ಮಹಿಳೆ ಎನ್ನುವುದಕ್ಕೆ ನನಗೆ ಸರ್ಟಿಫಿಕೇಟ್ ಬೇಕಿಲ್ಲ, ಪಾಸ್ ಕೇಳುವ ಕ್ರಮ ಸರಿಯಲ್ಲ: ಶೋಭಾ ಕರಂದ್ಲಾಜೆ ಕಿಡಿ

Date:

  • ಗ್ಯಾರಂಟಿ ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್‌ ವಿರುದ್ಧ ಶೋಭಾ ವಾಗ್ದಾಳಿ
  • ‘ಚುನಾವಣೆ ವೇಳೆ ಸುಳ್ಳು ಆಶ್ವಾಸನೆ ನೀಡಿ, ಈಗ ಈಡೇರಿಸಲು ಹೆಣಗುತ್ತಿದ್ದಾರೆ’

ರಾಜ್ಯ ಸರ್ಕಾರ ಬೇಜವಾಬ್ದಾರಿಯಿಂದ ಕೂಡಿರುವ ಸರ್ಕಾರ. ಚುನಾವಣೆಯಲ್ಲಿ ಗೆಲ್ಲುವ ಸಲುವಾಗಿ ಸುಳ್ಳು ಆಶ್ವಾಸನೆ ನೀಡಿ, ಈಗ ಐದು ಗ್ಯಾರಂಟಿ ಈಡೇರಿಸಲು ಹೆಣಗುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, “ಮಹಿಳೆಯರು ಖುಷಿಯಿಂದ ಪ್ರಯಾಣಿಸುತ್ತಿದ್ದಾರೆ. ಬಸ್‌ನಲ್ಲಿ ಪ್ರಯಾಣಿಸಲು ಪಾಸ್ ಕೇಳುತ್ತಿರುವ ಕ್ರಮ ಸರಿಯಲ್ಲ. ನಾನು ಮಹಿಳೆ ಎನ್ನುವುದಕ್ಕೆ ನನಗೆ ಸರ್ಟಿಫಿಕೇಟ್ ಬೇಕಿಲ್ಲ” ಎಂದರು.

“ಒಬ್ಬ ಮರ್ಯಾದೆ ಇಲ್ಲದ, ಬೇಜವಾಬ್ದಾರಿ ಮುಖ್ಯಮಂತ್ರಿಗಳಂತೆ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಕಿ ಕೊಡುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಕೇಂದ್ರದಲ್ಲಿ ಬಫರ್ ಸ್ಟಾಕ್ ಇರುವುದು ದೇಶಕ್ಕೆ ಆಪತ್ತು ಬಂದಾಗ ಉಪಯೋಗಿಸಲು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಡಳಿತ ನೀಡಲು ಯೋಗ್ಯತೆಯಿಲ್ಲದೇ ಪ್ರತಿ ವಿಚಾರಕ್ಕೂ ಮೋದಿ, ಕೇಂದ್ರದ ಕಡೆ ಬೊಟ್ಟು ತೋರಿಸಬೇಡಿ. ಕೇಂದ್ರ ಕೊಡುತ್ತಿರುವ ಐದು ಕೆಜಿ ಸೇರಿಸಿ ಹತ್ತು ಕೆಜಿ ಹೇಳಬೇಡಿ, ನಿಮ್ಮದಷ್ಟೇ ಹತ್ತು ಕೆಜಿ ಹೇಳಿ. ರಾಜ್ಯದಲ್ಲಿ ವಿದ್ಯುತ್ ‌ಬಿಲ್ ಹೆಚ್ಚಾಗಿದೆ. ಅರಾಜಕತೆ ತುಂಬಿದೆ. ಈ ಬಗ್ಗೆ ಮಾತನಾಡಿ” ಎಂದು ವಾಗ್ದಾಳಿ ನಡೆಸಿದರು.‌

ಈ ಸುದ್ದಿ ಓದಿದ್ದೀರಾ? ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪನೆ; ಕೇಂದ್ರ ಸಚಿವರನ್ನು ಭೇಟಿಯಾದ ರಾಜ್ಯದ ಜವಳಿ ಖಾತೆ ಸಚಿವ

“ಗ್ಯಾರಂಟಿ ಯೋಜನೆ ಘೋಷಣೆ ಮಾಡಿದಾಗಲೇ ನಾವು ಅವತ್ತೇ ನಿಮ್ಮನ್ನು ಕೇಳಿದ್ವಿ. ಇವುಗಳಿಗೆಲ್ಲ ಹಣ ಎಲ್ಲಿಂದ ತರುತ್ತೀರಿ ಎಂದು. ಆದರೆ, ಇವತ್ತು ಅಕ್ಕಿ, ದುಡ್ಡು, ವಿದ್ಯುತ್ ಎಲ್ಲದಕ್ಕೂ ಮೋದಿ ಕಡೆ ಬೆರಳು ಮಾಡಿ ತೋರಿಸುತ್ತಿದ್ದೀರಿ. ಯಾರಿಗೆ ಮೋಸ ಮಾಡಲು, ಯಾರ ಮೂಗಿಗೆ ತುಪ್ಪ ಸವರಲು ಯೋಜನೆಗಳನ್ನು ಘೋಷಣೆ ಮಾಡಿದ್ದೀರಾ?” ಎಂದು ಕುಟುಕಿದರು.

ಸುಮ್ಮನೇ ಹುಚ್ಚರ ರೀತಿ ಮಾತನಾಡಬೇಡಿ: ಪ್ರಲ್ಹಾದ್ ಜೋಶಿ

ಗೃಹಜ್ಯೋತಿ ಅರ್ಜಿ ಸಲ್ಲಿಕೆಯ ವೇಳೆ ಸರ್ವರ್ ಹ್ಯಾಂಗ್ ಆಗುತ್ತಿರುವುದರ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿದೆ ಎಂದು ಸತೀಶ್ ಜಾರಕಿಹೊಳಿ ಆರೋಪಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, “ಸುಮ್ಮನೇ ಹುಚ್ಚರ ರೀತಿ ಮಾತನಾಡಬೇಡಿ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...