ಬಂಟ್ವಾಳ | ಜಮಾಅತೆ ಇಸ್ಲಾಮೀ ಹಿಂದ್‌ ವತಿಯಿಂದ ವಿಧವೆಗೆ ಜನರಲ್ ಸ್ಟೋರ್‌ ಹಸ್ತಾಂತರ

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ನೆಹರೂ ನಗರದ ಮೂವರು ಅನಾಥ ಹೆಣ್ಣು ಮಕ್ಕಳ ತಾಯಿಯಾಗಿರುವ ಓರ್ವ ವಿಧವೆಗೆ ಸಮಾಜ ಸೇವಾ ಘಟಕ, ಜಮಾಅತೆ ಇಸ್ಲಾಮೀ ಹಿಂದ್‌, ಮಂಗಳೂರು ವತಿಯಿಂದ ನೀಡಿದ, ದಿನಬಳಕೆಯ ವಸ್ತುಗಳ ಮಾರಾಟದ ಶಾಂತಿ ಜನರಲ್‌ ಸ್ಟೋರ್‌ ಅನ್ನು ಹಸ್ತಾಂತರಿಸಲಾಯಿತು.

ಬೋಳಂಗಡಿಯ ಹವ್ವಾ ಜುಮಾ ಮಸೀದಿಯ ಖತೀಬರಾದ ಮೌಲಾನಾ ಯಹ್ಯಾ ತಂಙಳ್‌ ಮದನಿಯವರು ಅಂಗಡಿಯನ್ನು ಉದ್ಘಾಟಿಸಿದರು.

“ದುಡಿಯುವ ಕೈಗಳಿಗೆ ಶಕ್ತಿ ನೀಡುವ ಇಂತಹ ಸೇವೆಗಳು ಅತ್ಯುತ್ತಮವಾದುದೆಂದು ಶ್ಲಾಘಿಸಿ, ಇದಕ್ಕೆ ನೆರವಾದ ಮತ್ತು ಪರಿಶ್ರಮಿಸಿದ ಎಲ್ಲರಿಗೂ ಸೃಷ್ಟಿಕರ್ತನು ತಕ್ಕುದಾದ ಪ್ರತಿಫಲ ನೀಡಿ ಅನುಗ್ರಹಿಸಲಿ” ಎಂದು ಪ್ರಾರ್ಥಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಊರಿನ ಪ್ರಮುಖರಾದ ಪಿ. ಎಸ್‌. ಅಬ್ದುಲ್ ಹಮೀದ್‌, ಉಮರ್‌ ಕಾಸರಗೋಡು ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು.

1002554301

ಜಮಾಅತೆ ಇಸ್ಲಾಮೀ ಹಿಂದ್‌ ಪಾಣೆಮಂಗಳೂರು ಶಾಖೆಯ ಅಧ್ಯಕ್ಷರಾದ ಮುಖ್ತಾರ್‌ ಅಹ್ಮದ್‌ರವರು ಮಾತನಾಡುತ್ತಾ, ಇಸ್ಲಾಮ್‌ ಧರ್ಮದಲ್ಲಿ ಆರಾಧನೆಗಳಂತೆಯೇ, ಇಂತಹ ಸೇವಾ ಚಟುವಟಿಕೆಗಳಿಗೂ ಬಹಳ ಪ್ರಾಧಾನ್ಯತೆ ಇದೆ. ಜಮಾಅತೆ ಇಸ್ಲಾಮೀ ತನ್ನ ಆರಂಭದ ದಿನದಿಂದಲೇ ಸಮಾಜ ಸೇವೆಗೆ ಬಹಳ ಮಹತ್ವ ಕಲ್ಪಿಸಿಕೊಂಡು ಬಂದಿದೆ ಎಂದರು.

ಸಮಾಜ ಸೇವಾ ಘಟಕ, ಮಂಗಳೂರು ಸದಸ್ಯರಾದ ಮುಹಮ್ಮದ್ ಮುಹ್ಸಿನ್‌ ಮಾತನಾಡುತ್ತಾ, “ನಮ್ಮ ಸಮಾಜ ಸೇವಾ ಘಟಕ ಕಳೆದ ಹಲವಾರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿವಿಧ ಸೇವೆಗಳನ್ನು ಸಮರ್ಪಿಸುತ್ತಲೇ ಬಂದಿದೆ. ಇದು ಅದರದ್ದೇ ಮುಂದುವರಿದ ಭಾಗ” ಎಂದು ಸಮಾರೋಪದ ನುಡಿಗಳೊಂದಿಗೆ ಶುಭ ಹಾರೈಸಿದರು.

ಜಮಾಅತೆ ಇಸ್ಲಾಮಿ ಹಿಂದ್ ಪಾಣೆಮಂಗಳೂರು ಸಮಾಜ ಸೇವಾ ಘಟಕದ ಅಧ್ಯಕ್ಷರಾದ ಕಾಸಿಮ್‌ ಚೆಂಡಾಡಿ, ಆದಂ, ಇಬ್ರಾಹಿಂ ಚೆಂಡಾಡಿ, ಸಲೀಂ ಬೋಳಂಗಡಿ, ಮುಹಮ್ಮದ್ ಬೋಳಂಗಡಿ, ಶಂಶೀರ್‌ ಮೆಲ್ಕಾರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

1002554296
1002554297
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...