ಬೆಂಗಳೂರು | ಇನ್ನುಮುಂದೆ ಗಣೇಶ ಮೆರವಣಿಗೆಗೆ ಅನುಮತಿ ಇಲ್ಲ: ಪೊಲೀಸ್ ಕಮಿಷನರ್

Date:

ರಾಜಧಾನಿ ಬೆಂಗಳೂರಿನಲ್ಲಿ ಈ ವರ್ಷ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ, ಹಲ್ಲೆ, ಕೊಲೆ ಮುಂತಾದ ಘಟನೆಗಳು ನಡೆದಿವೆ. ಈ ಹಿನ್ನೆಲೆ, ಇನ್ನುಮುಂದೆ ಗಣೇಶ ಮೂರ್ತಿ ವಿಸರ್ಜನೆ ಸಮಯದಲ್ಲಿ ಮೆರವಣಿಗೆ, ಡಿಜೆ ಸೌಂಡ್‌ಗೆ ಅನುಮತಿ ನೀಡದಂತೆ ನಗರದ ಎಲ್ಲ ಪೊಲೀಸರಿಗೂ ಪೊಲೀಸ್‌ ಕಮಿಷನರ್ ಬಿ.ದಯಾನಂದ ಅವರು ತಿಳಿಸಿದ್ದಾರೆ.

ಗಣೇಶ ಮೂರ್ತಿ ವಿಸರ್ಜನೆ ವೇಳೆ, ಮೆರವಣಿಗೆ ಹೋಗುತ್ತಿದ್ದಾಗ ಡ್ಯಾನ್ಸ್ ಮಾಡುವ ವಿಚಾರಕ್ಕೆ ಗಲಾಟೆ ನಡೆದು ಶ್ರೀನಿವಾಸ್ ಎಂಬ ಕೊರಿಯರ್ ಬಾಯ್‍ಗೆ ಡ್ರ್ಯಾಗರ್‌ನಿಂದ ಹೊಟ್ಟೆಗೆ ಇರಿದು ಕೊಲೆ ಮಾಡಲಾಗಿತ್ತು. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಹಲಸೂರು, ಯಡಿಯೂರು, ಆಡುಗೋಡಿ ಸೇರಿದಂತೆ ನಗರದ ಹಲವು ಕಡೆಗಳಲ್ಲಿ ಮೆರವಣಿಗೆ ವೇಳೆ ಸಾಲು ಸಾಲು ಗಲಾಟೆಗಳು ನಡೆದಿವೆ. ಹಬ್ಬ ಮುಗಿದು ಹಲವಾರು ದಿನ ಕಳೆದ ಬಳಿಕ ಗಣೇಶ ಮೆರವಣಿಗೆಗೆ ಅನುಮತಿ ನೀಡದಂತೆ ಪೊಲೀಸ್ ಕಮಿಷನರ್ ಸೂಚನೆ ನೀಡಿದ್ದಾರೆ.

ಪೊಲೀಸ್‌ ಕಮಿಷನರ್ ಈ ಸೂಚನೆಯ ಬಳಿಕ ಮೆರವಣಿಗೆಗೆ ಅನುಮತಿ ಕೋರಿ ಇದೀಗ 200ಕ್ಕೂ ಹೆಚ್ಚು ಮನವಿ ಪತ್ರಗಳು ಬಂದಿವೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಭಾರೀ ಮಳೆಗೆ ನಲುಗಿದ ನಗರ; ಸಮಸ್ಯೆ ಪರಿಹರಿಸಲು ಬಿಬಿಎಂಪಿ ವಿಫಲ

ಪೊಲೀಸರ ಮಾಹಿತಿ ಪ್ರಕಾರ ನಗರದಲ್ಲಿ ಇನ್ನು 450 ಗಣಪತಿಗಳನ್ನು ಇಟ್ಟಿದ್ದಾರೆ. ಮೆರವಣಿಗೆ ವೇಳೆ ಗಲಾಟೆ, ಕೊಲೆ ನಡೆದಿರುವ ಹಿನ್ನೆಲೆ, ಪೊಲೀಸ್ ಇಲಾಖೆ ಇನ್ನುಮುಂದೆ ಅನುಮತಿ ಕೊಡದಿರಲು ನಿರ್ಧರಿಸಿದೆ.

ಒಂದು ವೇಳೆ, ನಿಯಮ ಮೀರಿ ಗಲಾಟೆ ಅಥವಾ ಇನ್ನಾವುದೇ ಘಟನೆ ನಡೆದರು ಅದಕ್ಕೆ ಠಾಣಾ ಇನ್ಸ್‌ಪೆಕ್ಟರ್ ಹೊಣೆಯಾಗುತ್ತಾರೆ. ಠಾಣೆಯ ಇನ್ಸ್‌ಪೆಕ್ಟರ್ ಮೇಲೆ ಕ್ರಮ ಜರುಗಿಸುವುದಾಗಿ ಪೊಲೀಸ್‌ ಕಮಿಷನರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...