ಬೆಂಗಳೂರು ನಗರದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ; ಜನರಲ್ಲಿ ಆತಂಕ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ಹೊರವಲಯದ ಕೂಡ್ಲು ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಚಿರತೆ ಪತ್ತೆಯಾಗಿತ್ತು. ಮೂರು ದಿನ ಕಳೆದರೂ ಚಿರತೆ ಪತ್ತೆಯಾಗಿರಲಿಲ್ಲ. ಆದರೆ, ಕೊನೆಯ ದಿನ ಚಿರತೆ ಸೆರೆ ಹಿಡಿಯುವ ವೇಳೆ, ಗುಂಡೇಟಿಗೆ ಸಾವನ್ನಪ್ಪಿತ್ತು. ಈ ಘಟನೆ ಬೆನ್ನಲ್ಲೇ ಇದೀಗ, ಅದೇ ಜಾಗದಲ್ಲಿ ಮತ್ತೊಂದು ಚಿರತೆ ಪತ್ತೆಯಾಗಿದೆ. ಜನರು ಮತ್ತೆ ಆತಂಕದಲ್ಲಿ ದಿನ ಕಳೆಯುವಂತಾಗಿದೆ.

ನವೆಂಬರ್ 5ರ ರಾತ್ರಿ 10:30ರ ಸುಮಾರಿಗೆ ಚಿರತೆ ಕಂಡ ಬಗ್ಗೆ ತಬ್ರೇಜ್ ಎಂಬುವವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸದ್ಯ ಅರಣ್ಯಾಧಿಕಾರಿಗಳು ಚಿರತೆಯ ಹೆಜ್ಜೆಗುರುತು ಪತ್ತೆ ಮಾಡುತ್ತಿದ್ದಾರೆ.

ತಬ್ರೇಜ್ ಎಂಬುವವರು ಕೂಡ್ಲುಗೇಟ್ ಎಇಸಿಎಸ್‌ ಲೇವೇಟ್ ಹಾಗೂ ಎಂಎಸ್ ದೋನಿ ಸ್ಕೂಲ್ ಬಳಿ ಭಾನುವಾರ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಚಿರತೆ ಕಾಣಿಸಿಕೊಂಡಿದೆ. ಈ ಬಗ್ಗೆ ಅವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಚಿರತೆ ಕಂಡು ಬಂದ ಪ್ರದೇಶದಲ್ಲಿ ಸಿಸಿಟಿವಿ ಇಲ್ಲದ ಕಾರಣ ಚಿರತೆ ಸೆರೆ ಹಿಡಿಯುವುದು ಕಷ್ಟವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಕಲಿ ದಾಖಲೆ ಸೃಷ್ಟಿ ಮಾಡಿಕೊಡುತ್ತಿದ್ದ ಶ್ರೀಕೃಷ್ಣ ಕಂಪ್ಯೂಟರ್ ಅಂಗಡಿ ಮಾಲೀಕನ ಬಂಧನ

ಮತ್ತೊಂದು ಕಡೆ ಚಿರತೆ ಹೆಜ್ಜೆ ಗುರುತು ಪತ್ತೆ

ಇನ್ನು ಎಲೆಕ್ಟ್ರಾನಿಕ್ ಸಿಟಿ ಚಿಕ್ಕತೋಗೂರಿನಲ್ಲಿ ನವೆಂಬರ್‌ 4 ರಂದು ಸಂಜೆ 7.40ರ ಸುಮಾರಿಗೆ ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿದೆ.

ಶನಿವಾರ ಸಂಜೆ ಚಿರತೆ ಮನೆ ಕಂಪೌಂಡ್​​ ಒಳಗೆ ನುಗ್ಗಿದೆ. ಬಾಗಿಲು ಬಳಿ ಬಂದ ಚಿರತೆ ಕಂಡು ಬಾಲಕ ಕಿರುಚಾಡಿದ್ದಾನೆ. ಬಾಲಕನ ಕಿರುಚಾಟಕ್ಕೆ ಚಿರತೆ ಓಡಿ ಹೋಗಿದೆ ಎಂದು ತಿಳಿದುಬಂದಿದೆ.

ಕೆ.ಆರ್.ಪುರಂ ಅರಣ್ಯ ವಲಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪರಿಶೀಲನೆ ನಡೆಸಿ ಅರಣ್ಯ ಸಿಬ್ಬಂದಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಶನಿವಾರ ಮಳೆ ಬಂದ ಹಿನ್ನೆಲೆಯಲ್ಲಿ ಹೆಜ್ಜೆ ಗುರುತು ಪತ್ತೆಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಚಿಕ್ಕತೋಗೂರು ಸುತ್ತಮುತ್ತ ನೈಸ್ ರಸ್ತೆ ಜಾಗದಲ್ಲಿ ಆಗಾಗ ಚಿರತೆ ಓಡಾಟ ಕಂಡುಬರುತ್ತಿದೆ.

ಎರಡೆರಡು ಕಡೆ ಚಿರತೆ ಪ್ರತ್ಯಕ್ಷ ದೂರು ಬಂದ ಹಿನ್ನೆಲೆ ಕೆ.ಆರ್ ಪುರಂ ಅರಣ್ಯ ಅಧಿಕಾರಿಗಳಿಗೆ ತಲೆ ನೋವು ಉಂಟಾಗಿದೆ. ಚಿರತೆಯನ್ನು ಆದಷ್ಟು ಬೇಗ ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...