ಬೆಂ. ಗ್ರಾ | ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಹೊಸ ಅತಿಥಿ ಆಗಮನ

Date:

ಬೆಂಗಳೂರು ಗ್ರಾಮಂತರ ಜಿಲ್ಲೆ ಆನೇಕಲ್‌ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹೊಸ ವರ್ಷಕ್ಕೆ ಹೊಸ ಅತಿಥಿ ಆಗಮನ ಆಗಿದ್ದು, ʼರೂಪಾ’ ಎಂಬ ಆನೆ, ಹೆಣ್ಣು ಮರಿಯೊಂದಕ್ಕೆ ಜನ್ಮ ನೀಡಿದೆ.

ಹೊಸ ಅತಿಥಿ ಆಗಮನದಿಂದ ಬನ್ನೇರುಘಟ್ಟ ಆನೆ ಕುಟುಂಬಸ್ಥರ ಸಂಖ್ಯೆ 25ಕ್ಕೇರಿದೆ. ರೂಪಾ ಜನನ ನೀಡುತ್ತಿರುವ ಮೂರನೇ ಮರಿ ಇದಾಗಿದೆ.

ಈ ಹಿಂದೆ ರೂಪಾ ಎಂಬ ಆನೆಯು 2016ರಲ್ಲಿ ಗೌರಿ, 2020ರಲ್ಲಿ ಬಸವ ಎಂಬ ಆನೆಗಳಿಗೆ ಜನ್ಮ ನೀಡಿತ್ತು. ಇದೀಗ ಡಿಸೆಂಬರ್‌ 11ರಂದು ಉದ್ಯಾನದಲ್ಲಿ ಮತ್ತೊಂದು ಮರಿಗೆ ಜನ್ಮ ನೀಡಿದೆ. ಮರಿಯಾನೆ ಸುಮಾರು 120 ಕೆಜಿ ಇದ್ದು, ಆರೋಗ್ಯವಾಗಿರುವುದಾಗಿ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೂಪಾ ಜನ್ಮ ನೀಡಿದ ಮರಿಯಾನೆ ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ. ಆನೆ ಸಫಾರಿಗೆ ಬರುವ ಪ್ರವಾಸಿಗರು ಮರಿಯ ಚೆಲ್ಲಾಟ ಕಣ್ತುಂಬಿಕೊಂಡು ಖುಷಿಪಡುತ್ತಿದ್ದಾರೆ.

ಆನೆ ಸಫಾರಿ ಸೀಗೇಕಟ್ಟೆ ಬಳಿ ಇರುವ ಆನೆ ಕುಟುಂಬದಲ್ಲಿ ಮರಿಯಾನೆಗೆ ತಾಯಿ ರೂಪಾ, ಅಕ್ಕ ಗೌರಿ, ಆನೆಗಳಾದ ರೀಟಾ, ವೇದಾ ಮರಿ ಆನೆಗೆ ಓಡಾಡುವ ತರಬೇತಿ ನೀಡುತ್ತಿವೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ವರುಣಾದಲ್ಲಿ ಒಳಚರಂಡಿ ಕಾಮಗಾರಿ; 11ನೇ ಶತಮಾನದ ಜೈನ ಶಿಲ್ಪ ಪತ್ತೆ

ಆನೆ ಕುಟುಂಬದ ಆರೈಕೆ ದೃಶ್ಯ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನದ ವೈದ್ಯ ಡಾ.ಕಿರಣ್‌ ಮತ್ತು ಆರ್‌ಎಫ್‌ಒ ದಿನೇಶ್‌ ಮಾರ್ಗದರ್ಶನದಲ್ಲಿ ಮಾವುತ ಕೆ.ರಾಜಣ್ಣ ತಾಯಿ ಮತ್ತು ಮರಿ ಆನೆಯನ್ನು ಜೋಪಾನ ಮಾಡುತ್ತಿದ್ದಾರೆ.

ಉದ್ದು, ಅವಲಕ್ಕಿ, ಕಡಲೆಕಾಳು, ಹೆಸರಕಾಳು, ತೆಂಗಿನಕಾಯಿ ಸೇರಿದಂತೆ ವಿಶೇಷ ಆಹಾರ  ನೀಡಲಾಗುತ್ತಿದೆ ಎಂದು ಉದ್ಯಾನದ ಆನೆ ಮೇಲ್ವಿಚಾರಕ ಸುರೇಶ್‌ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...