ಬಂಟ್ವಾಳ | ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಕಾರು: ಮಹಿಳೆ ಸಾವು

Date:

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದು ಆಳದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು, ಮಹಿಳೆಯೋರ್ವರು ಮೃತಪಟ್ಟ ಘಟನೆ ಅ. 14 ರ ಸೋಮವಾರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಬಿ.ಸಿ.ರೋಡು- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತಪಟ್ಟ ಮಹಿಳೆಯನ್ನು ಮಂಗಳೂರು ನಗರದ ಕೊಡಿಯಾಲುಬೈಲು ನಿವಾಸಿ ಭಾಗೀರಥಿ (62) ಎಂದು ಗುರುತಿಸಲಾಗಿದೆ.

ಇನ್ನು ಘಟನೆಯಲ್ಲಿ ಕಾರು ಚಲಾಯಿಸುತ್ತಿದ್ದ ರೂಪೇಶ್(39) ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ನಗರದ ಯುನಿಟಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೂಪೇಶ್ ಅವರ ಪತ್ನಿ ಸುಚಿತ್ರಾ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೂಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಮುಂಜಾನೆ ಸುಮಾರು 4.30ರ ಸುಮಾರಿಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿ ಬಿದ್ದಿದೆ. ರೂಪೇಶ್ ಅವರು ತುಮಕೂರು ಜಿಲ್ಲೆಯವರಾಗಿದ್ದು, ಮಂಗಳೂರಿನ ತನ್ನ ಪತ್ನಿ, ಅತ್ತೆಯ ಜೊತೆಗೆ ತುಮಕೂರಿನಿಂದ ಪ್ರಯಾಣ ಬೆಳೆಸಿದ್ದರು. ದಾರಿಯ ಮಧ್ಯೆ ಧರ್ಮಸ್ಥಳ ದೇವಸ್ಥಾನಕ್ಕೆ ತೆರಳಿ ವಾಪಾಸು ಮಂಗಳೂರಿಗೆ ಬರುತ್ತಿದ್ದ ಬಾಂಬಿಲದಲ್ಲಿ ಕಾರು ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ ಎಂದು ಬಂಟ್ವಾಳ ಸಂಚಾರಿ ಪೊಲೀಸರು ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಮೂಲತಃ ಮಂಗಳೂರು ಕೊಡಿಯಾಲ್ ಬೈಲು ನಿವಾಸಿಯಾದ ಪಿಡಬ್ಲ್ಯೂಡಿ ಇಂಜಿಜಿನಿಯರ್ ಗೋಪಾಲ ಎಂಬುವವರ ಸಹೋದರಿ ಭಾಗೀರಥಿ ಅವರ ಪುತ್ರಿ ಸುಚಿತ್ರಾ ಮತ್ತು ಅಳಿಯ ರೂಪೇಶ್ ಜತೆ ಪ್ರಯಾಣಿಸುತ್ತಿದ್ದರು. ರೂಪೇಶ್ ಅವರು ತುಮಕೂರು ಜಿಲ್ಲೆಯವರಾಗಿದ್ದು, ಭಾಗೀರಥಿ ಅವರು ದಸರಾ ರಜೆಯಲ್ಲಿ ಅಳಿಯ ಮಗಳ ಜೊತೆ ತುಮಕೂರಿಗೆ ಹೋಗಿ, ಬಳಿಕ ಅಲ್ಲಿಂದ ಧರ್ಮಸ್ಥಳ ದೇವಸ್ಥಾನಕ್ಕೆ ತೆರಳಿ ವಾಪಾಸು ಮಂಗಳೂರಿಗೆ ಬರುತ್ತಿದ್ದ ಬಾಂಬಿಲದಲ್ಲಿ ಕಾರು ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ದೇಶದ ಜನ ಜಾಗೃತ ಪ್ರಜೆಗಳಾಗದಿದ್ದಲ್ಲಿ ಪ್ರಜಾಪ್ರಭುತ್ವ ಯಶಸ್ಸಾಗಲು ಸಾಧ್ಯವಿಲ್ಲ: ನಿಕೇತ್ ರಾಜ್ ಮೌರ್ಯ

ನಿಯಂತ್ರಣ ತಪ್ಪಿದ ರಭಸಕ್ಕೆ ಕಾರು ಹೆದ್ದಾರಿಯಿಂದ ಸುಮಾರು 200 ಮೀಟರ್ ದೂರವಿದ್ದ ಅಡಿಕೆ ತೋಟಕ್ಕೆ ನುಗ್ಗಿದ್ದು, ತೋಟದಲ್ಲಿದ್ದ ಮಣ್ಣಿನ ದಿಬ್ಬವೊಂದರ ಮೇಲೆ ಬಿದ್ದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಘಟನೆಯ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫೋಟೋ, ವಿಡಿಯೋ ಕೃಪೆ: ಮೊಹಮ್ಮದ್ ರಾಝಿಕ್, ಎನ್‌ ಸಿ ರೋಡ್

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...