ಬಂಟ್ವಾಳ | ವಿಸ್ಡಮ್ ಆಂಗ್ಲ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಸಂಭ್ರಮ

Date:

ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಕಡೇಶಿವಾಲಯ ಗ್ರಾಮದ ವಿಸ್ಡಮ್‌ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ-ಗಡಿಯಾರದ ಕ್ಯಾಂಪಸ್‌ನಲ್ಲಿ ಕಡೇಶಿವಾಲಯ ಹಾಗೂ ಕೆದಿಲ ಕ್ಲಸ್ಟರ್‌ಗಳಡಿ ಬರುವ 30ಕ್ಕೂ ಹೆಚ್ಚು ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ ಇತ್ತೀಚೆಗೆ ವಿಜೃಂಭಣೆಯಿಂದ ಜರುಗಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಕ್ಷೇತ್ರ ಶಿಕ್ಷಣಾಧಿಕಾರಿ, ಸಮೂಹ ಮತ್ತು ಕ್ಲಸ್ಟರ್‌ ಸಂಪನ್ಮೂಲ ಕೇಂದ್ರಗಳ ಸಹಭಾಗಿತ್ವದಲ್ಲಿ, ಶಾಲಾ ಸಂಚಾಲಕ ಅಬ್ದುಲ್‌ ಖಾದರ್‌ ಕುಕ್ಕಾಜೆ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.

ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಒಟ್ಟು ಏಳು ಪ್ರಶಸ್ತಿಗಳನ್ನು ಪಡೆದು ಕೆದಿಲ ಕ್ಲಸ್ಟರ್ ಮಟ್ಟದ ಚಾಂಪಿಯನ್, ಪ್ರಥಮ ಸ್ಥಾನವನ್ನು ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಮಲ್ಲಡ್ಕ ತನ್ನದಾಗಿಸಿಕೊಂಡಿತು. ಒಟ್ಟು ಐದು ಪ್ರಶಸ್ತಿಗಳನ್ನು ಪಡೆಯುವುದರೊಂದಿಗೆ, ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಕೆದಿಲ ದ್ವಿತೀಯ ಸ್ಥಾನವನ್ನು ಗಳಿಸಿತು ಹಾಗೂ ದ.ಕ. ಹಿರಿಯ ಪ್ರಾಥಮಿಕ ಶಾಲೆ, ಪಾಟ್ರಕೋಡಿ ನಾಲ್ಕು ಪ್ರಶಸ್ತಿಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆಯಿತು.

ಕಡೇಶಿವಾಲಯ ಕ್ಲಸ್ಟರ್ ಮಟ್ಟದ ಸ್ಪರ್ಧೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಉನ್ನತೀಕರಿಸಿದ ಶಾಲೆ ಕಡೇಶಿವಾಲಯ ಇವರು ಒಟ್ಟು ಹದಿನೈದು ಪ್ರಶಸ್ತಿಗಳಿಗೆ ಭಾಜನರಾಗಿ ಪ್ರಥಮ ಸ್ಥಾನ ಪಡೆದುಕೊಂಡರು. ಹತ್ತು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡ, ದ.ಕ. ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಣ್ಣು ಪಲ್ಕೆರವರು ದ್ವಿತೀಯ ಸ್ಥಾನಿಯಾಗಿ ಮಿಂಚಿದರು ಹಾಗೂ ಉಳಿದ ಐದು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇರಾ ತೃತೀಯ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಂಡರು. ಅಲ್ಲದೆ, ಚಿತ್ರಕಲಾ, ಕವನ ವಾಚನ ಹಾಗೂ ಮಿಮಿಕ್ರಿ ಸ್ಪರ್ಧೆಗಳಲ್ಲಿ ಕ್ರಮವಾಗಿ ಪ್ರಥಮ ಸ್ಥಾನವನ್ನು ಪಡೆದ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ ಗಡಿಯಾರ ಇಲ್ಲಿನ ಮೂವರು ವಿದ್ಯಾರ್ಥಿಗಳಾದ, ಏಳನೇ ತರಗತಿಯ ಅನ್ಸಾಮ್ ಹಾಗೂ ನಿಷ್ಫಾ ಮತ್ತು ಆರನೇ ತರಗತಿಯ ಝಿಯಾನ್ ಮುಂದಿನ ಸುತ್ತಿನ ತಾಲೂಕು ಮಟ್ಟದಲ್ಲಿನ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾದರು. ವಿಜೇತರೆಲ್ಲರಿಗೂ, ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರಿಂದ ಬಹುಮಾನ ವಿತರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಂಟ್ವಾಳ | ಎಸ್ಐಒದಿಂದ ಕೋಟೆಕಣಿ ಸರ್ಕಾರಿ ಶಾಲೆಗೆ 20 ಜೊತೆ ಬೆಂಚು ಡೆಸ್ಕುಗಳ ಕೊಡುಗೆ

ಪರಿಸರ ಜಾಗೃತಿ ಸಂದೇಶ ಸಾರುವ ಸಲುವಾಗಿ ಸಸಿಗೆ ನೀರೆರೆಯುವ ಮೂಲಕ ಕಡೇಶಿವಾಲಯ ಗ್ರಾಮ ಪಂಚಾಯತಿ ಅಧ್ಯಕ್ಷೆ ಭಾರತಿ ಕಾರ್ಯಕ್ರಮಕ್ಕೆ ಚಾಲನೆ ನೀಡದರು. ಬಳಿಕ ಶಿಕ್ಷಣ ಇಲಾಖೆಯ ಸುಧಾಕರ್ ಭಟ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಆಮಿನಾ ಬಾನು ಸ್ವಾಗತಿಸಿ, ಸಂಚಾಲಕ ಅಬ್ದುಲ್ ಖಾದರ್ ಕುಕ್ಕಾಜೆ ಅಧ್ಯಕ್ಷೀಯ ಭಾಷಣ ಮಾಡಿದರು. ಶಿಕ್ಷಕಿ ನಿಖಿತಾ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮವನ್ನು ಶಿಕ್ಷಕ ಹೈದರ್ ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಕಡೇಶಿವಾಲಯ ಗ್ರಾಮ ಪಂಚಾಯತಿಯ ಉಪಾಧ್ಯಕ್ಷ ಸುರೇಶ್ ಪೂಜಾರಿ ಕನ್ನೋಟ್, ನಗರ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಯಾಗಿ ಸತೀಶ್ ರಾವ್, ಬಂಟ್ವಾಳದ ಶಿಕ್ಷಕ ಸಂಘದ ಅಧ್ಯಕ್ಷ ಗುರುರಾಜ್‌ ಪಾಟ್ರಕೋಡಿ, ವಿಸ್ಡಮ್‌ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ರಾಜೇಶ್ವರಿ, ಪ್ರಧಾನ ಕಾರ್ಯದರ್ಶಿ ಜನಾಬ್ ಝಕರಿಯಾ, ಜುಮಾ ಮಸೀದಿ ಗಡಿಯಾರದ ಅಧ್ಯಕ್ಷ ಜನಾಬ್ ರಿಯಾಝ್ ಕಲ್ಲಾಜೆ, ಹಾಜಿ ಇಸ್ಮಾಯಿಲ್ ಕಲ್ಲಾಜೆ, ಜನಾಬ್ ಅಲ್ತಾಫ್ ದಾರಿಮಿ ಖತೀಬರು, ಹಯಾತುಲ್ ಇಸ್ಲಾಮ್ ಜುಮಾ ಮಸೀದಿ ಪೆರ್ಲಾಪು ಮತ್ತು ಅಧ್ಯಾಪಕರು ಉಪಸ್ಥಿತರಿದ್ದರು.


eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...