ಸಮೀಕ್ಷೆ ನೆಪದಲ್ಲಿ ಬಿಬಿಎಂಪಿ ಕಚೇರಿಗಳು ಖಾಲಿ ಖಾಲಿ, ಸಾರ್ವಜನಿಕ ಕೆಲಸಗಳು ಅಸ್ತವ್ಯಸ್ತ : ಆಮ್ ಆದ್ಮಿ ಪಕ್ಷದಿಂದ ಗಂಭೀರ ಆರೋಪ

Date:

ಕಳೆದ 15 ದಿನಗಳಿಂದ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯ ನೆಪದಲ್ಲಿ ಬೆಂಗಳೂರಿನ ಎಲ್ಲಾ ನಗರ ಪಾಲಿಕೆ ಕಚೇರಿಗಳಲ್ಲಿನ ಸಿಬ್ಬಂದಿಗಳು ಕೆಲಸಕ್ಕೆ ಹಾಜರಾಗದೆ ಕಚೇರಿಗಳು ಸಂಪೂರ್ಣ ಬಣಗುಡುತ್ತಿವೆ. ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಅಲೆದಾಡುವಂತಹ ಪರಿಸ್ಥಿತಿ ಬಂದೊದಗಿದೆ ಎಂದು ಆಮ್‌ ಆದ್ಮಿ ಪಕ್ಷ ಗಂಭೀರ ಆರೋಪ ಕೂಡಲೇ ಮುಖ್ಯ ಆಯುಕ್ತರು ಇತ್ತ ಕಡೆ ಗಮನಹರಿಸಿ ಸಾರ್ವಜನಿಕ ಕೆಲಸಗಳು ಮುಂದುವರಿಯುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಆಮ್ ಆದ್ಮಿ ಪಕ್ಷ ಇಂದು ಆಗ್ರಹಿಸಿತು.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ನಗರಪಾಲಿಕೆ ಕಚೇರಿಯಲ್ಲಿ ಪಕ್ಷದ ಮುಖಂಡ ಅಣ್ಣ ನಾಯಕ್ ಫ್ಯಾಕ್ಟ್ ಚೆಕ್ ಮಾಡಿರುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಸಮೀಕ್ಷೆಗಾಗಿ ಸರ್ಕಾರ ಶಿಕ್ಷಣ ಇಲಾಖೆಯ ಸಿಬ್ಬಂದಿಗಳನ್ನು ನೇಮಿಸಿದೆ. ಆದರೆ ಬಿಬಿಎಂಪಿ ಸಿಬ್ಬಂದಿಗಳು ಕಳೆದ ಹಲವು ದಿನಗಳಿಂದ ಕಚೇರಿಗೆ ಬಾರದೆ ಗೈರು ಹಾಜರಾಗಿ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಭಂಗ ಉಂಟು ಮಾಡುತ್ತಿದ್ದಾರೆ. ಕೂಡಲೇ ಜಿಬಿಎ ಮುಖ್ಯ ಆಯುಕ್ತರು ಹಾಗೂ ನಗರ ಪಾಲಿಕೆ ಆಯುಕ್ತರುಗಳು ತಮ್ಮ ಸಿಬ್ಬಂದಿಗಳಿಗೆ ಎಚ್ಚರಿಕೆಯನ್ನು ನೀಡಿ ಕಚೇರಿಗಳಿಗೆ ಹಾಜರಾಗುವಂತೆ ಸೂಚಿಸಬೇಕು, ಹಾಗೂ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳ ಬೇಕೆಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...