ಬೀಳಗಿ | ಸಿಎಂ ಸಿದ್ದರಾಮಯ್ಯನವರಿಗೆ ನೋಟಿಸ್ ನೀಡಿದ ರಾಜ್ಯಪಾಲರ ನಡೆ ಖಂಡಿಸಿ ಅಹಿಂದ ಮುಖಂಡರಿಂದ ಪ್ರತಿಭಟನೆ

Date:

ಮೈಸೂರು ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಬಹುತೇಕ ಬಿಜೆಪಿ ಶಾಸಕರು ಭ್ರಷ್ಟಾಚಾರದಲ್ಲಿ ಪಿ ಎಚ್ ಡಿ ಪಡೆದವರು ಎಂದು ಬೀಳಗಿಯಲ್ಲಿ ಅಹಿಂದ ಮುಖಂಡ ಯಲ್ಲಪ್ಪ ಹೆಗಡೆ ಹೇಳಿದರು.

ಅಹಿಂದ ಮುಖಂಡರು ಮತ್ತು ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಬಿಜೆಪಿ ಜೆಡಿಎಸ್ ಮೈಸೂರ್ ಚಲೋ ಪಾದಯಾತ್ರೆ ವಿರೋಧಿಸಿ ಹಾಗೂ ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ರಾಜ್ಯಪಾಲರನ್ನು ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಬಸವೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಕಪ್ಪುಪಟ್ಟಿ ಧರಿಸಿ ಬಿಜೆಪಿ-ಜೆಡಿಎಸ್ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಹಿಂದ ಮುಖಂಡ ಯಲ್ಲಪ್ಪ ಹೆಗಡೆ , “ಚೆಕ್ ಮುಖಾಂತರ ಹಣ ತೆಗೆದುಕೊಂಡು ಜೈಲಿಗೆ ಹೋದವರು, ದೊಡ್ಡ ದೊಡ್ಡ ಶುಗರ್ ಫ್ಯಾಕ್ಟರಿ ಕಟ್ಟಿದವರು, ದೊಡ್ಡ ದೊಡ್ಡ ಶಿಕ್ಷಣ ಸಂಸ್ಥೆಯನ್ನ ತೆಗೆದುಕೊಂಡು ಶಿಕ್ಷಣ ವ್ಯವಸ್ಥೆ ಹಾಳು ಮಾಡಿದವರು, ಭೂ ಮಾಫಿಯಾ ಮಾಡಿದವರು, ಜನರ ಹಣವನ್ನು ಕೊಳ್ಳೆ ಹೊಡೆದವರು ಮೈಸೂರು ಚಲೋ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ” ಎಂದು ಕಿಡಿಕಾರಿದರು.

ಮೈಸೂರು ಚಲೋದಲ್ಲಿ ಭಾಗವಹಿಸಿದ ಬಿಜೆಪಿ ಶಾಸಕರೆ, ಬೀಳಗಿ ಮತಕ್ಷೇತ್ರದಲ್ಲಿ ನಿಮ್ಮ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುತ್ತ ಹೋದರೆ, ದಿನಗಳು ಸಾಲುವುದಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರಿಗೆ ಟಾಂಗ್ ನೀಡಿದರು.

WhatsApp Image 2024 08 12 at 7.08.49 PM 1

ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಚುನಾಯಿತ ಬಹುಮತ ಹೊಂದಿರುವ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ದುರುದ್ದೇಶದಿಂದ ಸಿ ಎಂ ಸಿದ್ದರಾಮಯ್ಯ ನವರಿಗೆ ಕಾನೂನಿನ ಪೂರ್ವಾಪರ ಅಧ್ಯಯನ ಮಾಡದೆ ಶೋಕಾಸ್ ನೋಟಿಸ್‌ ನೀಡಿದ್ದಾರೆ. ಜನಪರ ಆಡಳಿತ ನಡೆಸುತ್ತಿರುವ ಸರ್ಕಾರ ಸಮಗ್ರವಾಗಿ ರಾಜ್ಯದ ಜನರ ಹಿತವನ್ನು ಕಾಪಾಡುತ್ತಿದೆ. ಇಂತಹ ಸಂದರ್ಭದಲ್ಲಿ ಸುಭದ್ರ ಆಡಳಿತ ನಡೆಸುತ್ತಿರುವ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ರಾಜ್ಯಪಾಲರ ಪ್ರಜಾಪ್ರಭುತ್ವದ ವಿರೋಧಿ ನಡೆಯನ್ನು ರಾಷ್ಟ್ರಪತಿಗಳು ಗಮನಿಸಬೇಕಾಗಿದೆ ಎಂದು ಹೇಳಿದರು.

WhatsApp Image 2024 08 12 at 7.07.30 PM

ಕರ್ನಾಟಕ ರಾಜ್ಯದ ಜನರ ಹಿತದೃಷ್ಟಿಯಿಂದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಇವರನ್ನು ರಾಜ್ಯಪಾಲರ ಹುದ್ದೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನಾ ಮನವಿ ಸಲ್ಲಿಸಿಲಾಯಿತು.

ಈ ಪ್ರತಿಭಟನೆಯಲ್ಲಿ ಎಸ್‌ ಟಿ ಪಾಟೀಲ್, ಬಸವಪ್ರಭು ಸರನಾಡಗೌಡರ್, ಪಡಿಯಪ್ಪ ಕರಿಗಾರ, ಎಂ ಬಿ ಸೌದಾಗರ್, ಸಿದ್ದು ಸರಾವರಿ. ಮಹಾದೇವ್ ಹಾದಿಮನಿ, ಕೆಂಪಲಿಂಗನ್ನವರ್, ಇನ್ನೂ ಹಲವಾರು ಅಹಿಂದ ಹಾಗೂ ಸಿದ್ದರಾಮಯ್ಯ ಅಭಿಮಾನಿ ಬಳಗದವರು ಭಾಗವಹಿಸಿದ್ದರು.

ವರದಿ: ಖಾಜಾ ಮೊಯಿನುದ್ದೀನ್. ಸಿಟಿಜನ್ ಜರ್ನಲಿಸ್ಟ್, ಬೀಳಗಿ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...