ಬೆಂಗಳೂರು | ಸಿಸಿಬಿ ಪೊಲೀಸರ ಸೋಗಿನಲ್ಲಿ ವ್ಯಕ್ತಿಯ ಅಪಹರಣ; ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳು

Date:

‘ತಾವು ಸಿಸಿಬಿ ಪೊಲೀಸರು’ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬನನ್ನು ಅಪಹರಣ ಮಾಡಿ, ₹5 ಲಕ್ಷಕ್ಕೆ ಬೇಡಿಕೆಯಿಟ್ಟ ಗುಂಪೊಂದನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮೊಹಮ್ಮದ್ ಖಾಸಿಂ ಮುಜಾಹಿದ್, ಮುಕ್ತಿಯಾರ್, ವಸಿಂ, ಶಬ್ಬೀರ್ ಹಾಗೂ ಶೋಯೆಬ್‌ ಬಂಧಿತ ಆರೋಪಿಗಳು.

ಆರೋಪಿ ಮೊಹಮ್ಮದ್​ ಖಾಸಿಂ ಮುಜಾಹಿದ್ ಸಿಸಿಬಿ ಪೊಲೀಸ್ ವಕ್ತಾರನಾಗಿದ್ದನು. ಈತನು ಸಿಸಿಬಿ ಕಚೇರಿಯಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದನು. ಮೊಬೈಲ್ ಶಾಪ್ ಮಾಲೀಕ ಕಾಲು ಸಿಂಗ್‌ ಸೆಪ್ಟೆಂಬರ್ 2ರಂದು ಕಾರಿನಲ್ಲಿ ಬರುತ್ತಿದ್ದಾಗ ವಿ.ವಿ. ಪುರಂ ಬಳಿ ಆರೋಪಿಗಳು ಆತನನ್ನು ಅಡ್ಡಗಟ್ಟಿ ಸುತ್ತುವರೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲು ಸಿಂಗ್‌ನನ್ನು ಹೆದರಿಸಿ ಆತನನ್ನು ಕಾರಿನ ಹಿಂಬದಿ ಸೀಟ್​ನಲ್ಲಿ ಕೂರಿಸಿ, ‘ತಾವು ಸಿಸಿಬಿ ಪೊಲೀಸರು’ ಎಂದು ಹೇಳಿ, ನೀನು ಗಾಂಜಾ ಸರಬರಾಜು ಮಾಡುತ್ತಿದ್ದೀಯಾ ಎಂಬ ಬಗ್ಗೆ ನಮಗೆ ಮಾಹಿತಿ ಇದೆ ಎಂದು ಹೆದರಿಸಿ, ಆತನ ಕಣ್ಣಿಗೆ ಬಟ್ಟೆ ಕಟ್ಟಿ ವಿಲ್ಸನ್ ಗಾರ್ಡನ್​ನ ಮನೆಯೊಂದಕ್ಕೆ ಕರೆದುಕೊಂಡು ಹೋಗಿದ್ದರು.

ಮನೆಗೆ ಕರೆದುಕೊಂಡು ಹೋದ ಮೇಲೆ ಕಾಲು ಸಿಂಗ್​ಗೆ ಮಾರಕಾಸ್ತ್ರ ತೋರಿಸಿ ಬೆದರಿಸಿ, ಆತನ ಮೊಬೈಲ್​ನಿಂದ ಆತನ ಸ್ನೇಹಿತನಿಗೆ ಫೋನ್ ಮಾಡಿ ‘ನಾವು ಸಿಸಿಬಿ ಪೊಲೀಸರು’ ಎಂದು ಐದು ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೈ ಮುಗಿದರೂ ಬಿಡದೆ, ದಾರಿಹೋಕನ ಸುಲಿಗೆ ಮಾಡಿದ ದರೋಡೆಕೋರರು

ಸಿಂಗ್ ಸ್ನೇಹಿತರು ಪರಿಚಿತ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ತಕ್ಷಣ ಸಿಸಿಬಿ ಪೊಲೀಸರಿಗೆ ವಿಷಯ ರವಾನೆಯಾಗಿದೆ ಎಂಬುದನ್ನು ಅರಿತ ಆರೋಪಿಗಳು ಕಾಲು ಸಿಂಗ್​ನ ಬಿಟ್ಟು ಕಳುಹಿಸಿದ್ದರು.

ಈ ಕುರಿತು ಕಾಲು ಸಿಂಗ್​​ನಿಂದ ವಿವಿ ಪುರಂ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಎನ್​ಸಿಆರ್ ದಾಖಲಿಸಿಕೊಂಡ ವಿವಿಪುರಂ ಪೊಲೀಸರು, ಸಿಸಿಬಿಗೆ ಮಾಹಿತಿ ನೀಡಿದ್ದರು. ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...