ಆಧುನಿಕ ಶಿಕ್ಷಣ, ಮಾಹಿತಿ ತಂತ್ರಜ್ಞಾನದಿಂದಾಗಿ ಮಾನವೀಯ ಮೌಲ್ಯಗಳಲ್ಲಿ ಕುಸಿತ: ಉಮರ್‌ ಯು.ಹೆಚ್. ಕಳವಳ

Date:

ದುಡ್ಡು ಸಂಪಾದನೆಯೇ ಮೂಲ ಉದ್ದೇಶವಾಗುತ್ತಿರುವ ಆಧುನಿಕ ಶಿಕ್ಷಣ ವ್ಯವಸ್ಥೆ ಮತ್ತು ನಾಗಾಲೋಟದಲ್ಲಿ ಸಾಗುತ್ತಿರುವ ಮಾಹಿತಿ ತಂತ್ರಜ್ಞಾನದಿಂದಾಗಿ ವಿದ್ಯಾರ್ಥಿ, ಯುವಜನರಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್‌ ಯು.ಹೆಚ್.‌ ಕಳವಳ ವ್ಯಕ್ತಪಡಿಸಿದರು.

ಅವರು ಇಂದು (ನ. 7) ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಆತೂರಿನ ಆಯಿಶಾ ಹೆಣ್ಮಕ್ಕಳ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಬ್ಯಾರಿ ಸಾಹಿತ್ಯ ಕಮ್ಮಟ ಉದ್ಘಾಟಿಸಿ ಮಾತನಾಡುತ್ತಿದ್ದರು.

ವಿದ್ಯಾ ಕೇಂದ್ರಗಳು ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡುವ ಜೊತೆಗೆ, ವಿದ್ಯಾರ್ಥಿಗಳಲ್ಲಿ ಮಾಹಿತಿ ತಂತ್ರಜ್ಞಾನದ ದುರ್ಬಳಕೆ ತಡೆಯುವ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾದ ಅಗತ್ಯವಿದೆ. ಸಾಮಾಜಿಕ ಸಂಘಟನೆಗಳು ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಯೋಜನೆಗಳನ್ನು ಹಮ್ಮಿಕೊಳ್ಳಬೇಕಾಗಿದೆ ಎಂದು ಉಮರ್‌ ಯು.ಹೆಚ್.‌ ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಖಿಲ ಭಾರತ ಬ್ಯಾರಿ ಪರಿಷತ್‌ನ ಮಹಿಳಾ ಘಟಕದ ಅಧ್ಯಕ್ಷೆ, ಲೇಖಕಿ ಶಮೀಮಾ ಕುತ್ತಾರ್‌ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯೆ, ಕಾರ್ಯಕ್ರಮದ ಸದಸ್ಯ ಸಂಚಾಲಕಿ ಶಮೀರಾ ಜಹಾನ್‌ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.

ಆಯಿಶಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಆಯಿಶಾ ಫರ್ಝಾನಾ, ಸಂಚಾಲಕ ಅಬ್ದುಲ್‌ ಹಸೀಬ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ವಿದ್ಯಾರ್ಥಿನಿಯರಾದ ಶಹದಾ ರಹ್ಫಾ, ಬೀಬಿ ಫಾತಿಮಾ, ಆಯಿಶಾ ಫರ್ಹಾ ಮತ್ತು ಆಯಿಶತ್‌ ಸಫಾ ಬ್ಯಾರಿ ಸ್ತುತಿಗೀತೆ ಹಾಡಿದರು. ಹಲೀಮಾ ತುಹ್ಫಾ ಮತ್ತು ಫಾತಿಮಾ ತಸ್ಕೀನಾ ಕಾರ್ಯಕ್ರಮ ನಿರೂಪಿಸಿದರು. ಉಪ ಪ್ರಾಂಶುಪಾಲೆ ರಮ್ಯ ಎಸ್. ‌ ಧನ್ಯವಾದವಿತ್ತರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...