ಬೀದರ್‌ | ಉತ್ತಮ ಕವಿಯಾಗಲು ಬದ್ಧತೆ ಮತ್ತು ವಿಶ್ವಾಸ ಅಗತ್ಯ : ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು

Date:

ಕವಿ, ಬರಹಗಾರನಿಗೆ ಬದ್ಧತೆ ಮತ್ತು ಬರವಣಿಗೆಯ ಮೇಲೆ ವಿಶ್ವಾಸವಿದ್ದಾಗ ಮಾತ್ರ ಉತ್ತಮ ಕವಿಯಾಗಬಲ್ಲ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ನುಡಿದರು.

ಕಮಲನಗರ ಪಟ್ಟಣದ ಸಿದ್ಧರಾಮೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಬುಧವಾರ ಆಯೋಜಿಸಿದ್ದ ಸಾಹಿತಿ ಮಲ್ಲಿಕಾರ್ಜುನ ಮಾಲಿ ಪಾಟೀಲ್ ರಚಿಸಿದ ʼಚಲನಶೀಲʼ ಕವನ ಸಂಕಲನ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

“ಸಾಹಿತಿಗೆ ಬರವಣಿಗೆ ನಿತ್ಯಕರ್ಮವಾಗಬೇಕು. ಬದ್ಧತೆ ಇಟ್ಟುಕೊಂಡವರೇ ನಿಜವಾದ ಸಾಹಿತಿಗಳು. ಬರಹಗಾರ ಮೊದಲು ತನ್ನನ್ನು ತಾನು ವಿಮರ್ಶೆ ಮಾಡಿಕೊಳ್ಳಬೇಕು. ಎಲ್ಲಿಯವರೆಗೆ ಅಧ್ಯಯನಶೀಲ, ಸಂವೇದನಾಶೀಲರು ಆಗುವುದಿಲ್ಲವೋ ಅಲ್ಲಿಯವರೆಗೆ ಪರಿಪೂರ್ಣತೆ ಪಡೆಯಲಾರ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲಬರ್ಗಾ ಸಂಸ್ಥಾನ ಮಠದ ಹಾವಗಿಲಿಂಗೇಶ್ವರ ಶಿವಾಚಾರ್ಯರು ಮಾತನಾಡಿ, “ಸಾಹಿತಿ ಮಲ್ಲಿಕಾರ್ಜುನ ಮಾಲಿ ಪಾಟೀಲ್ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ನಂತರ ಗ್ರಂಥಪಾಲಕರಾಗಿ ಸೇವೆ ಮುಂದುವರಿಸಿ, ಇದೀಗ ಅದ್ಭುತವಾದ ಕವನಗಳನ್ನು ರಚಿಸಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ” ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಭಾಲ್ಕಿಯ ನಿವೃತ್ತ ಪ್ರಾಧ್ಯಾಪಕ ಪ್ರೊ.ಚಂದ್ರಶೇಖರ ಬಿರಾದಾರ ಕೃತಿ ಪರಿಚಯ ಮಾಡಿದರು. ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಪ್ರೊ.ಶಂಭುಲಿಂಗ ಕಾಮಣ್ಣ, ಸಾಹಿತಿ ಸಂಗಮೇಶ ಮುರ್ಕೆ ಮಾತನಾಡಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ದಿಲ್ಲಿ ಚಲೋ ಮತ್ತು ಬಿಜೆಪಿಯ ಭಂಡತನ

ಭಾಲ್ಕಿ ಹಿರೇಮಠದ ಬಸವಲಿಂಗ ಸ್ವಾಮೀಜಿ, ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ, ತಾಪಂ ಇಒ ಮಾಣಿಕರಾವ ಪಾಟೀಲ್, ಎಡಿ ಹಣಮಂತರಾಯ ಕೌಟಗೆ, ಕಸಾಪ ಜಿಲ್ಲಾ ಕೋಶಾಧ್ಯಕ್ಷ ಶಿವಶಂಕರ ಟೋಕರೆ,
ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಮಾಣಿಕಪ್ಪಾ ಗೊರನಾಳೆ, ಪ್ರೊ.ಎಸ್.ಎನ್.ಶಿವಣಕರ, ಪ್ರಾಚಾರ್ಯ ಓಂಕಾಂತ ಪಾಟೀಲ್, ಬಸವರಾಜ ಪಾಟೀಲ್, ಪ್ರಕಾಶ ಮಾನಕರಿ, ಚಂದ್ರಕಾಂತ ಸಂಗಮೆ, ಶ್ರೀರಂಗ
ಪರಿಹಾರ, ಶಿವಕುಮಾರ ಧರಣೆ, ಯಶವಂತ ಬಿರಾದಾರ, ಧನರಾಜ ಭವರಾ, ಸಾಯಿನಾಥ ಕಾಂಬಳೆ, ಸಂತೋಷ ಸುಲಾಕೆ, ಪ್ರಶಾಂತ ಖಾನಾಪುರೆ, ಜನಾರ್ದನ ಸಾವರ್ಗೇಕರ್, ಸಂತೋಷ ಸುಲಾಕೆ ಇತರರಿದ್ದರು. ಸಾಕ್ಷಿ ಖಾನಾಪುರೆ ಪ್ರಾರ್ಥನೆ ಗೀತೆ ಹಾಡಿದರು. ಕಸಾಪ ತಾಲೂಕು ಅಧ್ಯಕ್ಷ ಪ್ರಶಾಂತ ಮಠಪತಿ ಸ್ವಾಗತಿಸಿದರು. ಡಾ.ಶ್ರೀನಿವಾಸ ಬೇಂದ್ರೆ ವಂದಿಸಿದರು. ಪ್ರಾಂಶುಪಾಲ ಶಿವಾಜಿ ಆರ್.ಎಚ್ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...