ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ 4 ದಿನ ಮಳೆ ಸಾಧ್ಯತೆ

Date:

ರಾಜ್ಯದ ನಾನಾ ಭಾಗಗಳಲ್ಲಿ ಜುಲೈ ತಿಂಗಳಿನಲ್ಲಿ ಅಬ್ಬರಿಸಿದ್ದ ಮಳೆ, ಆಗಸ್ಟ್‌ನಲ್ಲಿ ಕೈಕೊಟ್ಟಿತ್ತು. ಇದೀಗ, ಸೆಪ್ಟೆಂಬರ್‌ನಲ್ಲಿ ಉತ್ತಮ ಮಳೆಯಾಗುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿಯೂ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.

ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶ ಕರಾವಳಿ ಪ್ರದೇಶದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಪ್ರದೇಶ ಹಾಸನ, ಚಿಕ್ಕಮಗಳೂರು ಹಾಗೂ ಕೊಡಗಿಯಲ್ಲಿ ಉತ್ತಮ ಮಲೆಯಾಗಲಿದೆ. ಉತ್ತರ ಒಳನಾಡು ಪ್ರದೇಶಗಳಾದ ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ ಹಾಗೂ ಕಲಬುರಗಿಯಲ್ಲೂ ಮಳೆಯಾಗಲಿದೆ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...