ಬೆಂಗಳೂರು | ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯಿಂದ ಪುಸ್ತಕ ಪ್ರಶಸ್ತಿಗಾಗಿ ಕೃತಿಗಳ ಆಹ್ವಾನ

Date:

ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಬೆಂಗಳೂರು ವತಿಯಿಂದ 2024-25ನೇ ಸಾಲಿನ ಪುಸ್ತಕ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಲಾಗಿದೆ ಎಂದು ಅಧ್ಯಕ್ಷರಾದ ಡಾ.ಎ.ಆರ್.‌ ಗೋವಿಂದಸ್ವಾಮಿ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದರಿ ಪ್ರಶಸ್ತಿಗೆ ಬಂಜಾರ ಸಮುದಾಯದ ಲೇಖಕರು ಸ್ವತಃ ತಾವೇ ಬರೆದಿರುವ ಪ್ರಕಾರದಲ್ಲಿ ವರ್ಷದಲ್ಲಿ ಕನಿಷ್ಠ 03 ಶೀರ್ಷಿಕೆಗಳಾದರೂ ಪ್ರಕಟವಾಗಿದ್ದಲ್ಲಿ ಮಾತ್ರ ಬಹುಮಾನಕ್ಕೆ ಪರಿಗಣಿಸಲಾಗುವುದು. ಈ ಕೃತಿಗಳು 2022-23 (ಪ್ರಸಕ್ತ ಸಾಲಿಗೆ ಮಾತ್ರ ಸೀಮಿತವಾಗಿ)ರ  ಹಿಂದೆ ಮುದ್ರಣಗೊಂಡ ಕೃತಿಗಳು ಹಾಗೂ 2023-24ರ ಸಾಲಿನಲ್ಲಿ ಪ್ರಕಟವಾಗಿರಬೇಕು ಎಂದು ತಿಳಿಸಿದ್ದಾರೆ.
 
ಬಂಜಾರ ಸಮುದಾಯದ ಸಂಸ್ಕೃತಿ, ನುಡಿ, ಸಾಹಿತ್ಯ, ಕಲೆಗಳು,  ಕಲಾವಿದರು, ಸಾಂಸ್ಕೃತಿಕ ವೀರರು /ನಾಯಕರು ಹಾಗೂ ಸಾಧಕರು,  ಈ ವಿಷಯಗಳಿಗೆ  ಪೂರಕವಾಗಿರಬೇಕು. ಮತ್ತು ಬಂಜಾರ ಸಮುದಾಯದ ಲೇಖಕರು ಸ್ವತಃ ತಾವೇ ಬರೆದಿರುವ ಸೃಜನಶೀಲ, ಜನಪರ ಬರಹಗಳಾದ  ಕಥಾ ಸಂಕಲನ, ಕಾದಂಬರಿ, ಕವನ ಸಂಕಲನ, ಜೀವನ ಚರಿತ್ರೆ ಹಾಗೂ ಪ್ರಬಂಧ ಸಂಕಲನ  ಕುರಿತ ಪುಸ್ತಕಗಳನ್ನೂ  ಸಹ ಪ್ರಶಸ್ತಿಗಾಗಿ ಪರಿಗಣಿಸಲಾಗುತ್ತದೆ ಎಂದಿದ್ದಾರೆ.

ಇದನ್ನು ಓದಿದ್ದೀರಾ? 66 ಶಾಲೆಗಳಿಗೆ ಈವರೆಗೂ ಮೊಟ್ಟೆಯೇ ವಿತರಣೆಯಾಗಿಲ್ಲ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸಕ್ತರು ತಾವು  ಪ್ರಕಟಿಸಿದ ಕೃತಿಯ 03 ಪ್ರತಿಗಳೊಂದಿಗೆ ಸ್ವ ವಿವರಗಳನ್ನು ಒಳಗೊಂಡ ಅರ್ಜಿಯನ್ನು2024ರ ನವೆಂಬರ್ 30ರ ಒಳಗಾಗಿ ಕಚೇರಿ ವೇಳೆಯಲ್ಲಿ ಅಕಾಡೆಮಿಗೆ ಖುದ್ದಾಗಿ ಸಲ್ಲಿಸಲು ಇಲ್ಲವೇ ಅಂಚೆ, ಕೋರಿಯರ್‌ ಮೂಲಕ ಕಳುಹಿಸಿಕೊಡಲು ತಿಳಿಸಿದ್ದಾರೆ.

ಕಳುಹಿಸಬೇಕಾದ ವಿಳಾಸ, ರಿಜಿಸ್ಟ್ರಾರ್, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಕನ್ನಡ ಭವನ, 1ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು -560002. ಹೆಚ್ಚಿನ ಮಾಹಿತಿಗಾಗಿ : 080-29917745 ದೂರವಾಣಿಯನ್ನು ಸಂಪರ್ಕಿಸಲು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...