ಬೆಂಗಳೂರು | ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣ; ಬಿ ಕೆ‌ ನಾಗರಾಜಪ್ಪ ಬಂಧನ

Date:

ರಾಜ್ಯ ಭೋವಿ ಅಭಿವೃದ್ಧಿ ನಿಗಮ(KBDC)ದಲ್ಲಿನ ಬಹುಕೋಟಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಿ ಕೆ‌ ನಾಗರಾಜಪ್ಪ ಅವರನ್ನು ಬಂಧಿಸಲಾಗಿದ್ದು, 14 ದಿನಗಳ ಕಾಲ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನ ಅಂಬೇಡ್ಕರ್ ರಸ್ತೆಯಲ್ಲಿನ ವಿವಿ ಟವರ್‌ನಲ್ಲಿರುವ ನಿಗಮದ ಕಚೇರಿ ಸೇರಿದಂತೆ ಹಗರಣದ ಆರೋಪಿಗಳು, ಅನುಮಾನಿತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಏಪ್ರಿಲ್ 4ರಂದು ಇಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.

ಪರಿಶೀಲನೆ ವೇಳೆ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು, ಡಿಜಿಟಲ್ ದಾಖಲೆಗಳು, ಆಸ್ತಿ ವಿವರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಏಪ್ರಿಲ್ 5ರಂದು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ನಾಗರಾಜಪ್ಪ ಅವರನ್ನು ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೋವಿ ಅಭಿವೃದ್ಧಿ ನಿಗಮದ ಉದ್ಯಮಶೀಲತಾ ಯೋಜನೆ ಮತ್ತು ನೇರ ಸಾಲ ಯೋಜನೆಗಳಡಿ ಲಕ್ಷಾಂತರ ರೂಪಾಯಿ ಸಾಲ ಕೊಡಿಸುವುದಾಗಿ ಮಧ್ಯವರ್ತಿಗಳ ಮೂಲಕ ಆಮಿಷವೊಡ್ಡಿ ಸಾರ್ವಜನಿಕರ ಗುರುತಿನ ದಾಖಲೆಗಳು, ಬ್ಯಾಂಕ್ ಚೆಕ್ ಪಡೆದು ದುರ್ಬಳಕೆ ಮಾಡಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆ ಇಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಮರ್ಕಲ್ ಗ್ರಾಮ ಪಂ. ಪಿಡಿಒ ಅಮಾನತು

ಈ ಸಂಬಂಧ ಶುಕ್ರವಾರ ನಿಗಮದ ಅಧ್ಯಕ್ಷ ವ್ಯವಸ್ಥಾಪಕ ನಿರ್ದೇಶಕ ನಾಗರಾಜಪ್ಪ ಹಾಗೂ ಲೀಲಾವತಿ ಸೇರಿದಂತೆ ಹಲವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ವೇಳೆ ಸರಿಯಾದ ಮಾಹಿತಿ ನೀಡದಿದ್ದರಿಂದ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...