ಉಡುಪಿ | ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ : ಅರ್ಜಿ ಆಹ್ವಾನ

Date:

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶೇ.75 ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಹೊಂದಿದ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ ಪಡೆಯಲು ಸೇವಾಸಿಂಧು, ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಸೇವಾಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕದಲ್ಲಿ ಕನಿಷ್ಟ 10 ವರ್ಷಗಳ ಕಾಲ ವಾಸವಾಗಿದ್ದು, ವಾರ್ಷಿಕ ಆದಾಯ 2 ಲಕ್ಷ ರೂ. ಒಳಗಿರುವ, ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಚಾಲನೆ ಮಾಡಲು ಸಾಮರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ, ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿ ಚಾಲಿತ ವೀಲ್ ಚೇರ್ ಚಲಾಯಿಸಲು ಇತರೆ ಎಲ್ಲಾ ರೀತಿಯಲ್ಲಿ ಸದೃಡರಾಗಿರುವ, ಈ ಹಿಂದೆ ಸರ್ಕಾರದಿಂದ ಯಂತ್ರಚಾಲಿತ ದ್ವಿಚಕ್ರವಾಹನವನ್ನು ಪಡೆದಿರದ ವಿಕಲಚೇತನರು ಜನವರಿ 21 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820-2574810, 2574811 ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಕಛೇರಿಯನ್ನು ಖುದ್ದಾಗಿಯೂ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...