ಬಸವಕಲ್ಯಾಣ | ಯೋಗದಿಂದ ದೈಹಿಕ ಸದೃಢತೆ ಸಾಧ್ಯ : ಗುರುಬಸವ ಪಟ್ಟದ್ದೇವರು

Date:

ಬಸವಕಲ್ಯಾಣದಲ್ಲಿ ನಡೆಯುವ 46ನೆಯ ಶರಣ ಕಮ್ಮಟ ಹಾಗೂ ಅನುಭವಮಂಟಪ ಉತ್ಸವ-2025ರ ನಿಮಿತ್ಯ
ಹಮ್ಮಿಕೊಂಡಿರುವ ಯೋಗ ಶಿಬಿರ ಹಮ್ಮಿಕೊಳ್ಳಲಾಗಿದೆ.

ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಶಿಬಿರ ಉದ್ಘಾಟನೆ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿ, ದೈಹಿಕ ಸದೃಢತೆಯನ್ನು ಮೀರಿದ ವ್ಯಾಯಾಮದ ಒಂದು ರೂಪವಾಗಿದೆ. ಇದು ಸಮತೋಲನ ಮತ್ತು ಸಾಮರಸ್ಯವನ್ನು ಬಯಸುವ ವ್ಯಕ್ತಿಗಳಿಗೆ ಒಂದು ಮಾರ್ಗವಾಗಿ ಕಾರ್ಯನಿರ್ವಹಿಸುತ್ತದೆʼ ಎಂದರು.

ʼಯೋಗ ಅಭ್ಯಾಸವು ಸಮ್ಯತೆಯನ್ನು ಹೆಚ್ಚಿಸಲು, ಏಕಾಗ್ರತೆಯನ್ನು ಸುಧಾರಿಸಲು ಮತ್ತು ಶಾಂತತೆಯ ಭಾವನೆಯನ್ನು ಉತ್ತೇಜಿಸಲು ವಿನ್ಯಾಸಗೊಳಿಸಲಾದ ವಿವಿಧ ಆಸನಗಳು ಮತ್ತು ಭಂಗಿಗಳನ್ನು ಸಂಯೋಜಿಸುತ್ತದೆ. ಯೋಗವು ಧ್ಯಾನ ತಂತ್ರಗಳ ಮೂಲಕ ಹಲವಾರು ಪ್ರಯೋಜಗಳನ್ನು ನೀಡುತ್ತದೆ. ಯೋಗ ಮಾಡುವುದರಿಂದ ಆರೋಗ್ಯದ ಸಮಸ್ಯೆಗಳನ್ನು ನಿಯಂತ್ರಿಸುವುದು, ತೂಕ ನಿರ್ವಹಣೆ ಮತ್ತು ಒತ್ತಡ ಹಾಗೂ ಆತಂಕವನ್ನು ಪರಿಹರಿಸುತ್ತದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 11 17 at 12.51.57 PM 1

ಯೋಗ ಗುರು ಮಹಾಲಿಂಗ ಮಹಾಲಿಂಗದೇವರು ಮಾತನಾಡಿ, ʼಆರೋಗ್ಯಕರ ಜೀವನಶೈಲಿಯನ್ನು ನಡೆಸಲು ಬಯಸುವವರಿಗೆ ಯೋಗವು ದೇಹ, ಮನಸ್ಸು ಮತ್ತು ಆತ್ಮದ ನಡುವೆ ಆಳವಾದ ಸಂಪರ್ಕವನ್ನು ಬೆಳೆಸುವ ಒಂದು ಆದರ್ಶ ಪರಿಹಾರವನ್ನು ಒದಗಿಸುತ್ತದೆ. ಯೋಗ ಮಾಡುವುದರಿಂದ ನಾವು ರೋಗ ಮುಕ್ತರಾಗಬಹುದು. ಯೋಗ ಶಿಬಿರದಲ್ಲಿ ಎಲ್ಲರೂ ಹೆಚ್ಚಿನ
ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕುʼ ಎಂದು ತಿಳಿಸಿದರು.

ಬಸವಕಲ್ಯಾಣ ಅನುಭವ ಮಂಟಪದ ಬಸವದೇವರು ಸಮ್ಮುಖ ವಹಿಸಿದ್ದರು. ಶಿಬಿರದ ಉದ್ಘಾಟನೆಯನ್ನು ಶರಣ ವಿಜಯಕುಮಾರ ಮಂಠಾಳೆ ಅವರು ನೆರವೇರಿಸಿದರು. ಬಸವಗುರುಪೂಜೆ ಡಾ.ಜಿ.ಎಸ್.ಭೂರಾಳೆ ಅವರು ಮಾಡಿದರು.

ಇದನ್ನೂ ಓದಿ : ಬೀದರ್‌ | ಬೌದ್ಧ ಸಾಂಸ್ಕೃತಿಕ ಭವನಕ್ಕೆ ₹10 ಕೋಟಿ ಅನುದಾನ : ಸಚಿವ ಈಶ್ವರ ಖಂಡ್ರೆ ಭರವಸೆ

ಮುಖ್ಯ ಅತಿಥಿಗಳಾಗಿ, ಸೂರ್ಯಕಾಂತ ಪಾಟೀಲ, ರಾಜಕುಮಾರ ಬಿರಾದಾರ, ಸಂಜುಕುಮಾರ ನಡುಕರ್, ಸೂರ್ಯಕಾಂತ ಗಾಯಕವಾಡ, ಅಮರೇಶ್ವರ ಸ್ವಾಮಿ ರವೀಂದ್ರ ಕೋಳಕುರ್, ವೀರಭದ್ರಪ್ಪ ಸ್ವಾಗತಿಸಿದರು. ವಿಜಯಕುಮಾರ ಪಟ್ನೆ ಅವರಿಂದ ಶರಣು ಸಮರ್ಪಣೆ ನಡೆಯಿತು. ಶಿವಕುಮಾರ ಓಕುಳಿ ನಿರೂಪಿಸಿದರು.


eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...