ಬೆಂಗಳೂರು | ಆಸ್ತಿ ಕಲಹಕ್ಕೆ ತಂದೆಯ ಕಣ್ಣುಗಳನ್ನು ಕಿತ್ತಿದ್ದ ಮಗನಿಗೆ 9 ವರ್ಷ ಜೈಲು ಶಿಕ್ಷೆ

Date:

ಆಸ್ತಿಗಾಗಿ ತಂದೆಯ ಕಣ್ಣುಗಳನ್ನೇ ಕಿತ್ತು ವಿಕೃತಿ ಮೆರೆದಿದ್ದ ಮಗನಿಗೆ 57ನೇ ಸಿಸಿಎಚ್‌ ನ್ಯಾಯಾಲಯ 9 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಜತೆಗೆ ₹40 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

ನ್ಯಾಯಾಧೀಶ ಟಿ.ಗೋವಿಂದಯ್ಯ ಅವರು ಆರೋಪಿ ಚೇತನ್‌ ಅಲಿಯಾಸ್‌ ಅಭಿಷೇಕ್‌(48) ಎಂಬುವವರಿಗೆ ಈ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಕೆ.ಎಸ್‌.ವೀಣಾ ಅರ್ಜಿದಾರರ ಪರ ವಾದ ಮಾಡಿದ್ದರು.

2018ರ ಆ.29ರಂದು ಬೆಂಗಳೂರಿನ ಶಾಕಾಂಬರಿನಗರದಲ್ಲಿ ಈ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ಮೇಲೆ ಎಫ್​ಐಆರ್ ದಾಖಲಾಗಿತ್ತು. ಬಳಿಕ, ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು. ಆದರೆ, ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆ, ಜೆ.ಪಿ.ನಗರ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಪ್ರಕರಣ?

ವಯಸ್ಸಾದಾಗ ಮಕ್ಕಳೇ ನಮಗೆ ನೆರವಾಗುತ್ತಾರೆ ಎಂಬುವುದು ತಂದೆ-ತಾಯಿ ಆಶಯ. ಆದರೆ, ಈ ಪ್ರಕರಣದಲ್ಲಿ ಆಸ್ತಿ ವಿಚಾರಕ್ಕೆ ಮಗನೊಬ್ಬ ತಂದೆಯ ಎರಡು ಕಣ್ಣುಗಳನ್ನು ಕಿತ್ತು ವಿಕೃತಿ ಮೆರೆದಿದ್ದಾನೆ. ಜತೆಗೆ ಅವರನ್ನು ಕತ್ತು ಹಿಸುಕಿ ಸಾಯಿಸಲು ಮುಂದಾಗಿದ್ದಾನೆ.

ಬೆಂಗಳೂರಿನ ಬನಶಂಕರಿ ಸಮೀಪದ ಶಾಕಾಂಬರಿ ನಗರದಲ್ಲಿ 2018ರ ಆ.29ರಂದು ಈ ಘಟನೆ ನಡೆದಿತ್ತು. ಆಸ್ತಿ ವಿಚಾರಕ್ಕೆ ತಂದೆ ಪರಮೇಶ್ ಮತ್ತು ಪುತ್ರ ಚೇತನ್ ನಡುವೆ ಜಗಳವಾಗಿತ್ತು. ಚೇತನ್ ತನ್ನ ಬೆರಳಿನಿಂದ ತಂದೆಯ ಕಣ್ಣಿನ ಗುಡ್ಡೆಯನ್ನು ಕಿತ್ತು ಹಾಕಿದ್ದನು. ಮತ್ತೊಂದು ಕಣ್ಣಿಗೂ ಹಾನಿ ಮಾಡಿದ್ದನು.

ಪರಮೇಶ್ ವಿಧಾನಸೌಧದ ಮುಖ್ಯ ಕಾರ್ಯದರ್ಶಿಗಳ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಈಗ ಅವರು ನಿವೃತ್ತಿಯ ಜೀವನ ನಡೆಸುತ್ತಿದ್ದು, ಶಾಕಾಂಬರಿ ನಗರದಲ್ಲಿ ಮನೆ ಮಾಡಿಕೊಂಡು ವಾಸ ಮಾಡುತ್ತಿದ್ದರು.

ಪರಮೇಶ್ ಅವರ 2ನೇ ಮಗ ಚೇತನ್ ಮಾದಕ ವಸ್ತುಗಳ ದಾಸನಾಗಿದ್ದನು. ಹಣ ನೀಡುವಂತೆ ಪೋಷಕರನ್ನು ಆಗಾಗ ಪೀಡಿಸುತ್ತಿದ್ದನು. ಘಟನೆ ದಿನ ಹಣ ಮತ್ತು ಆಸ್ತಿ ವಿಚಾರಕ್ಕೆ ಅಪ್ಪ-ಮಗನ ನಡುವೆ ಜಗಳ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನೀರಿನ ಸಂಪ್‌ ಸ್ವಚ್ಛತೆಗಿಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವು

ಆರೋಪಿ ಚೇತನ್ ತಂದೆ ಪರಮೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಕಣ್ಣಿಗೆ ಕೈ ಹಾಕಿ ಗುಡ್ಡೆಯನ್ನು ತೆಗೆದಿದ್ದಾರೆ. ಮತ್ತೊಂದು ಕಣ್ಣಿಗೂ ಹಲ್ಲೆ ಮಾಡಿದ್ದಾರೆ. ನಂತರ ಮನೆಯಿಂದ ಪರಾರಿಯಾಗಲು ಯತ್ನಿಸಿದ ಅವರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...