ಬಂಟ್ವಾಳ | ಅಂತರ್ ಜಿಲ್ಲಾ ಕ್ರೀಡಾ ಸ್ಪರ್ಧೆಯಲ್ಲಿ ಅನುಗ್ರಹ ಮಹಿಳಾ ಕಾಲೇಜಿಗೆ ದ್ವಿತೀಯ ಸ್ಥಾನ

Date:

ಮುಸ್ಲಿಮ್ ವಿದ್ಯಾ ಸಂಸ್ಥೆಗಳ ಒಕ್ಕೂಟ ಮೀಫ್ (MEIF) ಆಯೋಜಿಸಿದ್ದ ಅಂತರ್ ಜಿಲ್ಲಾ ಕ್ರೀಡಾ ಸ್ಪರ್ಧೆಯಲ್ಲಿ ಥ್ರೋ ಬಾಲ್ ವಿಭಾಗದಲ್ಲಿ ಬಂಟ್ವಾಳದ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದು ಮಿಂಚಿದೆ.

ಈಗಾಗಲೇ ಕ್ರೀಡಾ ಕ್ಷೇತ್ರದಲ್ಲಿನ ಹಲವು ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಸಾಧನೆ ಮಾಡಿರುವ ಇಲ್ಲಿನ ವಿದ್ಯಾರ್ಥಿನಿಯರು ಮುಸ್ಲಿಂ ವಿದ್ಯಾಸಂಸ್ಥೆಗಳ ಒಕ್ಕೂಟ (ಮೀಫ್) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಮಂಗಳೂರಿನ ಬಬ್ಬುಕಟ್ಟೆಯಲ್ಲಿರುವ ಹಿರಾ ಮಹಿಳಾ ಕಾಲೇಜಿನವರ ಪ್ರಾಯೋಜಕತ್ವದಲ್ಲಿ ಹಮ್ಮಿಕೊಳ್ಳಲಾದ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀಫ್ ವಿದ್ಯಾಸಂಸ್ಥೆಗಳ ವಿದ್ಯಾರ್ಥಿನಿಯರಿಗಾಗಿ ಏರ್ಪಡಿಸಿದ ಅಂತರ್ ಜಿಲ್ಲಾ ಥ್ರೋ ಬಾಲ್ ಸ್ಪರ್ಧಾಕೂಟದಲ್ಲಿ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಸಕ್ರಿಯವಾಗಿ ಪಾಲ್ಗೊಂಡು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

WhatsApp Image 2025 11 26 at 5.47.14 PM

ಪ್ರಥಮ ವಿಜ್ಞಾನ ವಿಭಾಗದ ನೂಹ ಮರಿಯಮ್ ಹೈದರ್, ಬಿ ಜೈನಬ್ ನಸ್ರೀನ್, ದ್ವಿತೀಯ ಕಲಾ ವಿಭಾಗದ ಮೈಮುನ ತನ್ವಿಲ, ದ್ವಿತೀಯ ವಾಣಿಜ್ಯ ವಿಭಾಗದ ಅಶ್ಮಿಯ, ಅಲಿಫಾ ಆಯಿಷ, ರಫಾ, ಜುವೇರಿಯಾ, ಸಫ್ರೀನ, ಬಿ ಎಸ್ ಶಬೀಬಾ ಆಫಿಯಾ, ಪ್ರಥಮ ವಾಣಿಜ್ಯ ವಿಭಾಗದ ಆಯಿಷತ್ ರುಷೀದ, ನೆಬಿಸತ್ ಹಿಬಾ, ನಫೀಸತ್ತುಲ್ ಶಹಲ ಇವರುಗಳು ಥ್ರೋ ಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅಂತೆಯೇ ಪ್ರಥಮ ವಾಣಿಜ್ಯ ವಿಭಾಗದ ಆಯಿಷತ್ ರುಷೀದ ಬೆಸ್ಟ್ ಥ್ರೋವರ್ ಅವಾರ್ಡನ್ನು ತಮ್ಮದಾಗಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಂಟ್ವಾಳ | ವಿಸ್ಡಮ್ ಆಂಗ್ಲ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಸಂಭ್ರಮ

ಹೈಸ್ಕೂಲ್ ಮತ್ತು ಪಿಯು ಕಾಲೇಜುಗಳಿಗೆ ಪ್ರತ್ಯೇಕವಾಗಿ ಏರ್ಪಡಿಸಲಾದ ಈ ಸ್ಪರ್ಧೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಮೂವತ್ತೇಳು ವಿದ್ಯಾಸಂಸ್ಥೆಗಳು ಭಾಗವಹಿಸಿದ್ದವು.

ಹಿರಾ ಮಹಿಳಾ ಕಾಲೇಜು ಬಬ್ಬುಕಟ್ಟೆ ಇದರ ಜನಾಬ್ ಅಬ್ದುಲ್ ರಹಮಾನ್ ಹಾಗೂ ಅನುಗ್ರಹ ಮಹಿಳಾ ಕಾಲೇಜು ಕಲ್ಲಡ್ಕದ ಕೋಶಾಧಿಕಾರಿ ಹೈದರ್ ಅಲಿಯವರು ಪಂದ್ಯಾವಳಿಯ ಸಂಚಾಲಕರಾಗಿ ಕಾರ್ಯ ನಿರ್ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...