ಆಧಾರರಹಿತ ಮತ್ತು ಸುಳ್ಳು : ಧರ್ಮಸ್ಥಳ ಬೆಳವಣಿಗೆ ಬಗ್ಗೆ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

Date:

ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ಹಿನ್ನೆಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿರುವ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ, ” ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಆರೋಪವು ”ಆಧಾರರಹಿತ ಮತ್ತು ಸುಳ್ಳು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿ ಏಜೆನ್ಸಿ ಪಿಟಿಐಗೆ ಸಂದರ್ಶನ ನೀಡಿರುವ ವೀರೇಂದ್ರ ಹೆಗ್ಗಡೆ, “ಎಸ್ಐಟಿ ತನಿಖೆಯನ್ನು ಸ್ವಾಗತಿಸುತ್ತೇನೆ” ಎಂದು ತಿಳಿಸಿದ್ದಾರೆ.

“ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂದು ನಡೆಸುತ್ತಿರುವ ಎಸ್‌ಐಟಿ ತನಿಖೆಗೆ ಸಂಪೂರ್ಣವಾಗಿ ಸಹಕರಿಸಲು ಸಿದ್ಧರಿದ್ದೇವೆ. ಸತ್ಯ ಎಲ್ಲರಿಗೂ ತಿಳಿಯಬೇಕು. ಈ ಸಂಬಂಧ ಆದಷ್ಟು ಬೇಗ ತನಿಖೆ ಪೂರ್ಣಗೊಳ್ಳಬೇಕು. ನಾವು ನಮ್ಮ ಎಲ್ಲಾ ರೀತಿಯ ಸಹಕಾರ ನೀಡುತ್ತಲೇ ಇದ್ದೇವೆ” ಎಂದು ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ಪ್ರಕರಣವನ್ನಿಟ್ಟುಕೊಂಡು ದೇವಸ್ಥಾನದ ಹೆಸರನ್ನು ಹಾಳು ಮಾಡಲು ಕೆಲವರು ಯತ್ನಿಸುತ್ತಿರುವುದು ಕಂಡುಬಂದಿದೆ. ಅವರೆಲ್ಲರ ಹೆಸರುಗಳು ಕೂಡ ಸಾರ್ವಜನಿಕ ವಲಯದಲ್ಲಿದೆ. ಎಸ್‌ಐಟಿ ಈ ಬಗ್ಗೆ ತನಿಖೆ ನಡೆಸುತ್ತಿದೆ. ಅದರ ಫಲಿತಾಂಶಕ್ಕಾಗಿ ನಾವೂ ಕೂಡ ಕಾಯುತ್ತಿದ್ದೇವೆ. ದೇವಸ್ಥಾನದ ಹೆಸರನ್ನು ಹಾಳು ಮಾಡುತ್ತಿರುವವರ ಬಗ್ಗೆಯೂ ತನಿಖೆ ನಡೆಸುವುದು ಎಸ್‌ಐಟಿಯ ಕಾರ್ಯ” ಎಂದು ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ ಪಿಟಿಐ ಸಂದರ್ಶನದಲ್ಲಿ ಆಗ್ರಹಿಸಿದ್ದಾರೆ.

“ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಹತ್ಯೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಕೂಡ ಧರ್ಮಸ್ಥಳ ದೇವಸ್ಥಾನ ಮತ್ತು ಆಡಳಿತ ಮಂಡಳಿಯು ಸಿಬಿಐ ತನಿಖೆಗೆ ಸಂಪೂರ್ಣವಾಗಿ ಸಹಕರಿಸಿದೆ. ಆದರೆ, ಇದೇ ಪ್ರಕರಣವನ್ನಿಟ್ಟುಕೊಂಡು ಪಟ್ಟಭದ್ರ ಹಿತಾಸಕ್ತಿಗಳು ಸೋಷಿಯಲ್ ಮೀಡಿಯಾಗಳ ಮೂಲಕ ಯುವಕರನ್ನು ದಾರಿ ತಪ್ಪಿಸುತ್ತಿವೆ” ಎಂದು ಹೇಳಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌’ನಲ್ಲಿ ಸ್ಥಾನ ಪಡೆದ ಕರ್ನಾಟಕ ಸರ್ಕಾರದ ‘ಶಕ್ತಿ ಯೋಜನೆ’

“ಸೌಜನ್ಯ ಪ್ರಕರಣ ನಡೆದಾಗ ನಾವೇ ಪೊಲೀಸರಲ್ಲಿ ಕೂಡಲೇ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಕೋರಿಕೊಂಡಿದ್ದೆವು. ಈ ಪ್ರಕರಣಕ್ಕೂ ಧರ್ಮಸ್ಥಳಕ್ಕೂ ಯಾವುದೇ ಸಂಬಂಧವಿಲ್ಲದಿದ್ದರೂ ನಮ್ಮ ಕುಟುಂಬದ ಸದಸ್ಯರ ಮೇಲೆಯೇ ಹಾಕಲಾಯಿತು. ಆರೋಪ ಕೇಳಿಬಂದ ಕುಟುಂಬದ ಸದಸ್ಯ ಆ ಸಂದರ್ಭದಲ್ಲಿ ನಮ್ಮ ದೇಶದಲ್ಲೇ ಇರಲಿಲ್ಲ. ಅವರು ವಿದ್ಯಾಭ್ಯಾಸದ ಉದ್ದೇಶಕ್ಕಾಗಿ ಅಮೇರಿಕಾದಲ್ಲಿದ್ದರು. ಸೌಜನ್ಯ ಪ್ರಕರಣದಲ್ಲಿ ನಮ್ಮ ಕುಟುಂಬ ಮೇಲಿನ ಆರೋಪಗಳೆಲ್ಲವೂ ಸುಳ್ಳು. ಆರೋಪಗಳೆಲ್ಲವೂ ಆಧಾರರಹಿತ ಮತ್ತು ನಮ್ಮ ವಿರುದ್ಧ ಅಪಪ್ರಚಾರದ ಭಾಗವಾಗಿದೆ” ಎಂದು ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...