ಮೊಳಕಾಲ್ಮೂರು | ಮಧ್ಯರಾತ್ರಿ ಆಂಜನೇಯ ದೇವಾಲಯಕ್ಕೆ ನುಗ್ಗಿದ ಕರಡಿ; ಗ್ರಾಮಸ್ಥರಲ್ಲಿ ಆತಂಕ

Date:

ಹಳ್ಳಿಯಲ್ಲಿರುವ ಆಂಜನೇಯ ಸ್ವಾಮಿ ದೇವಾಲಯಕ್ಕೆ ಕರಡಿಯೊಂದು ನಡುರಾತ್ರಿಯಲ್ಲಿ ಬಂದು ಸುತ್ತಾಡಿ ಹೋಗಿರುವ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಲಿಂಗನಹಳ್ಳಿ ಹನುಮಪ್ಪನ ಗುಡಿಗೆ ಶನಿವಾರ ರಾತ್ರಿ 11ಕ್ಕೆ ಕರಡಿ ಬಂದು ಓಡಾಡಿದ್ದು , ಗ್ರಾಮದ ಜನರನ್ನು ಆತಂಕಕ್ಕೀಡು ಮಾಡಿದೆ. ಕೆಲವರು ಈ ದೃಶ್ಯವನ್ನು ಮರೆಯಲ್ಲಿ ನಿಂತು ಮೊಬೈಲ್ ಮೂಲಕ ಸೆರೆ ಹಿಡಿದಿದ್ದಾರೆ.

ಹನುಮನ ಗುಡಿಗೆ ಬಂದಿರುವ ಕರಡಿ ನೋಡಿ ನಾಯಿಗಳು ಶಬ್ದ ಮಾಡಲು ಆರಂಭಿಸಿವೆ. ಇದ್ಯಾವುದನ್ನೂ ಲೆಕ್ಕಿಸದೆ ಆವರಣದಲ್ಲಿ ಅಡ್ಡಾಡಿ, ನಂತರ ಗುಡಿಯಲ್ಲಿರುವ ದೀಪದಲ್ಲಿನ ಎಣ್ಣೆ ಕುಡಿದಿದ್ದು, ಈ ದೃಶ್ಯ ಮೊಬೈಲ್‍ನಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಊರ ಒಳಗೆ ಅದರಲ್ಲೂ ದೇವಸ್ಥಾನಕ್ಕೆ ಕರಡಿ ಬಂದು ಹೋಗಿರುವ ಘಟನೆಯಿಂದ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ಗ್ರಾಮದ ಮುಖ್ಯರಸ್ತೆಯ ಪಕ್ಕದಲ್ಲಿರುವ ಆಂಜಿನೇಯಸ್ವಾಮಿ ದೇವಸ್ಥಾನಕ್ಕೆ ಬಂದು ಕೆಲವು ಗಂಟೆಗಳ ಕಾಲ ಅಲ್ಲಿಯೇ ಇರುವುದನ್ನು ನೋಡಿದ ಗ್ರಾಮಸ್ಥರು ರಾತ್ರಿಯಿಡೀ ಕರಡಿಯನ್ನು ಓಡಿಸಲು ಪ್ರಯತ್ನ ಪಟ್ಟರು ಆಗಿಲ್ಲ. ಈ ಕರಡಿಗೆ ಕಿವಿ ಕೇಳಿಸುವುದಿಲ್ಲ ಎಂದು ಸ್ಥಳೀಯರು ಹೇಳುತ್ತಿದ್ದು, ಇದೇ ಕರಡಿ ಈಗಾಗಲೇ ಐದಾರು ಬಾರೀ ಗ್ರಾಮದೊಳಗೆ ನುಗ್ಗಿದೆ ಎಂದು ತಿಳಿಸಿದ್ದಾರೆ.

ಜನರು ಜೋರಾಗಿ ಕೂಗಿ, ಅರಚಾಡಿದರೂ, ನಾಯಿಗಳು ಬೊಗಳಿದರು ಸಹ ಇದ್ಯಾವುದನ್ನು ಲೆಕ್ಕಿಸದೆ ತನ್ನ ಪಾಡಿಗೆ ಅದು ರಾತ್ರಿಯಿಡೀ ಊರಿನಲ್ಲಿ ಬೀಡು ಬಿಡುತ್ತದೆ. ಹಲವು ಬಾರಿ ಇಲ್ಲಿ ಕರಡಿ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಿಡಿಯಲು ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.

ಅನೇಕ ಸಲ ದೇವಸ್ಥಾನಗಳಲ್ಲಿ ವೃದ್ಧರು ಮಲಗುತ್ತಾರೆ.
ಆ ಸಮಯದಲ್ಲಿ ಯಾರೂ ಗುಡಿಯಲ್ಲಿ ಇರದಿದ್ದ ಕಾರಣ ಅಪಾಯವಾಗಿಲ್ಲ. ಸಾಮಾನ್ಯವಾಗಿ ಕರಡಿಗಳು ಹಸಿವಿನಿಂದ ಇದ್ದಾಗ, ಸಿಟ್ಟಿಗೆದ್ದಾಗ ದಾಳಿ ಮಾಡುವ ಸಾಧ್ಯತೆ ಹೆಚ್ಚು.‌ ಹೀಗಿದ್ದಾಗ ಕರಡಿ ಬಂದು ಹೋಗುವುದರಿಂದ ಜೀವಕ್ಕೆ ಅಪಾಯ ಕಟ್ಟಿಟ್ಟಬುತ್ತಿ ಎನ್ನುತ್ತಾರೆ ಗ್ರಾಮಸ್ಥರು.

ಆಹಾರ ಅರಸಿ ರಾತ್ರಿ ವೇಳೆಯಲ್ಲಿ ಗ್ರಾಮದೊಳಗೆ ನುಗ್ಗುವ ಈ ದೊಡ್ಡ ಕರಡಿಯ ಸಂಚಾರದಿಂದ ಗ್ರಾಮಸ್ಥರು ನಿದ್ದೆಗೆಟ್ಟು ಆತಂಕಕ್ಕೆ ಒಳಗಾಗಿದ್ದಾರೆ.

ಇತ್ತೀಚೆಗೆ ಚಳ್ಳಕೆರೆ ತಾಲೂಕಿನಲ್ಲಿ ದನ ಮೇಯಿಸುತ್ತಿದ್ದ ವೃದ್ಧನ ಮೇಲೆ ಕರಡಿ ದಾಳಿ ನಡೆಸಿ ಮುಖವನ್ನೆಲ್ಲಾ ಕಿತ್ತು ಹಾಕಿರುವ ಭೀಕರ ಘಟನೆ ನಡೆದಿತ್ತು. ನೋಡಲು ಸೌಮ್ಯ, ವಿಶೇಷ ಎನಿಸಿದರೂ ಬಹಳಷ್ಟು ಅಪಾಯಕಾರಿ ಪ್ರಾಣಿಯಾಗಿರುವುದರಿಂದ ಕರಡಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸೆರೆ ಹಿಡಿದು, ದೂರ ಸಾಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...