ಬೆಂಗಳೂರು ಗ್ರಾಮಾಂತರ | ಅಧಿಕಾರಿಗಳು ಚುನಾವಣೆ ಪ್ರಕ್ರಿಯೆಯಲ್ಲಿ ಕಾರ್ಯಪ್ರವೃತ್ತರಾಗಿ: ಜಿ.ಪಂ ಸಿಇಒ 

Date:

ಲೋಕಸಭಾ ಚುನಾವಣೆ ಪ್ರಯುಕ್ತ ನೇಮಕಾತಿಯಾಗಿರುವ ಎಲ್ಲ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಚುನಾವಣಾ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ ಚುನಾವಣಾ ಕಾರ್ಯ ಯಶಸ್ವಿಯಾಗಲು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಎಂಸಿಸಿ ಅಧ್ಯಕ್ಷೆ ಡಾ ಕೆ ಎನ್ ಅನುರಾಧ ತಿಳಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ಎಸ್‌ಎಸ್‌ಟಿ, ಎಫ್‌ಎಸ್‌ಟಿ, ವಿಎಸ್‌ಟಿ ಹಾಗೂ ಸೆಕ್ಟರ್ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿ ತಂಡದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು.

“ಚುನಾವಣೆಗೆ ಸಂಬಂಧಿಸಿದಂತೆ ದಾಖಲಾಗುವ ದೂರುಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಪಡಿಸಬೇಕು. ಜನರು ಸ್ವಯಂ ಪ್ರೇರಿತರಾಗಿ ಬಂದು ಮತ ಚಲಾಯಿಸಲು ಎಲ್ಲ ಮತಗಟ್ಟೆಗಳಲ್ಲಿ ಕನಿಷ್ಟ ಸೌಲಭ್ಯಗಳನ್ನು ಕಲ್ಪಿಸಬೇಕು. ತಾಪಮಾನ ಹೆಚ್ಚಾಗಿರುವುದರಿಂದ ಮತಗಟ್ಟೆಗಳಲ್ಲಿ ಮತದಾರರಿಗೆ ನೆರಳಿನ ವ್ಯವಸ್ಥೆ ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಹಾಯಕ ಚುನಾವಣಾ ಅಧಿಕಾರಿ ಶ್ರೀನಿವಾಸ್ ಮಾತನಾಡಿ, “ತಾಲೂಕಿನಲ್ಲಿ ಚುನಾವಣೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಪ್ರತಿಶತ ಮತದಾನದ ಗುರಿ ಹೊಂದಲಾಗಿದೆ” ಎಂದು ತಿಳಿಸಿದರು.

ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಮುನಿರಾಜು ಮಾತನಾಡಿ, “ಸ್ವೀಪ್ ಅಡಿಯಲ್ಲಿ ಯುವಕರು, ಮಹಿಳೆಯರು ಹಾಗೂ ಕಾರ್ಮಿಕರು ತಪ್ಪದೇ ಮತ ಚಲಾಯಿಸುವಂತೆ ಮಾಡಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿ ಮತಗಟ್ಟೆಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಎಲ್ಲರೂ ಮತ ಚಲಾಯಿಸುವಂತೆ ಪ್ರೇರೇಪಣೆ ನೀಡಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಎನ್‌ಡಿಎ ಆಡಳಿತದಲ್ಲಿ ದೇಶದ ಪತ್ರಿಕಾ ಸ್ವಾತಂತ್ರ್ಯ ಸಂಪೂರ್ಣ ದಮನವಾಗಿದೆ: ಪಿ ಸಾಯಿನಾಥ್

ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ, ಪೌರಾಯುಕ್ತ ಪರಮೇಶ್, ಸಹಾಯಕ ನಿರ್ದೇಶಕ ಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...