ಬಂಟ್ವಾಳ | ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Date:

ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿ, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ಸೆ.7ರ ಶನಿವಾರ ನಡೆದಿದೆ.

ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನೀಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನೀಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಗಳ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿ, ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 09 07 at 4.24.40 PM

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಮಾನಸ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

ಸೆ.5ರಂದು ದೇಂತಡ್ಕ ದೇವಸ್ಥಾನದಲ್ಲಿ ಇವರ ಮದುವೆ ನಡೆದಿತ್ತು. ಮಾನಸ ಅವರ ತಾಯಿಯ ಮನೆಗೆ ಹೋಗುವ ವೇಳೆ ಈ‌ ದುರ್ಘಟನೆ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಕೋಲಾರ | ವಸತಿ ಶಾಲೆ ಶಿಕ್ಷಕನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರ ಐದು ಸಾವಿರ ನಗ್ನ ಫೋಟೋ, ವಿಡಿಯೋ ಪತ್ತೆ!

ಇಬ್ಬರೂ ಕೂಡ ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಚೌತಿಯ ಹಬ್ಬದ ಸಂದರ್ಭದಲ್ಲೇ ಈ ದುರ್ಘಟನೆ ನಡೆದಿರುವುದು ಕುಟುಂಬಕ್ಕೆ ಆಘಾತ ಉಂಟು ಮಾಡಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಟ್ವಾಳ
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...