ಬಂಟ್ವಾಳ | ಜಮಾಅತೆ ಇಸ್ಲಾಮೀ ಹಿಂದ್‌ನಿಂದ ಸಾರ್ವಜನಿಕ ಬೋರ್‌ವೆಲ್‌ ಲೋಕಾರ್ಪಣೆ

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಮಾಅತೆ ಇಸ್ಲಾಮೀ ಹಿಂದ್‌ನಿಂದ ಸಾರ್ವಜನಿಕ ಬೋರ್‌ವೆಲ್‌ ಲೋಕಾರ್ಪಣೆ ಮಾಡಿದ್ದು, ಕುಡಿಯುವ ನೀರು ಒದಗಿಸುಲ್ಲಿ ಯಶಸ್ವಿಯಾಗಿದ್ದಾರೆ.

ತಾಲೂಕಿನ ಕೊಳ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೆರ್ಕಳ ವಾರ್ಡ್‌‌ನ ನಾಗರಿಕರು ಕಳೆದ ಹಲವು ತಿಂಗಳುಗಳಿಂದ ಕುಡಿಯುವ ನೀರಿಗಾಗಿ ತೀವ್ರ ಪರದಾಡುತ್ತಿದ್ದರು. ಪಂಚಾಯಿತಿಗೆ ದೂರು‌ ನೀಡಿಯೂ ಸಮಸ್ಯೆ ಪರಿಹಾರವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್‌ನ ಕಾರ್ಯಕರ್ತರು ಪ್ರಸ್ತುತ ವಾರ್ಡ್‌ಗೆ ಭೇಟಿ ನೀಡಿ, ಪರಿಶೀಲಿಸಿ, ಮರುದಿನವೇ ಕೊಳವೆ ಭಾವಿಯ ವ್ಯವಸ್ಥೆ ಮಾಡಿದರು.

ಜಮಾಅತೆ ಹಿಂದ್‌ನಿಂದ ಕುಡಿಯುವ ನೀರು ಪೂರೈಕೆ 1

ಜಮಾಅತೆ ಇಸ್ಲಾಮೀ ಹಿಂದ್‌ ರಾಜ್ಯ ಸಲಹಾ ಸಮಿತಿಯ ಸದಸ್ಯರಾದ ಮುಹಮ್ಮದ್ ಕುಂಞಿಯವರು ರಮಝಾನ್‌‌ನ ಪ್ರಥಮ ದಿನದಂದೇ ಸರಳ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೈದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ, ನೀರು ಎಂಬ ಅನುಗ್ರಹದ ಕುರಿತು ಮಾತನಾಡುತ್ತ, “ಮನುಷ್ಯರ ಸೇವೆ ಮತ್ತು ಮನುಷ್ಯರ‌ ನೋವು, ಸಂಕಷ್ಟಗಳಿಗೆ ಸ್ಪಂದಿಸುವುದು ಅಲ್ಲಾಹನು ಮೆಚ್ಚುವ ಬಹುದೊಡ್ಡ ಕೆಲಸ. ಜಮಾಅತೆ ಇಸ್ಲಾಮೀ ತನ್ನ ಇತಿಹಾಸದುದ್ದಕ್ಕೂ ಸದಾ ಮನುಷ್ಯ ಪರವಾದ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತ ಬಂದಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಬ್ಬನ್‌ ಪಾರ್ಕ್‌ನಲ್ಲಿ ಖಾಸಗಿ ಆರ್ಟ್‌ ಗ್ಯಾಲರಿ…

ಅತಿಥಿಗಳಾಗಿ ಭಾಗವಹಿಸಿದ್ದ ನಿವೃತ್ತ ಸೈನಿಕ ಗೋಪಾಲಕೃಷ್ಣ ಭಟ್‌, ಲಯನ್ಸ್‌ ಕ್ಲಬ್‌ನ ಮಾಜಿ ಅಧ್ಯಕ್ಷ ಬಾಲಕೃಷ್ಣ ಸೇರ್ಕಲ, ಕೊಳ್ನಾಡು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಅಸ್ಮಾ ಹಸೈನಾರ್‌, ಸೆರ್ಕಳ ವಾರ್ಡ್‌ ಸದಸ್ಯೆ ಸವಿತಾರವರು ಜಮಾಅತೆ ಇಸ್ಲಾಮಿಯ ತುರ್ತು ಸ್ಪಂದನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಂಸ್ಥೆಯ ಸೇವೆಗೆ ಶುಭ ಹಾರೈಸಿದರು.

ಸಮಾಜ ಸೇವಾ ಘಟಕ, ಜಮಾಅತೆ ಇಸ್ಲಾಮೀ ಹಿಂದ್‌ ಮಂಗಳೂರು ಸಂಚಾಲಕ ಅಬ್ದುಲ್ ವಹೀದ್‌, ಸದಸ್ಯರುಗಳಾದ ಹುಸೈನ್‌ ಬಶೀರ್‌, ಶಂಶೀರ್‌ ಮೆಲ್ಕಾರ್‌, ಮುಹಮ್ಮದ್ ಕಲ್ಲಡ್ಕ, ಸಾಮಾಜಿಕ ಕಾರ್ಯಕರ್ತರಾದ ಹಸೈನಾರ್‌ ತಾಳಿತ್ತನೂಜಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...