ಬೆಂಗಳೂರು | ಸಂಬಳ ಕೇಳಿದ್ದಕ್ಕೆ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ

Date:

ಸಂಬಳ ಕೇಳಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿ, ಆತನನ್ನು ಬೆತ್ತಲೆಗೊಳಿಸಿ ವಿಡಿಯೋ ಮಾಡಿಕೊಂಡು ಮಾಲೀಕ ದರ್ಪ ಮೆರೆದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಅಮಾನವೀಯ ಘಟನೆ ನಡೆದಿದೆ. ಆಂಧ್ರಪ್ರದೇಶದ ಶರೀಫ್ ಎಂಬಾತನ ಮೇಲೆ ಅಂಗಡಿ ಮಾಲೀಕ ಶೇಕ್ಷಾವಲಾ ಎಂಬಾತ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಸುಬ್ರಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತ ಯುವಕ ಪೊಲೀಸರಿಗೆ ದೂರು ನೀಡಿದ್ದು, “ಅಂಗಡಿ ಮಾಲೀಕ ಸಂಬಳ ಕೊಡುವುದಾಗಿ ತನ್ನನ್ನು ಕರೆಸಿಕೊಂಡು, ಬೆತ್ತದಿಂದ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ನನ್ನನ್ನು ಬೆತ್ತಲೆಗೊಳಿಸಿ ವಿಡಿಯೋ ಮಾಡಿಕೊಂಡಿದ್ದಾರೆ. ಅಲ್ಲದೆ, ನನ್ನ ತಾಯಿಯ ಬಗ್ಗೆಯೂ ಅವಾಚ್ಯವಾಗಿ ನಿಂದಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶರೀಫ್ ಮತ್ತು ಶೇಕ್ಷಾವಲಾ ಇಬ್ಬರು ಸಂಬಂಧಿಕರಾಗಿದ್ದಾರೆ. ಹಾಸಿಗೆ ಒಲಿಯುವ ಕೆಲಸಕ್ಕಾಗಿ ಶರೀಫ್​ನನ್ನು ಆಂಧ್ರದಿಂದ ಶೇಕ್ಷಾವಲಾ ಕರೆಸಿಕೊಂಡಿದ್ದ. ಕಡಿಮೆ ಸಂಬಳ ಕೊಟ್ಟು, ಹೆಚ್ಚು ಕೆಲಸ ಮಾಡಿಸಿಕೊಳ್ಳುತ್ತಿದ್ದ. ಹೀಗಾಗಿ ಶರೀಫ್ ಅಲ್ಲಿನ ಕೆಲಸ ತೊರೆದು ಬೇರೆಡೆ ಕೆಲಸಕ್ಕೆ ಸೇರಿಕೊಂಡಿದ್ದ ಎಂದು ವರದಿಯಾಗಿದೆ.

ಇತ್ತೀಚಿನ ದಿನಗಳಲ್ಲಿ ತಮ್ಮ ವಿರೋಧಿಗಳು ಅಥವಾ ತಾವು ದ್ವೇಷಿಸುವವರನ್ನು ಬೆತ್ತಲೆಗೊಳಿಸಿ, ಹಲ್ಲೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ ತಿಂಗಳು ಬೆಂಗಳೂರಿನ ಕಾಡುಗೋಡಿಯ ಬೆಳತ್ತೂರು ಕಾಲೋನಿಯಲ್ಲಿ ಧನಂಜಯ್ ಎಂಬಾತನನ್ನು ಅರೆಬೆತ್ತಲೆಗೊಳಿಸಿ ಆತನ ಸ್ನೇಹಿತರೇ ಹಿಗ್ಗಾಮುಗ್ಗಾ ಥಳಿಸಿದ್ದರು.

ಇನ್ನು, ಬೆಳಗಾವಿ ತಾಲೂಕಿನ ವಂಟಮೂರಿಯಲ್ಲಿ ಯುವಕ-ಯುವತಿ ಪ್ರೀತಿಸಿ ಊರು ತೊರೆದಿದ್ದ ಕಾರಣಕ್ಕೆ, ಯುವತಿಯ ಮನೆಯವರು ಯುವಕನ ಮನೆಗೆ ನುಗ್ಗಿ, ಆತನ ತಾಯಿನನ್ನು ಬೀದಿಗೆ ಎಳೆದುತಂದು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದರು. ಪ್ರಕರಣದಲ್ಲಿ 7 ಆರೋಪಿಗಳನ್ನು ಬಂಧಿಸಲಾಗಿದೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ದೇವನೂರ ಗ್ರಾಮದಲ್ಲ ಕಾರು ವ್ಯಾಪಾರಿ ಅರ್ಜುನ್ ಎಂಬಾತನನ್ನು ಮನೆಯಲ್ಲಿ ಕೂಡಿ ಹಾಕಿ, ಆತನನ್ನು ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ನೀಡಿದ್ದ ಅಮಾನವೀಯ ಘಟನೆ ಮೇ 11ರಂದು ನಡೆದಿತ್ತು. ಆರೋಪಿ ರಮೇಶ್‌ನನ್ನು ಬಂಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...