ಬಂಟ್ವಾಳ | ರಿಕ್ಷಾ ಹಿಂದೆ ಗನ್‌ನೊಂದಿಗೆ ಗಾಂಧಿ ಹಂತಕ ಗೋಡ್ಸೆ ಹೆಸರು: ಸಮಾಜದಲ್ಲಿ ಆತಂಕ ಸೃಷ್ಟಿಸುವ ಹುನ್ನಾರ

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಆಟೋ ಚಾಲಕನೋರ್ವ ರಿಕ್ಷಾದ ಹಿಂಬದಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹಂತಕ ನಾಥೂರಾಮ್ ಗೋಡ್ಸೆಯ ಹೆಸರಿನೊಂದಿಗೆ ಗನ್ ಸ್ಟಿಕ್ಟರ್ ಅಂಟಿಸಿರುವ ಪ್ರಸಂಗ ಬೆಳಕಿಗೆ ಬಂದಿದೆ.

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಪಕ್ಷದ ರಾಜ್ಯ ನಾಯಕ ರಿಯಾಝ್ ಕಡಂಬು ಎಂಬುವವರು ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಫೋಟೋ ಹಂಚಿಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಅವರಿಗೆ ಟ್ಯಾಗ್ ಮಾಡಿದ್ದಾರೆ.

“ಗಾಂಧಿ ಹಂತಕ ಗೋಡ್ಸೆ ಹೆಸರು ಆಟೋದಲ್ಲಿ ಹಾಕಿ, ಸಮಾಜದಲ್ಲಿ ಆತಂಕ ಸೃಷ್ಟಿಸುವ ಹುನ್ನಾರ ಇದು” ರಿಯಾಝ್ ಕಡಂಬು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದ.ಕ ಜಿಲ್ಲಾ ಎಸ್ಪಿ ಅವರೇ, ಇದೆಲ್ಲಾ ನಿಮ್ಮ ಗಮನಕ್ಕೆ ಬಾರದಿರಲು ಕಾರಣವೇನು? ಇದು ಸಮಾಜದಲ್ಲಿ ಆತಂಕ ಸೃಷ್ಟಿಸುವ ಭಾಗವಲ್ಲವೇ? ಗಾಂಧೀಜಿಯನ್ನು ಗುಂಡಿಟ್ಟು ಕೊಂದ ಗೋಡ್ಸೆಯ ಹೆಸರು ಆಟೋದಲ್ಲಿ ಹಾಕಿ ತಿರುಗುವುದಕ್ಕೆ ಅವಕಾಶವಿದೆಯೇ? ಪೊಲೀಸ್ ಇಲಾಖೆ ಕೂಡಲೇ ಸುಮೋಟೊ ಕೇಸು ದಾಖಲಿಸಿ, ಆರೋಪಿಯನ್ನು ಬಂಧಿಸಬೇಕು” ಎಂದು ತಮ್ಮ ಪೋಸ್ಟ್‌ನಲ್ಲಿ ಆಗ್ರಹಿಸಿದ್ದಾರೆ.

ಬಂಟ್ವಾಳ ಆರ್‌ಟಿಓ(ಕೆಎ 70 5715) ನೋಂದಣಿ ಇರುವ ಆಟೋದಲ್ಲಿ ಗೋಡ್ಸೆಯ ಹೆಸರನ್ನು ಹಿಂಭಾಗದಲ್ಲಿ ಬರೆದು, ಜೊತೆಗೆ ಗನ್ ಇರುವ ಸ್ಟಿಕ್ಕರ್ ಅನ್ನು ಅಂಟಿಸಲಾಗಿದೆ.

ಈ ದಿನ.ಕಾಮ್ ಜೊತೆಗೆ ಮಾತನಾಡಿದ ರಿಯಾಝ್ ಕಡಂಬು, “ಕಳೆದ ಎರಡು ದಿನಗಳ ಹಿಂದೆ(ಜ.14) ನಾನು ಕಲ್ಲಡ್ಕ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿರಬೇಕಾದರೆ ನನಗೆ ಈ ದೃಶ್ಯ ಕಾಣಸಿಕ್ಕಿತ್ತು. ಹಾಗಾಗಿ, ಫೋಟೋ ಕ್ಲಿಕ್ಕಿಸಿಕೊಂಡೆ. ಇದು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಗೆ ಮಾಡಿರುವ ಅವಮಾನ. ಅವರನ್ನು ಕೊಂದವನ ಹೆಸರನ್ನು ತನ್ನ ಆಟೋದ ಹಿಂದೆ ಹಾಕಿದ್ದಲ್ಲದೇ, ಗನ್ ಇರುವ ಸ್ಟಿಕ್ಕರ್ ಕೂಡ ಅಂಟಿಸಲಾಗಿದೆ. ಸಮಾಜದಲ್ಲಿ ಆತಂಕ ಸೃಷ್ಟಿಸುವ ಹುನ್ನಾರ ಇದು. ಹಾಗಾಗಿ, ಸಂಬಂಧಪಟ್ಟ ಆಟೋ ಚಾಲಕ/ಮಾಲೀಕನ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದ್ದೇನೆ. ಕ್ರಮ ಕೈಗೊಂಡಿದ್ದಾರೋ, ಇಲ್ಲವೋ ಎಂದು ಮಾಹಿತಿ ಬಂದಿಲ್ಲ” ಎಂದು ತಿಳಿಸಿದರು.

ಈ ಬಗ್ಗೆ ಈ ದಿನ.ಕಾಮ್ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ, “ಟ್ರಾಫಿಕ್ ನಿಯಮ ಹಾಗೂ ಮೋಟಾರು ಕಾಯ್ದೆ ಉಲ್ಲಂಘನೆಯ ವ್ಯಾಪ್ತಿಯಲ್ಲಿ ಇದು ಬರುವುದಿಲ್ಲ. ಇದು ಕಾನೂನು ಮತ್ತು ಸುವ್ಯವಸ್ಥೆಯ ವಿಚಾರವಾಗಿರುವುದರಿಂದ ಸಂಬಂಧಪಟ್ಟವರನ್ನು ಸಂಪರ್ಕಿಸಿ” ಎಂದು ಮಾಹಿತಿ ನೀಡಿದರು.

ಈ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳನ್ನು ಸಂಪರ್ಕಿಸಿದಾಗ, “ಈ ಬೆಳವಣಿಗೆ ನಮ್ಮ ಗಮನಕ್ಕೆ ಬಂದಿಲ್ಲ. ಆಟೋ ನಂಬರನ್ನು ಆಧರಿಸಿ, ಚಾಲಕನ ವಿವರವನ್ನು ಪತ್ತೆ ಹಚ್ಚುತ್ತೇವೆ. ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದು ಈ ದಿನ.ಕಾಮ್‌ಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...