ಬೆಂಗಳೂರು | ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು; 63 ನಿವಾಸಿಗಳಿಗೆ ಶೀಘ್ರ ಪರಿಹಾರ: ಬಿಬಿಎಂಪಿ

Date:

ಬೆಂಗಳೂರು ನಗರದಲ್ಲಿ ಶನಿವಾರ ಮತ್ತು ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಶೀಘ್ರವೇ ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ. ಪಾಲಿಕೆ ತನ್ನ ನಿಧಿಯಿಂದ ನೇರ ಲಾಭ ವರ್ಗಾವಣೆಯಡಿ ಹಾನಿಗೊಂಡ ಪ್ರತಿ ಮನೆಗೆ ಹತ್ತು ಸಾವಿರ ರೂಪಾಯಿ ಪರಿಹಾರ ನೀಡಲಿದೆ ಎಂದು ತಿಳಿಸಿದರು.

ಮಳೆಯಿಂದಾಗಿ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಅಧಿಕ ಮನೆಗಳಿಗೆ ಹಾನಿಯಾಗಿದೆ. ಯಲಹಂಕ ವಲಯದ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿಯೂ ಹಲವು ಮನೆಗಳಿಗೆ ನೀರು ನುಗ್ಗಿದೆ. ಒಟ್ಟಾಗಿ 63 ಮನೆಗಳಿಗೆ ಮಳೆ ನೀರು ನುಗ್ಗಿದೆ. ಶೀಘ್ರವೇ ಈ ಮನೆಗಳಿಗೆ ಪರಿಹಾರ ನೀಡುವಂತೆ ವಲಯ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೋಮವಾರ ತಿಳಿಸಿದ್ದಾರೆ.

“ಕೇಂದ್ರೀಯ ವಿಹಾರದಲ್ಲಿರುವ ಅಪಾರ್ಟ್‌ಮೆಂಟ್ ಸಮುಚ್ಚಯವು ಯಲಹಂಕ ಕೆರೆಯ ಹೊರಗಿದೆ. ಸಮುಚ್ಚಯದ ಗೋಡೆಯು ಕುಸಿದು ಬಿದ್ದು ಹಲವು ಮನೆಗಳಿಗೆ ನೀರು ನುಗ್ಗಿದೆ. ನೀರನ್ನು ತೆಗೆಯುವ ಕಾರ್ಯ ಮಾಡಲಾಗುತ್ತಿದೆ. ಮಹಾಲಕ್ಷ್ಮಿ ಲೇಔಟ್‌ನಲ್ಲಿ 63 ಮನೆಗಳು ಜಲಾವೃತವಾಗಿದೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕರ್ನಾಟಕದ 15 ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೂ ಧಾರಾಕಾರ ಮಳೆ: ಹವಾಮಾನ ಇಲಾಖೆ

“ಯಲಹಂಕದ ಅಪಾರ್ಟ್‌ಮೆಂಟ್‌ ಕೇಂದ್ರೀಯ ವಿಹಾರ ಕೆರೆ ದಂಡೆಯ ಕೆಳಗಿದೆ. ಅಲ್ಲಿ ಬಿಬಿಎಂಪಿ ಮಳೆನೀರು ಚರಂಡಿ ನಿರ್ಮಿಸಿದೆ. ಆದರೂ ಭಾರೀ ಮಳೆಯಿಂದಾಗಿ ಪ್ರದೇಶವು ಜಲಾವೃತವಾಗಿದೆ. ನಾವು ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸುತ್ತೇವೆ” ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ತಿಳಿಸಿದರು.

ಶನಿವಾರ ಬೆಂಗಳೂರಿನಲ್ಲಿ 115 ಮಿ.ಮೀ ಮಳೆ ಆಗಿತ್ತು. ಭಾನುವಾರವೂ ನಗರದಲ್ಲಿ ಭಾರೀ ಮಳೆ ಸುರಿದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...