ಬೆಂಗಳೂರು | ಶಿಕ್ಷಣಕ್ಕೆ ‘ಬೌಂಡರಿ’ ಇರಬಾರದು: ಸಚಿವ ಮಧು ಬಂಗಾರಪ್ಪ

Date:

ಶಿಕ್ಷಣವು ಯಾವುದೇ ಜಾತಿ, ಧರ್ಮ, ಅಥವಾ ಭೌಗೋಳಿಕ ಗಡಿಗಳನ್ನು ಮೀರಿದ “ಬೌಂಡರಿಲೆಸ್” ವಿಷಯವಾಗಿದ್ದು, ದೇಶದ ಪ್ರಗತಿಗೆ ಶಿಕ್ಷಣವೇ ಏಕೈಕ ಮಾರ್ಗ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಪ್ರತಿಪಾದಿಸಿದರು.

ದೇಶದ ಪ್ರಥಮ ಶಿಕ್ಷಣ ಸಚಿವರಾದ ಡಾ. ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಅಂಗವಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ದೇವರಾಜು ಅರಸು ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

“ಶಿಕ್ಷಣ ಸಚಿವನಾಗಿ, ಇಡೀ ದೇಶಕ್ಕೆ ಶೈಕ್ಷಣಿಕವಾಗಿ ಹೆಚ್ಚು ಒತ್ತನ್ನು ನೀಡಿದ ಮಹಾನ್ ವ್ಯಕ್ತಿಯ ಹುಟ್ಟುಹಬ್ಬವನ್ನು ಶಿಕ್ಷಣ ದಿನಾಚರಣೆಯಾಗಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯ. ಈ ದಿನಾಚರಣೆಗೆ ಗೌರವ ಸಲ್ಲಬೇಕಾದರೆ, ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಮಾತನಾಡಿದ ಅವರು, “ನಾನು ಸಚಿವನಾದ ತಕ್ಷಣ ಪಠ್ಯಪುಸ್ತಕ ಪರಿಷ್ಕರಣೆಗೆ ಸಹಿ ಹಾಕಿದ್ದೇನೆ. ಮಕ್ಕಳಿಗೆ ಶಿಕ್ಷಣ ಇರಬೇಕೇ ಹೊರತು, ಪಠ್ಯಪುಸ್ತಕದಲ್ಲಿ ಯಾವುದೇ ಜಾತಿ-ಧರ್ಮಕ್ಕೆ ಸಂಬಂಧಿಸಿದ, ದಾರಿ ತಪ್ಪಿಸುವ ವಿಚಾರಗಳಿಗೆ ಅವಕಾಶ ನೀಡಬಾರದು ಎಂಬ ದೃಢ ನಿಲುವು ನಮ್ಮದಾಗಿದೆ. ಈ ಕೆಲಸ ಮಾಡುವಾಗ ಟೀಕೆ-ಟಿಪ್ಪಣಿಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

WhatsApp Image 2025 11 11 at 6.48.58 PM

ಈ ಹಿಂದೆ ಕೇವಲ 308 ಇದ್ದ ಕರ್ನಾಟಕ ಪಬ್ಲಿಕ್ ಶಾಲೆಗಳ (KPS) ಸಂಖ್ಯೆಯನ್ನು ತಮ್ಮ ಸರ್ಕಾರ ಒಂದೇ ಬಾರಿಗೆ 900ಕ್ಕೆ ಏರಿಸಿದ್ದೇವೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಗ್ರಾಮೀಣ ಭಾಗದಲ್ಲಿರುವ ಸುಮಾರು 6,000 ಗ್ರಾಮ ಪಂಚಾಯತಿಗಳಲ್ಲಿ 6,000 ಕೆಪಿಎಸ್ ಶಾಲೆಗಳನ್ನು ಸ್ಥಾಪಿಸುವ ಗುರಿ ಇದೆ ಎಂದು ಸಚಿವರು ತಿಳಿಸಿದರು.

ಕೆಪಿಎಸ್ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಮತ್ತು 6ನೇ ತರಗತಿಯಿಂದ ಕೌಶಲ್ಯ ಅಭಿವೃದ್ಧಿ (ಸ್ಕಿಲ್) ತರಗತಿಗಳನ್ನು ಪ್ರಾರಂಭಿಸಲಾಗುವುದು. ಜೊತೆಗೆ, ಎಲ್.ಕೆ.ಜಿ.ಯಿಂದ 12ನೇ ತರಗತಿಯವರೆಗೆ ಮಕ್ಕಳ ದಾಖಲಾತಿಯಾದರೆ, ಅವರಿಗೆ ಬಟ್ಟೆ, ಊಟ, ಪುಸ್ತಕ, ಮತ್ತು ಉಚಿತ ಬಸ್ ಸೌಕರ್ಯ ದೊರೆಯಲಿದೆ ಎಂದು ತಿಳಿಸಿದರು. ಇದೇ ವೇಳೆ, ಮಧ್ಯಾಹ್ನದ ಬಿಸಿಯೂಟದಲ್ಲಿ ಮಕ್ಕಳಿಗೆ ಪೌಷ್ಟಿಕತೆಯನ್ನು ಒದಗಿಸಲು ನೆರವು ನೀಡುತ್ತಿರುವ ಅಜೀಂ ಪ್ರೇಮ್‌ಜಿ ಫೌಂಡೇಷನ್‌ಗೆ ಸಚಿವರು ಧನ್ಯವಾದ ಸಲ್ಲಿಸಿದರು.

ಶಿಕ್ಷಣಕ್ಕೆ ಹೆಚ್ಚು ಬಜೆಟ್ (ಸುಮಾರು 45,000 ಕೋಟಿ ರೂ.) ಖರ್ಚು ಮಾಡುತ್ತಿರುವ ಶಿಕ್ಷಣ ಇಲಾಖೆಯು, ಮುಂದಿನ ದಿನಗಳಲ್ಲಿ ಪ್ರಾಮಾಣಿಕವಾಗಿ ಶಿಕ್ಷಣಕ್ಕೆ ಒತ್ತು ನೀಡಲಿದೆ. ದೇಶದ ಆಸ್ತಿಯಾಗಿರುವ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಮಾತ್ರ ದೇಶವು ಪ್ರಗತಿಯತ್ತ ಸಾಗಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಸಚಿವ ಮಧು ಬಂಗಾರಪ್ಪ ಅವರು ಮನವಿ ಮಾಡಿದರು.

WhatsApp Image 2025 11 11 at 6.48.57 PM

ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್ ಅಹಮದ್ ಖಾನ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಸಮುದಾಯದ ಮಕ್ಕಳಿಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಇಲಾಖೆಗೆ ನೀಡಿರುವ ಬಜೆಟ್ ಪೈಕೆ ಶೇ. 65 ರಿಂದ 70 ರಷ್ಟು ನಾವು ಶಿಕ್ಷಣಕ್ಕೆ ವಿನಿಯೋಗಿಸುತ್ತಿದ್ದೇವೆ ಎಂದು ತಿಳಿಸಿದರು.

ಇಲಾಖೆ ವ್ಯಾಪ್ತಿಗೆ ಬರುವ ಶಾಲೆ ಹಾಗೂ ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಶಿಕ್ಷಣ, ಸಮವಸ್ತ್ರ, ಶೂ, ಮೂಲ ಸೌಕರ್ಯ ಸೇರಿ ಸಮರ್ಪಕ ಸೌಲಭ್ಯ ಒದಗಿಸಿ ಮಕ್ಕಳು ನೆಮ್ಮದಿಯಿಂದ ಶಿಕ್ಷಣ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಇಂದಿನ ವಿದ್ಯಾರ್ಥಿಗಳೇ ದೇಶದ ಮುಂದಿನ ಭವಿಷ್ಯ. ಅವರಿಗೆ ಶಿಕ್ಷಣ ನೀಡಿ, ವೃತ್ತಿಪರ ತರಬೇತಿ ನೀಡಿ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಇಲಾಖೆ ಕಾರ್ಯಯೋಜನೆ ರೂಪಿಸಿದೆ ಎಂದು ತಿಳಿಸಿದರು.

WhatsApp Image 2025 11 11 at 6.48.54 PM

ಸ್ವಾತಂತ್ರ್ಯ ಭಾರತದ ಮೊಟ್ಟ ಮೊದಲ ಶಿಕ್ಷಣ ಸಚಿವರಾಗಿದ್ದ ಮೌಲಾನಾ ಅಬುಲ್ ಕಲಾಂ ಆಝಾದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಶಿಕ್ಷಣ ದಿನಾಚರಣೆಯಾಗಿ ಆಚರಿಸುತ್ತಿರುವ ಈ ಸಂದರ್ಭದಲ್ಲಿ ನಾವೆಲ್ಲರೂ ಅವರ ಕನಸು ನನಸು ಮಾಡಬೇಕು. ಗುಣಮಟ್ಟದ ಭೋದನೆ ಮೂಲಕ ಶಿಕ್ಷಣಕ್ಕೆ ಒತ್ತು ನೀಡುವುದೇ ಅವರಿಗೆ ನಾವು ಕೊಡುವ ಗೌರವ. ಇದರಲ್ಲಿ ಶಿಕ್ಷಕರ ಪಾತ್ರ ಹೆಚ್ಚು ಎಂದು ತಿಳಿಸಿದರು.

ನಮ್ಮ ಇಲಾಖೆ ವ್ಯಾಪ್ತಿಯ ಶಾಲೆ ಹಾಗೂ ವಸತಿ ಶಾಲೆಗಳಲ್ಲಿ ಗಳಲ್ಲಿ 2023 ರಲ್ಲಿ 1.20 ಲಕ್ಷ ಮಕ್ಕಳು ವ್ಯಾಸಂಗ ಮಾಡುತ್ತಿದ್ದರು. ಇದೀಗ ಆ ಸಂಖ್ಯೆ 2.30 ಲಕ್ಷಕ್ಕೆ ಏರಿದೆ. ಮುಂದಿನ ಎರಡು ವರ್ಷಗಳಲ್ಲಿ 3.55 ಲಕ್ಷಕ್ಕೆ ಏರಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಎಂಬಿಬಿಸ್ ಓದುವ ವಿದ್ಯಾರ್ಥಿಗಳಿಗೆ 5 ಲಕ್ಷ ರೂ. ವರೆಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಈ ವರ್ಷ 1605 ವಿದ್ಯಾರ್ಥಿಗಳಿಗೆ ಅನುಕೂಲ ಆಗಿದೆ. ಹಜ್ ಭವನದಲ್ಲಿ ಐಎಎಸ್, ಐ ಪಿಎ ಸ್ ಕೆ ಎ ಎಸ್, ತರಬೇತಿ ನೀಡುತ್ತಿದ್ದು ಕಳೆದ ವರ್ಷ ತರಬೇತಿ ಪಡೆದ 400 ಅಭ್ಯರ್ಥಿಗಳಲ್ಲಿ 109 ಮಂದಿ ಉದ್ಯೋಗ ಪಡೆದಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮೆಹರೋಜ್ ಖಾನ್, ಶಾಸಕ ರಿಝ್ವಾನ್ ಅರ್ಷದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜೀಲಾನಿ ಮೊಕಾಶಿ, ಅಝೀಂ ಪ್ರೇಮ್‌ಜಿ ವಿವಿಯ ಪ್ರಾಧ್ಯಾಪಕರಾದ ಎ ನಾರಾಯಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 11 at 12.57.12 PM
WhatsApp Image 2025 11 11 at 12.57.10 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...