ಬಂಟ್ವಾಳ | ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ: ಎಸ್‌ಐಒದಿಂದ ವಿದ್ಯಾರ್ಥಿ ಮಿಕ್ದಾದ್‌ಗೆ ಅಭಿನಂದನೆ

Date:

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿ ಮೊಹಮ್ಮದ್ ಮಿಕ್ದಾದ್ ಎಂ ಎಚ್‌ ಅವರನ್ನು ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನಗರದ ಎಸ್‌ಐಒಯಿಂದ ಅಭಿನಂದಿಸಲಾಯಿತು.

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ(ಎಸ್‌ಐಒ) ಪಾಣೆಮಂಗಳೂರು ಘಟಕವು ದಕ್ಷಿಣ ಕನ್ನಡ ಜಿಲ್ಲಾ 2025-2026ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ 14 ವರ್ಷದ ಒಳಗಿನ ಬಾಲಕರಿಗಾಗಿ ಆಯೋಜಿಸಿದ್ದ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕಿನ ಅಮ್ಟೂರು ಕರಿಂಗಾಣದಲ್ಲಿರುವ ದೇವಮಾತ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಎಂ ಎಚ್ ಮೊಹಮ್ಮದ್ ಮಿಕ್ದಾದ್‌ ಪ್ರಥಮ ಸ್ಥಾನ ಪಡೆದಿದ್ದಾರೆ.

ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿರುವ ಹಿನ್ನೆಲೆಯಲ್ಲಿ ರಾಜ್ಯಮಟ್ಟದ ಸ್ಪರ್ಧೆಗೂ ಮೊಹಮ್ಮದ್ ಮಿಕ್ದಾದ್‌ ಆಯ್ಕೆಯಾಗಿದ್ದಾರೆ. ಇವರು ನಮ್ಮ ಐಸಿಸಿ(ಇಸ್ಲಾಮಿಕ್ ಚಿಲ್ಡ್ರನ್ ಸರ್ಕಲ್) ವಿದ್ಯಾರ್ಥಿಯಾಗಿದ್ದಾರೆ. ಎಸ್‌ಐಒ ತಂಡವು ಭೇಟಿ ನೀಡಿ ಅವರ ಸಾಧನೆಯನ್ನು ಮೆಚ್ಚಿ ಸ್ಮರಣಿಕೆ ನೀಡುವ ಮೂಲಕ ಗೌರವ ಸಲ್ಲಿಸಲಾಯಿತು. ಇವರು ಬೋಳಂಗಡಿ ನಿವಾಸಿ ಎಂ ಎಚ್‌ ಮುಸ್ತಫಾ ಮತ್ತು ಫಾಮಿದ ದಂಪತಿಯ ಪುತ್ರ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೋಲಾರ | ಗುರುಭವನ ನಿರ್ಮಾಣಕ್ಕೆ 2.50 ಕೋಟಿ ಅನುದಾನ; 2027ಕ್ಕೆ ಕಟ್ಟಡ ಪೂರ್ಣಗೊಳಿಸುವ ನಿರ್ಧಾರ

ಈ ಸಂದರ್ಭದಲ್ಲಿ ಪಾಣೆಮಂಗಳೂರು ಎಸ್‌ಐಒ ಕಾರ್ಯದರ್ಶಿ ಬ್ರ​. ಅಬ್ದುಲ್ ರಹ್ಮಾನ್, ಬ್ರ. ಮಾಹಿರ್, ಬ್ರ. ಮಶ್ಕೂರ್, ಬ್ರ. ಸಲಾಹುದ್ದೀನ್, ಬ್ರ.ಮಿಶಾಬ್ , ಬ್ರ.ನಾಫೀ, ಬ್ರ.ಹಾಬಿಲ್, ಬ್ರ. ಅರ್ಮಾನ್, ಬ್ರ.ಯಾಸೀನ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...