕ ತಂಬಾಕು ಉತ್ಪನ್ನಗಳ ಜಾಹೀರಾತು ಮಾಡುವಂತಿಲ್ಲ. ಸೆಕ್ಷನ್ 6ರ ಅಡಿಯಲ್ಲಿ ತಂಬಾಕು ಉತ್ಪನ್ನಗಳನ್ನು 18 ವರ್ಷದೊಳಗಿನ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮಾರಾಟ ಮಾಡುವಂತಿಲ್ಲ” ಎಂದು ಸೂಚಿಸಿದರು.

“ಈ ಕಾನೂನುಗಳನ್ನು ಉಲ್ಲಂಘಿಸಿದಲ್ಲಿ ದಂಡ ಹಾಗೂ ಸೂಕ್ತ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ. ಸೆಕ್ಷನ್ 6ಬಿ ಅಡಿಯಲ್ಲಿ ಶಿಕ್ಷಣ ಸಂಸ್ಥೆಗಳ ನೂರು ಅಡಿಯ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಸೆಕ್ಷನ್ 7ರಲ್ಲಿ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ಶೇ.85 ರಷ್ಟು ನಿರ್ದಿಷ್ಟ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರಾಟ ಮಾಡುವಂತಿಲ್ಲ” ಎಂದು ಹೇಳಿದರು.

“ತಂಬಾಕು ವ್ಯಸನಿಗಳನ್ನು ಹೆಚ್ಚು ಪತ್ತೆ ಮಾಡಿ ಸಮಾಲೋಚನೆ ನಡೆಸಿ, ತಂಬಾಕು ವ್ಯಸನ ಮುಕ್ತರನ್ನಾಗಿ ಮಾಡಲು ಅಗತ್ಯ ಕ್ರಮಕೈಗೊಳ್ಳಿ. ಕಾನೂನು ಪಾಲಿಸದೆ ತಂಬಾಕು ವಸ್ತುಗಳನ್ನು ಮಾರಾಟ ಮಾಡುವ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಅಂತವರಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಿ” ಎಂದರು.

“ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಿ ಕಾರ್ಯಕ್ರಮ ಯಶಸ್ವಿಯಾಗಲು ಶ್ರಮಿಸಬೇಕು” ಎಂದು ಕೋರಿದರು.

ಸ್ಟಾಪ್ ಟ್ಯೊಬ್ಯಾಕೋ ಮೊಬೈಲ್ ಆ್ಯಪ್‌ ಬಳಸಿ ದೂರು ನೀಡಿ

“ತಂಬಾಕು ನಿಯಂತ್ರಿಸಲು ರೂಪುಗೊಂಡಿರುವ ಸ್ಟಾಪ್ ಟ್ಯೊಬ್ಯಾಕೋ ಆ್ಯಪ್‌ ಅನ್ನು ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಸಹ ಬಳಸಬಹುದಾಗಿದೆ. ಕಾನೂನುಬಾಹಿರವಾಗಿ ತಂಬಾಕು ಮಾರಾಟ ಮಾಡುತ್ತಿರುವ ಪ್ರದೇಶದ ಕುರಿತು ಈ ಆ್ಯಪ್‌ ಮೂಲಕ ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ. ಮಾಹಿತಿ ನೀಡಿದ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ತಂಬಾಕು ಬಳಕೆಯನ್ನು ನಿಯಂತ್ರಿಸಲು ಸಾರ್ವಜನಿಕರೂ ಕೂಡಾ ಸಹಕಾರ ನೀಡಬೇಕು” ಎಂದು ಜಿಲ್ಲಾಧಿಕಾರಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ಮುಖ್ಯ ರಸ್ತೆ ದುರಸ್ಥಿ ಮಾಡುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ ಕೆ ರಮೇಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ ಸುನೀಲ್ ಕುಮಾರ್, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ‌.ವಿದ್ಯಾರಾಣಿ ಪಿ ಎಸ್, ಜಿಲ್ಲಾ ಅರೋಗ್ಯ ಕಾರ್ಯಕ್ರಮ ಅಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...