ಪಿಂಚಣಿ ಮೊತ್ತ ಪರಿಷ್ಕರಣೆಗೆ ಒತ್ತಾಯಿಸಿ ಬ್ಯಾಂಕ್ ಪಿಂಚಣಿದಾರರ ಧರಣಿ

Date:

ಪಿಂಚಣಿ ಮೊತ್ತ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಪಿಂಚಣಿದಾರರು ಮತ್ತು ನಿವೃತ್ತ ನೌಕರರ ಒಕ್ಕೂಟವು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಬೇಡಿಕೆ ಈಡೇರಿಸದಿದ್ದರೆ ದೆಹಲಿಯ ಜಂತರ್ ಮಂತರ್ ಮತ್ತು ಮುಂಬೈನಲ್ಲಿ ಭಾರೀ ಹೋರಾಟ ನಡೆಸುವುದಾಗಿ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಪತ್ರಿಭಟಾಕಾರರು ಎಚ್ಚರಿಕೆ ನೀಡಿದ್ದಾರೆ.

ಬ್ಯಾಂಕ್ ಉದ್ಯೋಗಿಗಳ ಪಿಂಚಣಿ ನಿಯಮಗಳು-1995 ಹಾಗೂ 35ರ ನಿಬಂಧನೆಯಂತೆ ಪಿಂಚಣಿ ಮೊತ್ತವನ್ನು ಪರಿಷ್ಕರಣೆ ಮಾಡದೇ ಪಿಂಚಣಿದಾರರಿಗೆ ಕೇಂದ್ರ ಹಣಕಾಸು ಸಚಿವಾಲಯವು ಅನ್ಯಾಯ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಒಕ್ಕೂಟದ ಅಧ್ಯಕ್ಷ ಕೆ.ವಿ. ಆಚಾರ್ಯ ಮಾತನಾಡಿ, “ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಭೇಟಿಗೆ ಅವಕಾಶ ಕೊಡುತ್ತಿಲ್ಲ. ಕಳೆದ 1993/95 ರ ಅವಧಿಯಲ್ಲಿ ಬ್ಯಾಂಕ್‌ಗಳಲ್ಲಿ ಪಿಂಚಣಿ ವ್ಯವಸ್ಥೆ ಜಾರಿಯಾದ ನಂತರದಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರ ವೇತನ ಮತ್ತು ಭತ್ಯೆಗಳನ್ನು ನಿಯಮಿತವಾಗಿ ಐದು ವರ್ಷಗಳಿಗೊಮ್ಮೆ ಪರಿಷ್ಕರಿಸಬೇಕು. ಆದರೆ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದು, 90ರ ದಶಕದಲ್ಲಿ ನಿವೃತ್ತರಾದ ಮುಖ್ಯ ಜನರಲ್ ಮ್ಯಾನೇಜರ್ಗೆ ಬ್ಯಾಂಕ್‌ನಿಂದ ಇದೀಗ ನಿವೃತ್ತರಾಗಿರುವ ಅಟೆಂಡರ್‌ನ ಪಿಂಚಣಿಗಿಂತ ಕಡಿಮೆ ಪಿಂಚಣಿ ಮೊತ್ತ ದೊರೆಯುತ್ತಿದೆ. ಇದರಿಂದ ಭಾರೀ ತಾರತಮ್ಯ ಮತ್ತು ಅನ್ಯಾಯವಾಗುತ್ತಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಸಿದ್ದರಾಮಯ್ಯ ಹತ್ಯೆ ಪ್ರಚೋದಿಸುವ ಹೇಳಿಕೆ; ಅಶ್ವತ್ಥನಾರಾಯಣ ವಿರುದ್ಧ ಎಫ್‌ಐಆರ್‌

ಒಕ್ಕೂಟದ ರಾಜ್ಯಾಧ್ಯಕ್ಷ ಎಂ.ಆರ್. ಗೋಪಿನಾಥ್ ಮಾತನಾಡಿ, “2002ರ ನಂತರ ನಿವೃತ್ತರಾದವರಿಗೆ 100% ತುಟ್ಡಿ ಭತ್ಯೆ ನಿರಾಕರಿಸಲಾಗಿದೆ. ವೈದ್ಯಕೀಯ ವಿಮೆ ಪಾವತಿಸಲು ಎರಡು ಮೂರು ತಿಂಗಳ ಪಿಂಚಣಿ ಹಣ ವೆಚ್ಚ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಲಿ ಸೇವೆ ಸಲ್ಲಿಸುತ್ತಿರುವ ಬ್ಯಾಂಕ್ ಉದ್ಯೋಗಿಗಳಿಗೆ ವಿಮಾ ಮೊತ್ತದಿಂದ ವಿನಾಯಿತಿ ನೀಡಲಾಗಿದೆ. ಹೀಗಾಗಿ ಪಿಂಚಣಿದಾರರಿಗೆ ಆರೋಗ್ಯ ವಿಮಾ ಪ್ರೀಮಿಯಂ ಅನ್ನು ಬ್ಯಾಂಕುಗಳು ಭರಿಸಬೇಕು” ಎಂದು ಒತ್ತಾಯಿಸಿದರು.

“ಹೊಸ ಪಿಂಚಣಿ ಯೋಜನೆಯನ್ನು ಪರಿಚಯಿಸುವ ಮೂಲಕ ಬ್ಯಾಂಕುಗಳು 2010 ರಿಂದ ಸಾಮಾಜಿಕ ಭದ್ರತಾ ಕ್ರಮಗಳಿಂದ ಹಿಂದೆ ಸರಿದಿವೆ. ಆದ್ದರಿಂದ ಹಳೆಯ ಪಿಂಚಣಿ ಯೋಜನೆಗೆ ಮರಳುವ ಅಗತ್ಯವಿದೆ. ಹಣಕಾಸು ಸಚಿವರಿಂದ ಸಕಾರಾತ್ಮಕ ಭರವಸೆಗಳ ಹೊರತಾಗಿಯೂ, ಐಬಿಎ ನಿವೃತ್ತಿ ಪ್ರಯೋಜನಗಳನ್ನು ಸುಧಾರಿಸಲು ಯಾವುದೇ ಸಕಾರಾತ್ಮಕ ಆಸಕ್ತಿಯನ್ನು ತೋರಿಸುತ್ತಿಲ್ಲ. ಹಲವು ಬಾರಿ ಮನವಿ, ಆಂದೋಲನ ನಡೆಸಿದರೂ ಸಂಬಂಧಪಟ್ಟ ಅಧಿಕಾರಿಗಳಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಒಕ್ಕೂಟದ ಕಾರ್ಯದರ್ಶಿ ಎ.ಎನ್.ಕೃಷ್ಣಮೂರ್ತಿ, ಸಲಹೆಗಾರ ನಡಾಫ್ ಮತ್ತಿತರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...