ಬೆಂಗಳೂರು | ವರ್ತೂರು ಕೆರೆಗೆ ಸೇರುತ್ತಿರುವ ಕೊಳಚೆ ನೀರು; ಮೀನುಗಳ ಮಾರಣಹೋಮ

Date:

ಮಹದೇವಪುರ ವಲಯದ ಬಸವನಪುರ, ವರ್ತೂರು ಕೆರೆಗಳಿಗೆ ಕೊಳಚೆ ನೀರು ಹರಿದು ಬರುತ್ತಿರುವುದರಿಂದ ಕೆರೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಳೆದ 3-4 ದಿನಗಳಿಂದ ಕೆರೆಯ ಒಳಹರಿವಿನ ಬಳಿ ಇರುವ ಯುಜಿಡಿ ಚೇಂಬರ್‌ನಲ್ಲಿ ಯುಜಿಡಿ ನೀರು ಕೆರೆಗೆ ಸೇರುತ್ತಿದೆ. ಇದರಿಂದ ಕೆರೆಯ ನೀರು ಕಪ್ಪು ಬಣ್ಣಕ್ಕೆ ತಿರುಗುತ್ತಿದೆ. ಯುಜಿಡಿ ಲೈನ್ ಬ್ಲಾಕ್ ಆಗಿರುವುದು ಮತ್ತು ನೀರು ತುಂಬಿ ಹರಿಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಕೆರೆಯ ನೀರಿನ ಬಣ್ಣ ಬದಲಾಗಿದೆ. ಕೊಳಚೆ ನೀರು ಕೆರೆಗೆ ಸೇರುತ್ತಿರುವುದರಿಂದ ಅಪಾರ ಸಂಖ್ಯೆಯಲ್ಲಿ ಮೀನುಗಳು ಸಾವನ್ನಪ್ಪುತ್ತಿವೆ. ಈಗಾಗಲೇ ಕೆರೆಯ ಮೇಲೆ ಸತ್ತ ಮೀನುಗಳು ತೇಲುತ್ತಿರುವುದನ್ನು ಕಾಣಬಹುದು” ಎಂದು ಕೆರೆ ಕಾರ್ಯಕರ್ತ ಬಾಲಾಜಿ ರಘೋತ್ತಮ್ ಬಾಲಿ ತಿಳಿಸಿದರು.

“ಇದು ಹೀಗೆ ಮುಂದುವರೆದರೆ ಕೆರೆಯಲ್ಲಿರುವ ಮೀನುಗಳು 2-3 ದಿನಗಳಿಗಿಂತ ಹೆಚ್ಚು ಕಾಲ ಬದುಕುಳಿಯುವುದಿಲ್ಲ. ಕೆರೆಯಲ್ಲಿರುವ ಸಂಪೂರ್ಣ ಮೀನುಗಳು ಸಾವನ್ನಪ್ಪುತ್ತವೆ. 13 ವರ್ಷಗಳ ಹೋರಾಟದ ನಂತರ, ಕೆರೆಯನ್ನು ನವೀಕರಿಸಲಾಯಿತು. ಆದರೆ, ಇಂತಹ ಮಾಲಿನ್ಯದ ಘಟನೆಗಳು ನಿಜವಾಗಿಯೂ ನೋವುಂಟು ಮಾಡುತ್ತವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಮಳೆ ಬಂದಾಗ ಸ್ವಯಂಚಾಲಿತವಾಗಿ ಕೊಳಚೆ ನೀರು ಕೆರೆ ಸೇರುತ್ತದೆ. ಭಾರೀ ಮಳೆಯಾದರೆ, ನೀರು ಚಲಿಸುತ್ತಲೇ ಇರುತ್ತದೆ. ಶುದ್ಧ ನೀರಿನೊಂದಿಗೆ ಕೊಳಚೆ ನೀರು ಸೇರಿಕೊಳ್ಳುತ್ತದೆ. ಯುಜಿಡಿ ಚೇಂಬರ್‌ ಸಮಸ್ಯೆಯಿದ್ದು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಮೂಲಕ ಕೊಳಚೆ ನೀರು ಕೆರೆಗೆ ಸೇರದಂತೆ ಸರಿಪಡಿಸಬೇಕಾಗಿದೆ. ನಾವು ಆಗಾಗ ಹೋಗಿ ಕೆರೆಯನ್ನು ಸ್ವಚ್ಛಗೊಳಿಸುತ್ತೇವೆ. ಆದರೆ, ಇಂತಹ ಸಂಗತಿಗಳು ಸಾಮಾನ್ಯ” ಎಂದು ಕೆರೆ ನಿರ್ವಹಣೆ ಗುತ್ತಿಗೆದಾರರೊಬ್ಬರು ತಿಳಿಸಿದರು

ವರ್ತೂರು ಕೆರೆಯಲ್ಲಿ ಕೆಲವು ದಿನಗಳ ಹಿಂದೆ ತಿರುವು ಕಾಲುವೆ ಒಡೆದಿದ್ದರಿಂದ ಮೇಲ್ದಂಡೆಯ ಕೊಳಚೆ ನೀರು ಕೆರೆಗೆ ಸೇರುತ್ತಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ಅಗ್ನಿ ಅವಘಡ ಪರಿಶೀಲನೆ; ಇಲ್ಲಿಯವರೆಗೂ 48 ರೆಸ್ಟೋರೆಂಟ್‌ ಬಂದ್​

“ವರ್ತೂರು, ಬೆಳ್ಳಂದೂರು ಕೆರೆಗಳ ರಕ್ಷಣೆಗಾಗಿ 20 ವರ್ಷಗಳಿಂದ ನಾಗರಿಕರು ಹೋರಾಟ ನಡೆಸುತ್ತಿದ್ದಾರೆ. ಕೆರೆಗಳನ್ನು ಮರುಸ್ಥಾಪಿಸಲು ನಮ್ಮ ಹೋರಾಟದ ಹೊರತಾಗಿಯೂ ಕಲುಷಿತವಾಗುತ್ತಿರುವುದನ್ನು ನೋಡುವುದು ತುಂಬಾ ಬೇಸರ ತಂದಿದೆ. ಇತ್ತೀಚೆಗೆ ಕೆರೆ ಒಡೆದ ಕಾರಣ ಕೊಳಚೆ ನೀರು ಕೆರೆಗೆ ನುಗ್ಗಿ ಸಾಕಷ್ಟು ಮೀನುಗಳು ಸಾವನ್ನಪ್ಪಿವೆ. ಡೈವರ್ಶನ್ ಚಾನಲ್ ಅನ್ನು ಸರಿಪಡಿಸಲು ಕನಿಷ್ಠ ಒಂದು ವಾರದ ಸಮಯ ಬೇಕಾಯಿತು” ಎಂದು ಕೆರೆ ಹೋರಾಟಗಾರ ಜಗದೀಶರೆಡ್ಡಿ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...