ಬೀದರ್‌ | ಟ್ರ್ಯಾಕ್ಟರ್‌ ತಗುಲಿ ಬಸವಣ್ಣ ಪ್ರತಿಮೆ ಭಗ್ನ; ಹೊಸ ಪ್ರತಿಮೆ ಸ್ಥಾಪನೆಗೆ ಸೂಚನೆ : ಸಚಿವ ಈಶ್ವರ ಖಂಡ್ರೆ

Date:

ಬೀದರ್‌ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ದಾಡಗಿ ಕ್ರಾಸ್ ರಸ್ತೆಯಲ್ಲಿನ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಪ್ರತಿಮೆ ಟ್ರ್ಯಾಕ್ಟರ್‌ ಚಾಲಕನ ನಿರ್ಲಕ್ಷ್ಯದಿಂದ ಭಗ್ನವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ.

ʼಈ ಘಟನೆಯಲ್ಲಿ ಯಾವುದೇ ಕಿಡಿಗೇಡಿಗಳ ಕೃತ್ಯ ಕಂಡು ಬಂದಿಲ್ಲ ಎಂಬುದನ್ನು ಪೊಲೀಸ್ ಇಲಾಖೆಯ ತನಿಖೆಯಿಂದ ಗೊತ್ತಾಗಿದೆ. ಘಟನೆ ಸಂಬಂಧ ಆರೋಪಿ ಟ್ರ್ಯಾಕ್ಟರ್‌ ಚಾಲಕನನ್ನು ಈಗಾಗಲೇ ಬಂಧಿಸಿ ಪ್ರಕರಣ ದಾಖಲಿಸಲಾಗಿದೆʼ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಘಟನೆಯ ಬಗ್ಗೆ ನನಗೆ ಮಾಹಿತಿ ದೊರೆತ ಕೂಡಲೇ ಕ್ರಮ ವಹಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಹಾನಿಯಾಗಿರುವ ವಿಶ್ವಗುರು ಬಸವಣ್ಣನವರ ಪ್ರತಿಮೆಯ ಸ್ಥಳದಲ್ಲಿಯೇ ಹೊಸದಾಗಿ ಬಸವಣ್ಣನವರ ಪ್ರತಿಮೆ ಸ್ಥಾಪಿಸಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ಹಾಗಾಗಿ ಜಿಲ್ಲೆಯ ಬಸವ ಭಕ್ತರು ಶಾಂತಿ ಕಾಪಾಡುವಂತೆ ಸಚಿವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...