ಬೆಂಗಳೂರು | ಜುಲೈ 17, 18ರಂದು ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

Date:

ವಿಧಾನಸಭೆ ಅಧಿವೇಶನ ಮುಂದುವರಿಕೆ ಮತ್ತು ಲೋಕಸಭಾ ವಿಪಕ್ಷ ನಾಯಕರು ಬೆಂಗಳೂರಿನಲ್ಲಿ ಸಭೆ ಆಯೋಜಿಸಿರುವ ಹಿನ್ನೆಲೆ ಸಂಚಾರ ದಟ್ಟಣೆ ನಿಯಂತ್ರಿಸಲು ಬೆಂಗಳೂರಿನ ಕೆಲವೆಡೆ ಸಾರ್ವಜನಿಕ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಬಜೆಟ್‌ ಅಧಿವೇಶನ ನಡೆಯುತ್ತಿದ್ದು, 24ರವರೆಗೆ ಸದನ ಮುಂದುವರೆಯಲಿದೆ. ಅಲ್ಲದೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ವಿಪಕ್ಷಗಳ ಮೈತ್ರಿ ಎಣೆಯುತ್ತಿರುವ ಲೋಕಸಭಾ ವಿರೋಧ ಪಕ್ಷಗಳ ಮುಖಂಡರು ಬೆಂಗಳೂರಿನ ತಾಜ್ ವೆಸ್ಟ್‌ಎಂಡ್‌ ಹೋಟೆಲ್‌ನಲ್ಲಿ ಜುಲೈ 17 ಮತ್ತು 18ರಂದು ಸಭೆ ನಡೆಸಲಿದ್ದಾರೆ.

ಹೀಗಾಗಿ, ಗಣ್ಯರಿಗೆ ಭದ್ರತೆ ಒದಗಿಸುವ ಮತ್ತು ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಹಲವೆಡೆ ಸಂಚಾರ ಮಾರ್ಗ ಬದಲಿಸಲಾಗಿದೆ. ಜುಲೈ 17 ಮತ್ತು 18ರಂದು ವಿಧಾನಸೌಧ ಎದುರಿನ ಬಿ.ಆರ್‌ ಅಂಬೇಡ್ಕರ್ ರಸ್ತೆ, ರಾಜಭವನ ರಸ್ತೆ, ಕಬ್ಬನ್ ರಸ್ತೆ, ಪ್ಯಾಲೆಸ್‌ ರಸ್ತೆ. ರೇಸ್‌ ಕೋರ್ಸ್‌ ರಸ್ತೆ, ಶೇಷಾದ್ರಿ ರಸ್ತೆಗಳನ್ನು ಸಾರ್ವಜನಿಕರು ಬಳಸದಂತೆ ಪೊಲೀಸರು ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎರಡೂ ದಿನಗಳು ಬಿ.ಆರ್‌ ಅಂಬೇಡ್ಕರ್ ರಸ್ತೆ, ರಾಜಭವನ ರಸ್ತೆ, ರೇಸ್‌ ಕೋರ್ಸ್‌ ರಸ್ತೆ ಹಾಗೂ ಬಳ್ಳಾರಿ ರಸ್ತೆಯಲ್ಲಿ ವಾಹನ ನಿಲುಗಡೆಯನ್ನೂ ನಿಷೇಧಿಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಅತೀ ಗಣ್ಯ ವ್ಯಕ್ತಿಗಳ ಸಂಚಾರ ಇರುವ ಕಾರಣ ಕೆಲವು ರಸ್ತೆಗಳಲ್ಲಿ ಸಾರ್ವಜನಿಕ ವಾಹನ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಪರ್ಯಾರ ರಸ್ತೆಗಳಲ್ಲಿ ಸಂಚರಿಸುವ ಮೂಲಕ ಸಹಕಾರ ನೀಡಬೇಕು” ಎಂದು ಪೊಲೀಸರು ಮನವಿ ಮಾಡಿದ್ದಾರೆ.

ವಿಪಕ್ಷಗಳ ಸಭೆಯಲ್ಲಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ವಿವಿಧ ರಾಜ್ಯಗಳ, ಹಲವು ಪಕ್ಷಗಳ ನಾಯಕರು ಭಾಗಿಯಾಗಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...