ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಗೆ ಬಸವರಾಜ ಸೂಳಿಬಾವಿ ಆಗ್ರಹ

Date:

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲರನ್ನು ಬದಲಾಯಿಸಬೇಕೆಂದು ಪ್ರಗತಿಪರ ಚಿಂತಕ, ಹೋರಾಟಗಾರ ಬಸವರಾಜ ಸೂಳಿಬಾವಿ ಆಗ್ರಹಿಸಿದರು.

ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನಾ ಹೋರಾಟ ಸಮಿತಿಯ 6 ಜನ ಹೋರಾಟಗಾರರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.

ವಿಜಯಪುರ ನಗರದ ಡಾ. ಬಿ.ಆರ್.ಅಂಬೇಡ್ಕ‌ರ್ ವೃತ್ತದಲ್ಲಿ 108 ದಿನಗಳ ಕಾಲ ಶಾಂತಿಯುತ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿ ಎಲ್ಲ ರೀತಿಯ ಸೌಲಭ್ಯ ಹೊಂದಿರುವ ವಿಜಯಪುರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸಬೇಕು ಹಾಗೂ ಸರ್ಕಾರದ ಉದ್ದೇಶಿತ ಖಾಸಗಿ (ಪಿಪಿಪಿ) ಮಾದರಿಯ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯನ್ನು ಕೈ ಬಿಡಬೇಕೆಂದು ಆಗ್ರಹಿಸಿ ನಡೆದ ಸತ್ಯಾಗ್ರಹವು ನ್ಯಾಯಯುತವಾಗಿತ್ತು. ಈ ಹೋರಾಟಕ್ಕೆ ಸ್ಪಂದಿಸದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಸೇರಿದಂತೆ ಜಿಲ್ಲೆಯ ಸಚಿವರು, ಶಾಸಕರ ಮನೆಗಳ ಮುಂದೆ ಧರಣಿ ಹಮ್ಮಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಪಿಪಿಪಿ ವಿರುದ್ಧ ಹೋರಾಟಗಾರರ ಬಂಧನ: ಬಿಡುಗಡೆಗೆ ಜನ ವೇದಿಕೆ ಸಂಘಟನೆ ಆಗ್ರಹ

ಜನೆವರಿ 1ರಂದು ಉಸ್ತುವಾರಿ ಸಚಿವ ಎಂ ಬಿ ಪಾಟೀಲರ ಮನೆಯ ಮುಂದೆ ಹಮ್ಮಿಕೊಂಡಿದ್ದ ಧರಣಿ ಹೋರಾಟವನ್ನು ಹೋರಾಟವನ್ನು ಹತ್ತಿಕ್ಕುವ ದೃಷ್ಟಿಯಿಂದ ದಾರಿ ಮಧ್ಯದಲ್ಲಿ ಹೋರಾಟಗಾರರನ್ನು ತಡೆದು ಅವರ ಮೇಲೆ ದೈಹಿಕ ಹಲ್ಲೆ ಮಾಡಿ ಬಂಧನಕ್ಕೊಳಪಡಿಸಿದ್ದು ಖಂಡನೀಯವಾಗಿದೆ ಎಂದರು.

ಸಚಿವ ಎಂ.ಬಿ.ಪಾಟೀಲರು ಗೌಡ್ಕಿ ಗತ್ತಿನಲ್ಲಿದ್ದಾರೆ ಅವರನ್ನು ಸಿಎಂ ಸಿದ್ದರಾಮಯ್ಯ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಬದಲಿಸಬೇಕು ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...