ಬೆಂಗಳೂರು | ರಾಷ್ಟ್ರಧ್ವಜದ ನೀತಿ ಸಂಹಿತೆ ಉಲ್ಲಂಘನೆ; ಸೂಕ್ತ ಕ್ರಮಕ್ಕೆ ದಸಂಸ ಆಗ್ರಹ

Date:

ಬೆಂಗಳೂರು ನಗರಾದ್ಯಂತ ರಾಷ್ಟ್ರಧ್ವಜದ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರ ಜಿಲ್ಲಾಧಿಕಾರಿ ಕಚೇರಿ ಸಹಾಯಕರ ಮುಖಾಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ದಸಂಸ ಜಿಲ್ಲಾ ಸಂಚಾಲಕ ಗುಡಿಬಂಡೆ ಗಂಗಪ್ಪ ಮಾತನಾಡಿ, “ಕಳೆದ ಬಾರಿ ಕೇಂದ್ರ ಸರ್ಕಾರದ ಆದೇಶದಂತೆ 2022ರ ಆಗಸ್ಟ್‌  1, 14 ಮತ್ತು 15ರಂದು ನಗರಾದ್ಯಂತ ರಾಷ್ಟ್ರಧ್ವಜಗಳನ್ನು ಹಾರಿಸಿರುವದು ಶ್ಲಾಘನೀಯ. ಆದರೆ, ಆಗಸ್ಟ್‌ 15ರ ನಂತರವೂ ಬಹುತೇಕ ಕಡೆ ರಾಷ್ಟ್ರಧ್ವಜಗಳನ್ನು ಹಾಗೆಯೇ ಬಿಟ್ಟು ಕಸದ ಗುಂಡಿಗಳಿಗೆ ಹಾಕಿ ಅವಮಾನ ಮಾಡಿದ್ದರು” ಎಂದು ಆರೋಪಿಸಿದರು.

“ಕೆಲವೆಡೆ ಈಗಲೂ ಅನಧಿಕೃತವಾಗಿ ರಾಷ್ಟ್ರಧ್ವಜಗಳನ್ನು ಹಾರಿಸಲಾಗುತ್ತಿದೆ. ಹಾಗೆಯೇ ಈ ವರ್ಷವೂ ಕೂಡ ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅನೇಕ ಕಡೆ ಬೀದಿಬದಿ ಮತ್ತು ವಿಧಾನಸೌಧದ ಎದುರು ರಾಷ್ಟ್ರಧ್ವಜಗಳನ್ನು ಅನಧಿಕೃತವಾಗಿ ಕೈಯಲ್ಲಿ ಹಿಡಿದುಕೊಂಡು, ನೆಲಕ್ಕೆ ಭಾಗಿಸಿ, ಬೀದಿಬದಿ ವ್ಯಾಪಾರಿಗಳು ಹಾಗೂ ಅಂಗಡಿ ಮಾಲೀಕರು ಸಾರ್ವಜನಿಕವಾಗಿ ಮಾರಾಟ ಮಾಡುತ್ತಿದ್ದು, ರಾಷ್ಟ್ರಧ್ವಜದ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಜ್ಯದ ಎಲ್ಲ ಬಡವರಿಗೆ ಭೂಮಿ ದೊರೆಯದೆ ಹೋರಾಟ ನಿಲ್ಲದು: ಕುಮಾರ್ ಸಮತಳ

“ರಾಷ್ಟ್ರಧ್ವಜಗಳನ್ನು ಅನಧಿಕೃತ ರೀತಿಯಲ್ಲಿ ಮಾರಾಟ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ರಾಷ್ಟ್ರಧ್ವಜದ ಶಿಷ್ಟಾಚಾರವನ್ನು ಕಾಪಾಡುವ ಸಲುವಾಗಿ ತಾವು ಕ್ರಮ ವಹಿಸಬೇಕು” ಎಂದು ಜಿಲ್ಲಾಧಿಕಾರಿಗೆ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...