ಉಡುಪಿ | ದುಷ್ಟ ಶಿಕ್ಷಣೆ ಶಿಷ್ಟ ರಕ್ಷಣೆ ಪೊಲೀಸರ ಕರ್ತವ್ಯವಾಗಲಿ – ಜಯನ್ ಮಲ್ಪೆ

Date:

ಪೊಲೀಸರು ಕಾನೂನು ಸುವ್ಯವಸ್ಥೆಯ ಪಾಲನೆಯ ಹೊಣೆ ಹೊತ್ತ ಸರ್ಕಾರದ ಕೈಕಾಲುಗಳು, ನ್ಯಾಯವ್ಯವಸ್ಥೆ ಅನಿವಾರ್ಯ ಅಂಗ. ದುಷ್ಟ ಶಿಕ್ಷಣೆ ಶಿಷ್ಟ ರಕ್ಷಣೆ ಪೊಲೀಸರ ಕರ್ತವ್ಯವಾಗಲಿ ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದರು.

ಅವರು ಸೋಮವಾರ ಅಂಬೇಡ್ಕರ್ ಯುವಸೇನೆಯ ನೇತ್ರತ್ವದಲ್ಲಿ ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಧಿಕಾರಿ ಹರಿರಾಂ ಶಂಕರ್‌ನ್ನು ಸ್ವಾಗತಿಸಿ ಮಾತನಾಡುತ್ತಾ, ಜಿಲ್ಲೆಯಲ್ಲಿ ದಲಿತ ದೌರ್ಜನ್ಯ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿ, ದಲಿತರ ಮೇಲೆ ದಬ್ಬಾಳಿಕೆ ಮಾಡುವವರ ಕೈಯಲ್ಲಿ ರಾಜಕೀಯ ಅಧಿಕಾರವಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸದೆ ಜಾಮೀನು ಪಡೆಯುವಲ್ಲಿ ತನಿಖಾಧಿಕಾರಿಗಳೇ ಸಹಕರಿಸುತ್ತಿರುವುದು ಕಾರಣವಾಗಿದೆ ಎಂದ ಅವರು ದೌರ್ಜನ್ಯಕ್ಕೆ ಒಳಗಾದ ದಲಿತ ಹೆಣ್ಣು ಮಕ್ಕಳ ಹೆಸರನ್ನು ಮಾಧ್ಯಮದಲ್ಲಿ ಪ್ರಕಟಿಸದಂತೆ ಮನವಿಮಾಡಿದರು.

ನಿಯೋಗದಲ್ಲಿ ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ, ಕೃಷ್ಣ ಬಂಗೇರ ಪಡುಬಿದ್ರಿ, ಹರೀಶ್ ಸಲ್ಯಾನ್, ವಸಂತ ಪಾದೆಬೆಟ್ಟು, ಸಂಜೀವ ಬಳ್ಕೂರ್, ರವಿರಾಜ್, ಸುಜೀತ್ ಕಂಚಿನಡ್ಕ, ದಯಾಕರ್ ಮಲ್ಪೆ, ಸುಶೀಲ್ ಕೊಡವೂರು, ಸಾಧು ಚಿಟ್ಪಾಡಿ, ಅರುಣ್ ಸಲ್ಯಾನ್, ಭಗವಾನ್ ಮಲ್ಪೆ, ಸಂತೋಷ್ ಕಪ್ಪೆಟ್ಟು, ದೀಪಕ್ ಕೊಡವೂರು ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...