ಬೆಂಗಳೂರು | ವಿಶ್ವಕಪ್ ಪಂದ್ಯಾವಳಿಗಳಿಗೆ ಮೆಟ್ರೋದಲ್ಲಿ ವಿಶೇಷ ಟಿಕೆಟ್ ವ್ಯವಸ್ಥೆ

Date:

ಬೆಂಗಳೂರಿನಲ್ಲಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಇರುವ ಹಿನ್ನೆಲೆ, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಪಂದ್ಯಗಳು ನಡೆಯುವ ದಿನ ಮೆಟ್ರೋದಲ್ಲಿ ವಿಶೇಷ ಟಿಕೆಟ್ ವ್ಯವಸ್ಥೆ ಕಲ್ಪಿಸಿದೆ. ಜತೆಗೆ ಟಿಕೆಟ್‌ ದರದಲ್ಲಿ ರಿಯಾಯಿತಿ ಘೋಷಣೆ ಮಾಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌), “ಬೆಂಗಳೂರಿನಲ್ಲಿ ವಿಶ್ವಕಪ್ ಕ್ರಿಕೆಟ್‌ ಪಂದ್ಯಾವಳಿಗಳು ಅಕ್ಟೋಬರ್ 20, 26, ನವೆಂಬರ್ 4, 9, 12ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಈ ಹಿನ್ನೆಲೆ, ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ವಿಶ್ವಕಪ್ ಪಂದ್ಯಾವಳಿಗಳಿಗೆ ಮೆಟ್ರೋದಲ್ಲಿ ವಿಶೇಷ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ” ಎಂದು ಹೇಳಿದೆ.

“ಪಂದ್ಯಾವಳಿ ನಡೆಯುವ ಎಲ್ಲ ದಿನಗಳಲ್ಲಿ ನಮ್ಮ ಮೆಟ್ರೋದಲ್ಲಿ ವಿಶೇಷ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಬರುವ ಮತ್ತು ಹೋಗುವ ಪ್ರಯಾಣಕ್ಕೆ ₹50 ಟಿಕೆಟ್ ದರ ನಿಗದಿಪಡಿಸಲಾಗಿದೆ. ಕ್ರಿಕೆಟ್ ಪಂದ್ಯದ ದಿನದಂದು ಬೆಳಗ್ಗೆ 7 ಗಂಟೆಗೆ ಪೇಪರ್ ಟಿಕೆಟ್​ ಲಭ್ಯವಿರಲಿದೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಕಾಗದದ ಟಿಕೆಟ್‌ಗಳು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಸಂಜೆ 4 ಗಂಟೆಯ ನಂತರ ಒಂದು ಪ್ರಯಾಣಕ್ಕೆ ಮಾತ್ರ ಮಾನ್ಯವಾಗಿದೆ. ಕಾಗದದ ಟಿಕೆಟ್ ಬೆಲೆ ₹50 ಇದೆ. ಸಾಮಾನ್ಯ ದರದ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗಿದೆ. ಕ್ಯೂಆರ್ ಕೋಡ್ ಟಿಕೆಟ್‌ಗಳನ್ನು ಖರೀದಿಸಿದರೆ ಪಂದ್ಯಗಳು ನಡೆಯುವ ದಿನದಂದು ಪ್ರಯಾಣಿಸಬಹುದು. ಕ್ಯೂಆ‌ರ್‌ ಕೋಡ್ ಟಿಕೆಟ್‌ಗಳನ್ನು ವಾಟ್ಸ್ ಆಪ್ ಅಥವಾ ನಮ್ಮ ಮೆಟ್ರೋ ಆಪ್ ಇಲ್ಲವೇ ಪೆಟಿಎಂ ಮೂಲಕ ಕ್ರಿಕೆಟ್ ಪಂದ್ಯಾವಳಿಗಳು ಪ್ರಾರಂಭವಾಗುವ ಮೊದಲು ಮುಂಗಡವಾಗಿ ಖರೀದಿಸಿದರೆ ಯಾವುದೇ ಅಡಚಣೆ ಇಲ್ಲದೆ ಹಿಂದಿರುಗುವ ಪುಯಾಣಕ್ಕೆ ಬಳಸಬಹುದು” ಎಂದು ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಮಯ ಪರಿಪಾಲನೆಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣ ವಿಶ್ವದಲ್ಲೇ ಪ್ರಥಮ

“ಎಂದಿನಂತೆ ಸ್ಮಾರ್ಟ್ ಕಾರ್ಡ್ ಮತ್ತು ಎನ್.ಸಿ.ಎಂ.ಸಿ. ಕಾರ್ಡ್‌ಗಳನ್ನು ಉಪಯೋಗಿಸಬಹುದು. ಪ್ರಯಾಣಿಕರು ಈ ಅವಕಾಶವನ್ನು ಉಪಯೋಗಿಸಿಕೂಂಡರೆ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆಯ ಮೆಟ್ರೋ ಟಿಕೆಟ್ ಕೌಂಟರ್‌ಗಳಲ್ಲಿ ಜನ ದಟ್ಟಣೆಯನ್ನು ಕಡಿಮೆ ಮಾಡಲು ಸಹಕಾರಿಯಾಗಲಿದೆ” ಎಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...