ಬಂಟ್ವಾಳ | ಕೆಎಸ್‌ಆರ್‌ಟಿಸಿ ಬಸ್ – ಆ್ಯಕ್ಟಿವಾ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು

Date:

ಕೆಎಸ್‌ಆರ್‌ಟಿಸಿ ಬಸ್ – ಆ್ಯಕ್ಟಿವಾ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಸಮೀಪದ ಎನ್‌ ಸಿ ರೋಡ್ ಬಳಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಆ್ಯಕ್ಟಿವಾ ವಾಹನದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತ ಯುವಕನನ್ನು ಉಳ್ತೂರು ಸಮೀಪದ ಮಂಗಳತೇರು ನಿವಾಸಿ ರಾಜೇಶ್ ಎಂದು ಗುರುತಿಸಲಾಗಿದೆ.

ಬಿ.ಸಿ. ರೋಡ್ ಕಡೆಯಿಂದ ಬೆಳ್ತಂಗಡಿ ಕಡೆಗೆ ಸಾಗುತ್ತಿದ್ದ KA 70 J 3273 ರಿಜಿಸ್ಟ್ರೇಷನ್ ಹೊಂದಿದ್ದ ಬೈಕ್ ಸವಾರ, ಎದುರಿಗಿದ್ದ ವಾಹನವನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬೆಳ್ತಂಗಡಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಸೂಪರ್ ಫಾಸ್ಟ್ ಕೆಎಸ್‌ಆರ್‌ಟಿಸಿ ಬಸ್‌ ಮುಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ. ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? 2024ನೇ ಸಾಲಿನ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನವು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೂಂಜಾಲಕಟ್ಟೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

bus 11
activa
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...