ಬೆಂಗಳೂರು ಗ್ರಾಮಾಂತರ | ಸಾರ್ವಜನಿಕರ ಅಹವಾಲು ತ್ವರಿತವಾಗಿ ಇತ್ಯರ್ಥಪಡಿಸಿ: ಸಚಿವ ಕೆ ಹೆಚ್ ಮುನಿಯಪ್ಪ

Date:

ಸಾರ್ವಜನಿಕರು ಸಲ್ಲಿಸುವ ಅಹವಾಲುಗಳನ್ನು ಶೀಘ್ರ ಇತ್ಯರ್ಥಪಡಿಸಿ ಎಂದು ಆಹಾರ ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಬುಧವಾರ ನಡೆದ ದೇವನಹಳ್ಳಿ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗೂ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾರ್ವಜನಿಕರ ಕೆಲಸಕಾರ್ಯಗಳು ತ್ವರಿತವಾಗಿ ಆಗಬೇಕು. ಸರ್ಕಾರಿ ಸೇವೆ ಜನರ ಸೇವೆಗಾಗಿ ಇರುವುದು. ಸಾರ್ವಜನಿಕರು ಹಲವು ಸಮಸ್ಯೆಗಳನ್ನು ಹೊತ್ತು ಕಚೇರಿಗಳಿಗೆ ಅಲೆಯುತ್ತಾರೆ. ಅವರ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥ ಪಡಿಸುವುದುರಿಂದ ಸಮಯ ಉಳಿತಾಯವಾಗಿ, ಅಧಿಕಾರಿಗಳು ಕಾರ್ಯಕ್ಷಮತೆ ಹೆಚ್ಚುತ್ತದೆ ಎಂದು ಸಚಿವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿರಾಶ್ರಿತರಿಗೆ ಮನೆ ಒದಗಿಸುವುದು, ಬಡವರಿಗೆ ನಿವೇಶನ ಹಂಚಿಕೆ, ಪೋಡಿ ದುರಸ್ತಿ ಕಾರ್ಯ, ಜಮೀನು ಸರ್ವೇ ಕಾರ್ಯ, ಕೆರೆಗಳಿಗೆ ನೀರು ತುಂಬಿಸುವ ಕಾರ್ಯ, ನಿರುದ್ಯೋಗಿಗಳಿಗೆ ತರಬೇತಿ ನೀಡಿ ಉದ್ಯೋಗ ಸೃಷ್ಟಿ ಮಾಡುವುದು ಇವೆಲ್ಲವನ್ನು ಶೀಘ್ರ ಕಾರ್ಯರೂಪಕ್ಕೆ ತಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಬೇಕು. ಹೀಗಾಗಿ ಅಧಿಕಾರಿಗಳ ಸಹಕಾರ ಅಗತ್ಯ” ಎಂದು ಸಚಿವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿದ್ಯಾರ್ಥಿ ನಿಲಯ ಕಟ್ಟಡದ ಮೇಲೆ ಕಲ್ಲು ತೂರಾಟ; ತಪ್ಪಿತಸ್ಥರ ಕ್ರಮಕ್ಕೆ ಕುರುಬರ ಸಂಘ ಆಗ್ರಹ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ದೇವನಹಳ್ಳಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಗ್ರೇಡ್ 2 ತಹಶೀಲ್ದಾರ್ ಉಷಾ, ಸಚಿವರ ವಿಶೇಷಾಧಿಕಾರಿ ವೆಂಕಟೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು, ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...