ಗ್ರಾಮ ಪಂಚಾಯತಿ ಅಧ್ಯಕ್ಷನನ್ನು ದಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಪುರ ಗ್ರಾಮದಲ್ಲಿ ನಡೆದಿದೆ. ಮದರಾ ಬಿ. ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಗೌಡಪ್ಪಗೌಡ ಪಾಟೀಲ್(50) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.
ಗೌಡಪ್ಪಗೌಡ ಅವರು ಮದರಿ ಗ್ರಾಮದ ನಿವಾಸಿಯಾಗಿದ್ದು. ಹಳೇ ವೈಷಮ್ಯದ ಹಿನ್ನೆಲೆ ದುಷ್ಕರ್ಮಿಗಳು ಗೌಡಪ್ಪಗೌಡರನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




